HOME » NEWS » State » IF BJP GOVERNMENT GAVE LICENSE TO BANK OFFICIAL FOR BORROWING DEBT AMOUNT FROM FARMERS WHATS SAYS SIDDARAMAIAH MAK

ರೈತರಿಂದ ಬಲವಂತ ಸಾಲ ವಸೂಲಿಗೆ ಬಿಜೆಪಿ ಪರವಾನಗಿ ನೀಡುತ್ತಿದೆಯೇ?; ಸರ್ಕಾರದ ನಡೆಗೆ ಸಿದ್ದರಾಮಯ್ಯ ಗರಂ

ಸರ್ಕಾರದ ಈ ನಡೆಯನ್ನು ಸರಣಿ ಟ್ವಿಟ್ ಮಾಡುವ ಮೂಲಕ ತೀವ್ರವಾಗಿ ಖಂಡಿಸಿರುವ ಮಾಜಿ ಸಿದ್ದರಾಮಯ್ಯ ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಬಿಜೆಪಿ ಎಲ್ಲಾ ಬ್ಯಾಂಕುಗಳಿಗೆ ಪರವಾನಗಿ ನೀಡುತ್ತಿದೆಯೇ? ಎಂದು ಕಟುವಾಗಿ ಟೀಕಿಸಿದ್ದಾರೆ.

news18-kannada
Updated:January 21, 2020, 8:39 PM IST
ರೈತರಿಂದ ಬಲವಂತ ಸಾಲ ವಸೂಲಿಗೆ ಬಿಜೆಪಿ ಪರವಾನಗಿ ನೀಡುತ್ತಿದೆಯೇ?; ಸರ್ಕಾರದ ನಡೆಗೆ ಸಿದ್ದರಾಮಯ್ಯ ಗರಂ
ಸಿದ್ದರಾಮಯ್ಯ ಹಾಗೂ ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು (ಜನವರಿ 21); ಬ್ಯಾಂಕುಗಳು ರೈತರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲಾತಿ ಮಾಡಬಾರದು ಎಂದು ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಎಲ್ಲಾ ಸಹಕಾರಿ ಸಂಘಗಳಿಗೆ ಸುತ್ತೋಲೆ ಹೊರಡಿಸಿತ್ತು. ಅಲ್ಲದೆ, ಋಣಮುಕ್ತ ಕಾನೂನನ್ನು ಜಾರಿಗೆ ತರುವ ಮೂಲಕ ಖಾಸಗಿ ವ್ಯಕ್ತಿಗಳ ಸಾಲದಿಂದಲೂ ರೈತರಿಗೆ ಮುಕ್ತಿ ನೀಡಿತ್ತು.

ಆದರೆ, ಈ ಕುರಿತು ಇಂದು ನೂತನ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಕೃಷಿ ಸಾಲಗಳಿಗೆ ಸಂಬಂಧಿಸಿದಂತೆ ಸರ್ಕಾರ ವಿಧಿಸಿದ ನಿರ್ಬಂಧಗಳನ್ನು ಹಿಂಪಡೆಯುತ್ತಿರುವುದಾಗಿ ತಿಳಿಸಿದೆ. ಈ ಮೂಲಕ ರೈತರಿಗೆ ಬಹುದೊಡ್ಡ ಆಘಾತ ನೀಡಿದೆ.

ಸರ್ಕಾರದ ಈ ನಡೆಯನ್ನು ಸರಣಿ ಟ್ವಿಟ್ ಮಾಡುವ ಮೂಲಕ ತೀವ್ರವಾಗಿ ಖಂಡಿಸಿರುವ ಮಾಜಿ ಸಿದ್ದರಾಮಯ್ಯ ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಬಿಜೆಪಿ ಎಲ್ಲಾ ಬ್ಯಾಂಕುಗಳಿಗೆ ಪರವಾನಗಿ ನೀಡುತ್ತಿದೆಯೇ? ಎಂದು ಕಟುವಾಗಿ ಟೀಕಿಸಿದ್ದಾರೆ.ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, “ಬರಪೀಡಿತ ತಾಲ್ಲೂಕುಗಳಲ್ಲಿ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ನಮ್ಮಸರ್ಕಾರ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದು ಖಂಡನೀಯ. ಈ ಮೂಲಕ ಬಲವಂತದ ಸಾಲ ವಸೂಲಿಗೆ ಪರವಾನಿಗೆ ನೀಡಿರುವ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವಿಟ್​ನಲ್ಲಿ “ರಾಜ್ಯದ ಹದಿನೈದು ಜಿಲ್ಲೆಯ 55 ತಾಲ್ಲೂಕುಗಳು ಅತಿವೃಷ್ಟಿಗೆ ತುತ್ತಾಗಿ ರೈತರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಅವರಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರವನ್ನು ಇನ್ನೂ ನೀಡದಿರುವ ಸರ್ಕಾರ ಈಗ ಬಲಾತ್ಕಾರದಿಂದ ಬಾಕಿ ಸಾಲ ವಸೂಲಿ ಮಾಡಲು ಹೊರಟಿರುವುದು ಅಮಾನವೀಯ ನಡೆ” ಎಂದು ಕಿಡಿಕಾರಿದ್ದಾರೆ.“ಬಿಜೆಪಿ ಸರ್ಕಾರದ ರೈತ ವಿರೋಧಿ ನಿಲುವು ಅನಿರೀಕ್ಷಿತವಾದುದೇನಲ್ಲ, ರೈತರ ಪರ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೇ ರೈತರನ್ನು ಗುಂಡಿಕ್ಕಿ ಸಾಯಿಸಿದ ಪಕ್ಷದ ನಿಜಬಣ್ಣ ನಿಧಾನವಾಗಿ ಈಗ ಬಯಲಾಗುತ್ತಿದೆ” ಎಂದು ಗುಡುಗಿರುವ ಸಿದ್ದರಾಮಯ್ಯ, “ಅತಿವೃಷ್ಟಿ ಮತ್ತು ಅನಾವೃಷ್ಟಿ ಪೀಡಿತ ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡುವ ದುಸ್ಸಾಹಸವನ್ನು ತಕ್ಷಣ ನಿಲ್ಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ರೈತರ ಜೊತೆ ನಮ್ಮ ಪಕ್ಷ ಕೂಡಾ ಬೀದಿಗಿಳಿಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು; ಹೂಡಿಕೆದಾರರಿಗೆ ಮುಖ್ಯಮಂತ್ರಿ ಮನವಿ
First published: January 21, 2020, 8:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories