HOME » NEWS » State » IF BS YEDIYURAPPA IS CONVINCED OF FARM BILLS LET HIM GO FOR EARLY ELECTIONS ASKS SIDDARAMAIAH SNVS

Karnataka Bandh - ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು

ಕೃಷಿ ಮಸೂದೆಗಳು ರೈತರಿಗೆ ಒಳ್ಳೆಯದು ಎಂಬ ಅಭಿಪ್ರಾಯ ಯಡಿಯೂರಪ್ಪಗೆ ಇದ್ದರೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

news18-kannada
Updated:September 28, 2020, 12:57 PM IST
Karnataka Bandh - ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು
ಸಿದ್ದರಾಮಯ್ಯ
  • Share this:
ಬೆಂಗಳೂರು(ಸೆ. 28): ಸರ್ಕಾರದ ಕೃಷಿ ಮಸೂದೆಗಳು ರೈತ ವಿರೋಧಿಯಾಗಿವೆ. ಭೂ ಸುಧಾರಣೆ ಮತ್ತು ಎಪಿಎಂಎಸಿ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರಲಿಲ್ಲ. ಇವನ್ನ ಜಾರಿಗೆ ತರುವ ಯಾವ ನೈತಿಕತೆಯೂ ಅದಕ್ಕೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣ ಆಗುತ್ತದೆ ಎಂಬ ಭರವಸೆ ಸರ್ಕಾರಕ್ಕೆ ಇದ್ದರೆ ಮೊದಲು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಧರಣಿ ಆರಂಭಿಸಿದ ಸಿದ್ದರಾಮಯ್ಯ ಈ ವೇಳೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ವಿಧಾನಸಭೆ ವಿಸರ್ಜನೆಗೆ ಆಗ್ರಹಿಸಿದ್ದಾರೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ಈ ಕಾಯ್ದೆ ಜಾರಿಗೆ ತಂದರೆ ರೈತರು ಬೀದಿಗೆ ಬರಲಾರರು ಎಂಬ ಭ್ರಮೆ ನಿಮಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಷಾಮೀಲಾಗಿ ರೈತ ವಿರೋಧಿ ಮಸೂದೆಗಳನ್ನ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿವೆ. ಆದರೆ, ಇಂದು ಇಡೀ ದೇಶದ ರೈತರು ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಇಳಿದು ಹೋರಾಟ ಮಾಡಿದ್ದಾರೆ. ಈ ಮೂಲಕ ಬಿಜೆಪಿಯ ಹುನ್ನಾರವನ್ನು ವಿಫಲಗೊಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಯಲ್ಲಿ ರೈತರಿಗೆ ಅನ್ಯಾಯವಾಗಿರುವುದಾದರೂ ಏನು?: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಯಡಿಯೂರಪ್ಪ ಮಾತುಮಾತಿಗೂ ತಾನು ರೈತ ನಾಯಕನೆಂದು ಹೇಳುತ್ತಾರೆ. ಸಂಘ ಪರಿವಾರದ ಕೇಸರಿಶಾಲು ಕಿತ್ತುಹಾಕಿ ಹಸಿರುಶಾಲು ಹಾಕಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ, ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ಅವರ ರೈತ ವಿರೋಧಿ ಮನೋಭಾವ ಹೊರಬಂದಿದೆ ಎಂದು ಮುಖ್ಯಮಂತ್ರಿಗಳನ್ನ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

“ಯಡಿಯೂರಪ್ಪ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ರಸಗೊಬ್ಬರ ಕೇಳಿದ ರೈತರನ್ನ ಗುಂಡಿಟ್ಟು ಸಾಯಿಸಿದರು. ಈ ಬಾರಿ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದಾರೆ. ರೈತರ ಕಣ್ಣಿರ ಶಾಪ ಪಕ್ಷ ಹಾಗೂ ಸರ್ಕಾರಕ್ಕೆ ತಟ್ಟಲಿದೆ.

“ಬಿಜೆಪಿ ಹುಟ್ಟಿನಿಂದಲೇ ರೈತ ವಿರೋಧಿ ಪಕ್ಷ. ಬಂಡವಾಳಿಗರು, ಉದ್ಯಮಿಗಳು ಹಾಗು ವರ್ತಕರ ಬೆಂಬಲಕ್ಕೆ ಅದು ನಿಂತಿದೆ. ಬಿಜೆಪಿ ಡಿಎನ್​ಎಯಲ್ಲೇ ರೈತ ವಿರೋಧಿ ವಿಚಾರ ಇದೆ” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ; ರಸ್ತೆಗಿಳಿದ ರೈತರು, ಕಾರ್ಮಿಕರು, ಕನ್ನಡಪರ ಹೋರಾಟಗಾರರುಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕರ್ನಾಟಕಕ್ಕೆ ಅನ್ಯಾಯ ಹೆಚ್ಚಾಗಿದೆ. ಕಾವೇರಿ-ಕೃಷ್ಣಾ ನದಿ ನೀರು ಹಂಚಿಕೆಯಲ್ಲಿ ದ್ರೋಹವಾಗಿದೆ. ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸವಾಗಿದೆ. ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರಿಗೆ ತೊಂದರೆ ಕೊಡುತ್ತಿದೆ. ರೈತರ ಮೇಲೆ ಬಿಜೆಪಿಗೆ ಯಾಕೆ ಸೇಡಿನ ಭಾವನೆ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಯಡಿಯೂರಪ್ಪನವರೆ, ನೀವು ರೈತ ಸಮುದಾಯದ ಎದುರು ಬೆತ್ತಲಾಗಿದ್ದೀರಿ. ನೀವು ಹಾಕಿಕೊಳ್ಳುವ ಹಸಿರು ಶಾಲು ಕೂಡ ನಿಮ್ಮ ಮಾನ ಮುಚ್ಚಲಾರದು. ಯಡಿಯೂರಪ್ಪ ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಬೇಕು. ದೇಶವನ್ನು ಕಾರ್ಪೊರೇಟ್ ಕುಳಗಳು ಹಾಗೂ ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ನೀವು ಕುಣಿಯಬೇಡಿ. ಯಡಿಯೂರಪ್ಪನವರೆ, ಇತಿಹಾಸ ಕೂಡ ನಿಮ್ಮನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ. ಆತ್ಮಸಾಕ್ಷಿಗೆ ಓಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ ನೀಡಿದ್ಧಾರೆ.

ವರದಿ: ಸಂಜಯ್ ಎಂ ಹುಣಸನಹಳ್ಳಿ
Published by: Vijayasarthy SN
First published: September 28, 2020, 12:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories