ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಸೇರಿರುವ ಮುಖಂಡರನ್ನು ಮತ್ತೆ ಪಕ್ಷಕ್ಕೆ ವಾಪಸ್ ಕರೆತರುಲು ಭರ್ಜರಿ ತಯಾರಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅದಕ್ಕಾಗಿಯೇ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ.
ಸಮಿತಿ ರಚನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಬಹಳ ಜನ ನಮ್ಮಪಕ್ಷ ಬಿಟ್ಟು ಹೋಗಿದ್ದಾರೆ. ಬಿಟ್ಟು ಹೋದ ಹಲವರು ನನ್ನನ್ನ ಭೇಟಿ ಮಾಡಿದ್ದಾರೆ. ಪಕ್ಷಕ್ಕೆ ವಾಪಸ್ ಬರುವ ಬಗ್ಗೆ ಹೇಳಿದ್ದಾರೆ. ಹೀಗಾಗಿ ಪಕ್ಷದಿಂದ ಸಮಿತಿ ರಚನೆ ಮಾಡಿದ್ದೇವೆ. ಅಲ್ಲಂ ವೀರಭದ್ರಪ್ಪ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಅವರು ಈ ಬಗ್ಗೆ ಪರಿಶೀಲನೆ ಮಾಡ್ತಾರೆ ಎಂದು ಹೇಳಿದರು.
ಜಿಲ್ಲಾ, ಬ್ಲಾಕ್ ಮಟ್ಟದಲ್ಲಿ ಎಲ್ಲಾ ಮಾತನಾಡುತ್ತಾರೆ. ಬಂದವರನ್ನೆಲ್ಲ ಸುಮ್ಮನೆ ಸೇರಿಸಿಕೊಳ್ಳೋಕೆ ಆಗಲ್ಲ. ಜಿಲ್ಲಾ, ಬ್ಲಾಕ್ ಮಟ್ಟದಲ್ಲೂ ಎಲ್ಲರ ಅಭಿಪ್ರಾಯ ಪಡೆಯಬೇಕು. ಎಲ್ಲರ ಜೊತೆ ಚರ್ಚೆ ಮಾಡಬೇಕು. ಈ ಬಗ್ಗೆ ನನಗೂ ಸಾಕಷ್ಟು ರಾಜಕೀಯ ಅನುಭವವಾಗಿದೆ. ಬರುವವರು ನಮ್ಮ ಪಕ್ಷದ ಸಿದ್ಧಾಂತ ಒಪ್ಪಬೇಕು. ಅದಕ್ಕೆ ವಿಶ್ವಾಸಕ್ಕೆ ತೆಗೆದುಕೊಂಡು ಸೇರಿಸಿಕೊಳ್ಳಬೇಕು. ಹೀಗಾಗಿ ಸಮಿತಿಯನ್ನು ರಚನೆ ಮಾಡಿದ್ದೇವೆ ಎಂದು ತಿಳಿಸಿದರು.
ಇದನ್ನು ಓದಿ: ಕಾಂಗ್ರೆಸ್ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು ಕೆಪಿಸಿಸಿಯಿಂದ ಹೊಸ ಸಮಿತಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ