Bitcoin Scam: ಬಿಟ್ ಕಾಯಿನ್ ಆರೋಪಿ ಜೀವಕ್ಕೆ ಅಪಾಯ ಇದ್ದರೆ ಸರಕಾರ ರಕ್ಷಣೆ ಕೊಡಲಿ; ಎಚ್.ಡಿ.ಕುಮಾರಸ್ವಾಮಿ

ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ ನಾನು ಮಾಡಿದ್ದು. ಇದರಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ಗ್ರಾಮ ವಾಸ್ತವ್ಯ ಮಾಡಲಿಲ್ಲ ಎಂದು ಹಂಸಲೇಖ ಅವರಿಗೆ ತಿರುಗೇಟು ನೀಡಿದರು.

ಎಚ್​.ಡಿ ಕುಮಾರಸ್ವಾಮಿ.

ಎಚ್​.ಡಿ ಕುಮಾರಸ್ವಾಮಿ.

 • Share this:
  ಬೆಂಗಳೂರು: ಬಿಟ್ ಕಾಯಿನ್ ಹಗರಣ (Bitcoin Scam) ಪ್ರಕರಣವನ್ನು ಇಡಿಗೆ (ED ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ.  ಏಳೆಂಟು ಬಾರಿ ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ (Bitcoin Mastermind Shreeki) ಅಲಿಯಾಸ್ ಶ್ರೀಕೃಷ್ಣನ್ನು ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರಿಕಿ‌ ಮಾಡಿದ್ದಾನೆ ಎನ್ನಲಾಗಿದೆ. ಸರ್ಕಾರ (BJP Government) ಇದರ ಬಗ್ಗೆ ನುರಿತ ತಜ್ಞರಿಂದ ಮಾಹಿತಿ ಪಡೆದು ತನಿಖೆ ಮಾಡಬೇಕು. ಇಷ್ಟು ವರ್ಷ ಅವನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಗೆ ಅಂದರೆ ಹೇಗೆ? ಕಾಂಗ್ರೆಸ್​ಗೆ ಈ ಬಗ್ಗೆ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ ಬೇಡ ಅಂದವರು ಯಾರು..? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (Former CM HD Kumaraswamy) ಅವರು ಹೇಳಿದರು.

  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ‌ರಿಂದ ಅವಹೇಳನಕಾರಿ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದರು. ಆ ವಿಚಾರಗಳ ಬಗ್ಗೆ ಚರ್ಚೆ ಮಾಡೋದು ಅಗತ್ಯ ಇರಲಿಲ್ಲ. ಯಾರೇ ಆಗಲಿ ಧಾರ್ಮಿಕ ವಿಚಾರಗಳ ಬಗ್ಗೆ ಹೀಗೆ ಮಾತನಾಡೋದು ಸರಿಯಲ್ಲ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ ನಾನು ಮಾಡಿದ್ದು. ಇದರಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ಗ್ರಾಮ ವಾಸ್ತವ್ಯ ಮಾಡಲಿಲ್ಲ ಎಂದು ಹಂಸಲೇಖ (Music Director Hamsalekha) ಅವರಿಗೆ ಎಚ್​ಡಿಕೆ ತಿರುಗೇಟು ನೀಡಿದರು.

  ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಕುಮಾರಸ್ವಾಮಿ ಅವರು ಸರಕಾರಕ್ಕೆ ಸಲಹೆ ಮಾಡಿದರು.

  ಆರೋಪಿ ಶ್ರೀಕಿ ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯ ಮಾಡಿದ್ದರಲ್ಲಾ ಎಂದು ಗಮನ ಸೆಳೆದಾಗ ಹೆಚ್ ಡಿಕೆ ಅವರು ಉತ್ತರ ನೀಡಿದ್ದು ಹೀಗೆ; "ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು?" ಎಂದರು ಮಾಜಿ ಮುಖ್ಯಮಂತ್ರಿಗಳು.

   ಇದನ್ನು ಓದಿ: Bitcoin Scandal: ಹ್ಯಾಕರ್ ಶ್ರೀಕಿಯ ಎನ್ ಕೌಂಟರ್ ಮಾಡುವ ಸಾಧ್ಯತೆ: Congress ಗಂಭೀರ ಆರೋಪ

  ನನ್ನ ಗ್ರಾಮ ವಾಸ್ತವ್ಯಕ್ಕೆ ಗಾಂಧಿ ಸ್ಪೂರ್ತಿ

  ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು; "ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದು" ಎಂದರು.

  ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ ಎಂದ ಅವರು; ಆ ವಿಚಾರಗಳ ಬಗ್ಗೆ ಚರ್ಚೆ ಮಾತನಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದರು.
  Published by:HR Ramesh
  First published: