ಬೆಂಗಳೂರು(ಡಿ.05): ಐಎಂಎ ಬಹಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಿನ್ನೆಯಷ್ಟೇ ವಾದ-ಪ್ರತಿವಾದ ಮುಕ್ತಾಯವಾಗಿತ್ತು. ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ಸಿಬಿಐ ಕೋರ್ಟ್, ರೋಷನ್ ಬೇಗ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ತೀರ್ಪು ಹೊರಡಿಸಿದೆ. ಆ ಮೂಲಕ ಮಾಜಿ ಸಚಿವರಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಿಬಿಐ ತನಿಖೆಗೆ ಸಹಕರಿಸಬೇಕು. ಯಾವುದೇ ಸಾಕ್ಷಿಗಳನ್ನು ನಾಶಪಡಿಸುವಂತಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯವು ರೋಷನ್ ಬೇಗ್ಗೆ ಆದೇಶಿಸಿದೆ.
ಐಎಂಎ ಬಹಕೋಟಿ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಪರ ಹಿರಿಯ ವಕೀಲ ಶಶಿಕಿರಣ್ ವಾದ ಮಂಡಿಸಿದ್ದರು. 2018ರ ಆರೋಪವನ್ನು ಆಧರಿಸಿ ಈಗ ರೋಷನ್ ಬೇಗ್ ಅವರನ್ನು ಬಂಧಿಸಲಾಗಿದೆ ಎಂದು ಬೇಗ್ ಪರ ವಕೀಲರು ಆರೋಪಿಸಿದ್ದರು. ಜೊತೆಗೆ ರೋಷನ್ ಬೇಗ್ ಅವರು ಸಿಬಿಐ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹುರುಳಿಲ್ಲ ಎಂದು ವಾದ ಮಂಡಿಸಿದ್ದರು.
Karnataka Bandh LIVE: ಬಸ್ಸಿನ ಗಾಜು ಪುಡಿ ಮಾಡಿದ ಪ್ರತಿಭಟನಾಕಾರರು; ವಾಟಾಳ್ ನಾಗರಾಜ್ ಬಂಧನ
ಇನ್ನು, ಪ್ರಕರಣ ಸಂಬಂಧ 36 ಆರೋಪಿಗಳ ಪೈಕಿ 35 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ರೋಷನ್ ಬೇಗ್ ಅವರಿಗೆ ಅನಾರೋಗ್ಯ ಸಮಸ್ಯೆ ಇದೆ. ಈ ಹಿನ್ನೆಲೆ ರೋಷನ್ ಪರ ವಕೀಲರು ಜಾಮೀನು ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ