Karnataka Weather Today: ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ? ನ.5ಕ್ಕೆ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 5ರಂದು ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು  ಗ್ರಾಮಾಂತರ, ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಕೊಡಗು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಮಳೆಯಾಗುವ (Bengaluru Rainfall) ಸಾಧ್ಯತೆಗಳಿವೆ. ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯ ಸಣ್ಣ ಸಿಂಚನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು (Bengaluru Weather) ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ (Uttara Kannada, Dakshina Kannada And Udupi) ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ  ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಸಹ ಮೋಡ ಮತ್ತು ಸೂರ್ಯನ ನಡುವೆ ಈ ಆಟ ನಡೆಯಲಿದೆ.

ನವೆಂಬರ್ 5ರಂದು ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 5ರಂದು ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು  ಗ್ರಾಮಾಂತರ, ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಕೊಡಗು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.

ಉಡುಪಿ, ಮಂಗಳೂರು ಮತ್ತು ಉತ್ತರ  ಕನ್ನಡ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ ಹಾಗಾಗಿ ಸಮುದ್ರ ತೀರದ ಮತ್ತು ಮೀನುಗಾರರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಸಮುದ್ರ ತೀರದಲ್ಲಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:  Astrology: ನೆಚ್ಚಿನ ಉದ್ಯೋಗ ಹೊಂದುವ ಈ ರಾಶಿಯವರ ಕನಸು ನನಸು; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಕರ್ನಾಟಕದ ಡ್ಯಾಂಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.  ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.

11 ವರ್ಷಗಳ ಬಳಿಕ ಅಕ್ಟೋಬರ್ ಅಂತ್ಯದಲ್ಲಿ ಭರ್ತಿ

11 ವರ್ಷಗಳ ಬಳಿಕ  ಅಕ್ಟೋಬರ್ ಅಂತ್ಯದಲ್ಲಿ  ಕೆಆರ್ ಎಸ್ (KRS Dam) ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ನಲ್ಲಿಯೇ ಕೆಆರ್ ಎಸ್ ಭರ್ತಿಯಾಗುತ್ತಿತ್ತು. 2009ರಲ್ಲಿ ಅಕ್ಟೋಬರ್ 28ರಂದು ತುಂಬಿತ್ತು. ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆ (Monsoon Rains) ಸುರಿಯದ ಕಾರಣ ನೀರು ಹರಿದು ಬಂದಿರಲಿಲ್ಲ. ಡ್ಯಾಂ ಭರ್ತಿಯಾಗದ ಹಿನ್ನೆಲೆ ರೈತರಲ್ಲಿ ಆತಂಕ ಮನೆ ಮಾಡಿತ್ತು . ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಭೀತಿ ಶುರುವಾಗಿತ್ತು.  ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಕಪಿಲೆ ಮತ್ತು ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ.

ಇದನ್ನೂ ಓದಿ:  ಏನಿದು Bitcoin ಹಗರಣ? ವಿಪಕ್ಷಗಳು ಮುಗಿಬಿದ್ದಿರುವುದು ರಾಜ್ಯ BJP ಸರ್ಕಾರಕ್ಕೆ ಸಂಕಷ್ಟ ತಂದೊಡ್ಡುತ್ತದೆಯೇ?

ಕೇರಳದಲ್ಲಿ ಆರೆಂಜ್ ಅಲರ್ಟ್

ಕಳೆದ ನಾಲ್ಕೈದು ದಿನಗಳಿಂದ ಕೇರಳದ 12 ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈಗ ಜಿಲ್ಲೆಗಳಲ್ಲಿ ಸಂಖ್ಯೆ 5ಕ್ಕೆ ಇಳಿದಿದ್ದು, ಈ ವ್ಯಾಪ್ತಿಯಲ್ಲಿಯೇ ಇವತ್ತು ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ.

ತಿರುವನಂತಪುರ, ಕೊಟ್ಟಾಯಂ, ಇದುಕ್ಕಿ, ಪಥನಂಮಿಟ್ಟಾ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಅಂದಾಜು 11-20 ಸೆಂ.ಮೀ.ವರೆಗೆ ಮಳೆಯಾಗಲಿದೆ. ಈ ಐದು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಅಲ್ಲಪೂಜಾ, ಎರ್ನಾಕುಲಂ, ತ್ರಿಶೂರ್, ಪಾಲಕಡ್ ಮತ್ತು ಮಲ್ಲಪುರಂನಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ಕಡಿಮೆ ಒತ್ತಡ ಉಂಟಾಗಿದ್ದು, ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್ ವರೆಗೆ ಚಂಡಮಾರುತದ ಪರಿಚಲನೆ ವಿಸ್ತರಿಸಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಚಂಡಮಾರುತ ಪಶ್ಚಿಮದತ್ತ ನಿಧಾನವಾಗಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
Published by:Mahmadrafik K
First published: