ಬೆಂಗಳೂರು: ಪಿಯುಸಿ ಪೂರಕ ಪರೀಕ್ಷೆ (PUC Supplementary Exam) ತೆಗೆದುಕೊಳ್ಳುವ ವಿದ್ಯಾರ್ಥಿಗಳು (Student) ಕೂಡ ಸಿಇಟಿ ಪರೀಕ್ಷೆ (CET Exam) ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಾಹಿತಿ ನೀಡಿದ್ದಾರೆ. ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಪಿಯುಸಿಯಲ್ಲಿ (2nd PUC) ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಬೇಕು ಎಂದು ಪಿಯು ಬೋರ್ಡ್ (Karnataka Board Pre University Exam) ಸ್ಪಷ್ಟಪಡಿಸಿದೆ. ಅಲ್ಲದೆ, ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣನೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಪೂರಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕಾ? ಅಥವಾ ಬೇಡವೇ ಎಂಬ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಬಾರದು. ಪೂರಕ ಪರೀಕ್ಷೆಯನ್ನು ಬರೆಯಲು ತೀರ್ಮಾನಿಸಿದ್ದರೂ ಸಿಇಟಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಿಇಟಿ ಪರೀಕ್ಷೆ ಹಾಜರಾದರೆ ಮಾತ್ರ ಪೂರಕ ಪರೀಕ್ಷೆ ಅಂಕ ಪರಿಗಣನೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ: MBA Course ಮಾಡಲು ಮುಂದಾಗಿದ್ದೀರಾ? ಈ ಟಾಪ್ ಇನ್ಸ್ಟಿಟ್ಯೂಟ್ಗಳಲ್ಲಿ ಮಾಡಿದ್ರೆ ಅದರ ಮೌಲ್ಯವೇ ಬೇರೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ ಪ್ರತಿಯಲ್ಲಿ ಏನಿದೆ?
2023ರ ಏಪ್ರಿಲ್ 21ರಂದು ಎರಡನೇ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳು/ಪೋಷಕರು 2ನೇ ಪಿಯುಸಿಯಲ್ಲಿ ಕಡಿಮೆ ಶೇಕಡಾವಾರು ಕಾರಣದಿಂದ ಕೆಲವು ವಿದ್ಯಾರ್ಥಿಗಳು 2ನೇ ಪಿಯು ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವುದರಿಂದ ಸಿಇಟಿ-2023ಕ್ಕೆ ಹಾಜರಾಗಲು ಅರ್ಹತೆ ಮಾನದಂಡಗಳ ಬಗ್ಗೆ ಪ್ರಾಧಿಕಾರದಲ್ಲಿ ಮಾಹಿತಿ ಕೋರುತ್ತಿದ್ದಾರೆ.
ಈ ಬಗ್ಗೆ ಸಿಇಟಿ-2023ಕ್ಕೆ ನೋಂದಣಿ ಮಾಡಿ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳು 2023ರ ಮೇ 20 ಮತ್ತು 21ರಂದು ನಡೆಸಲಾಗುವ ಸಿಇಟಿ-ಪರೀಕ್ಷೆ ಹಾಜರಾಗಲು ಈ ಮೂಲಕ ತಿಳಿಸಿದೆ. ಹಿಂದಿನ ವರ್ಷಗಳಲ್ಲಿ ಎರಡನೇ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಆಯಾ ವರ್ಷದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರೆ ಮಾತ್ರ ನಿಯಮಗಳ ಪ್ರಕಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಈ ಹಂತದಲ್ಲಿ ಅಭ್ಯರ್ಥಿಗಳ ಮತ್ತು ಪೋಷಕರ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ