ವಿದ್ಯಾವಿಕಾಸ ಯೋಜನೆಯಡಿಯಲ್ಲಿ ಸರ್ಕಾರಿ (Government) ಶಾಲೆ (School)ಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ (Students) ಉಚಿತ (Free) ಶೂ (shoe) ಮತ್ತು ಸಾಕ್ಸ್ ನೀಡಲಾಗುತ್ತಿತ್ತು. ಆದ್ರೆ ಹಿಂದಿನ ಎರಡು ಶೈಕ್ಷಣಿಕ ವರ್ಷಗಳಲ್ಲಿ ಅಂದ್ರೆ 2020-21 ಮತ್ತು 2021-22 ರಲ್ಲಿ ಸೂ, ಸಾಕ್ಸ್ ವಿತರಿಸಿಲ್ಲ. ಆದ ಕಾರಣ ಸರ್ಕಾರಿ ಶಾಲೆಯಲ್ಲಿ 1 ರಿಂದ 10ನೇ ತರಗತಿಯ 50 ಲಕ್ಷ ಮಕ್ಕಳು ಶೂ, ಸಾಕ್ಸ್ ವಿತರಣೆಯಿಂದ ವಂಚಿತರಾಗಿದ್ದಾರೆ. ಆದ ಕಾರಣ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ಅನುಮತಿ ಸಿಕ್ಕಿದೆ. ಪ್ರತಿ ಶಾಲಾ ಮಕ್ಕಳಿಗೆ ಒಂದು ಜೊತೆ ಕಪ್ಪು ಶೂ ಮತ್ತು ಬಿಳಿ ಸಾಕ್ಸ್ ಗಳನ್ನು ನೀಡಲಾಗುವುದು ಎಂದು ಸಂಪುಟ (Cabinet) ಸಭೆ (Meeting) ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ (Madhu Swamy) ತಿಳಿಸಿದರು.
ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ
ಕೊರೊನಾದಂತಹ ಮಹಾಮಾರಿ ಈಡೀ ವಿಶ್ವವನ್ನೇ ಕಾಡಿದ್ದ ಎಲ್ಲರಿಗೂ ಗೊತ್ತಿದೆ. ಆಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆ ವೇಳೆಯಲ್ಲೇ ಮಕ್ಕಳು ಶೂ, ಸಾಕ್ಸ್ ವಿತರಣೆಯಿಂದ ವಂಚಿತರಾಗಿದ್ದಾರೆ.
ಈ ವರ್ಷ ಯಾವುದೇ ಆತಂಕವಿಲ್ಲದೇ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಈ ಬಾರಿಯಾದ್ರೂ ಶೂ, ಸಾಕ್ಸ್ ಸಿಕ್ರೆ ಖುಷಿಯಾಗುತ್ತಾರೆ. ಅಂತೆಯೇ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು 132 ಕೋಟಿ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಒಂದು ಜೊತೆ ಕಪ್ಪು ಶೂ, ಬಿಳಿ ಸಾಕ್ಸ್
ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು 132 ಕೋಟಿ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಶಾಲಾ ಮಕ್ಕಳಿಗೆ ಒಂದು ಜೊತೆ ಕಪ್ಪು ಶೂ ಮತ್ತು ಬಿಳಿ ಸಾಕ್ಸ್ ಗಳನ್ನು ನೀಡಲಾಗುವುದು ಎಂದು ಸಭೆ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ ಅವರು ಹೇಳಿದ್ರು.
ಸುಮಾರು 43 ಲಕ್ಷದ 37 ಸಾವಿರ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಗಳನ್ನು ನೀಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದ್ರು.
ಕನ್ನಡಿಗರಿಗೆ ಹೊಸ ಉದ್ಯೋಗ
ಸಚಿವ ಸಂಪುಟ ಸಭೆಯಲ್ಲಿ ಶೂ, ಸಾಕ್ಸ್ ಮಾತ್ರವಲ್ಲದೇ ಬೇರೆ ಬೇರೆ ವಿಚಾರಗಳಿಗೂ ಒಪ್ಪಿಗೆ ಸಿಕ್ಕಿದೆ. ರಾಜ್ಯದ ವಿವಿಧ ಕೈಗಾರಿಕೆಗಳು ಮತ್ತು ಉದ್ಯಮಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಹೊಸ ಉದ್ಯೋಗ ನೀತಿಗೆ ಸಂಪುಟ ಒಪ್ಪಿಗೆ ನೀಡಿದೆ.
ಕೈಗಾರಿಕೆಗಳ ಬಂಡವಾಳ ಹೂಡಿಕೆ ಆಧಾರದ ಮೇಲೆ ಕನ್ನಡಿಗರಿಗೆ ಇಂತಿಷ್ಟೇ ಹುದ್ದೆಗಳನ್ನು ನೀಡಬೇಕು ಎಂಬ ಅಂಶಗಳನ್ನು ಹೊಸ ಉದ್ಯೋಗ ನೀತಿಯಲ್ಲಿ ಅಳವಡಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುತ್ತವೆ.
ಉದ್ಯಮಗಳಿಗೆ ಸ್ಥಳೀಯರಿಗೆ ಉದ್ಯೋಗ ಸಿಕ್ಕಿದೆಯೇ ಇಲ್ಲವೇ ಎಂಬ ಬಗ್ಗೆಯೂ ಕೈಗಾರಿಕಾ ಇಲಾಖೆ ನಿಗಾ ವಹಿಸಲಿದೆ ಎಂದು ಮಾಧುಸ್ವಾಮಿ ಅವರು ಹೇಳಿದ್ರು.
ಇದನ್ನೂ ಓದಿ: Saalumarada Thimmakka: ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕನಿಗೆ ಸಂಪುಟ ದರ್ಜೆ ಸ್ಥಾನಮಾನ
ಸನ್ನಡತೆ ಕೈದಿಗಳ ಬಿಡುಗಡೆಗೆ ಇದ್ದ ನಿಯಮಗಳಲ್ಲಿ ತಿದ್ದುಪಡಿ
ರಾಜ್ಯದಲ್ಲಿ ಸನ್ನಡತೆ ಕೈದಿಗಳ ಬಿಡುಗಡೆಗೆ ಇದ್ದ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದೆ. ಮಕ್ಕಳು, ಶಿಶುಗಳು, ಮಹಿಳೆಯರ ಮೇಲೆ ಅಪರಾಧ ಪ್ರಕರಣ ಎಸಗಿರುವವರನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ.
ಹಾಗೆಯೇ ಒದಕ್ಕಿಂತ ಹೆಚ್ಚು ಕೊಲೆ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.
ಇದನ್ನೂ ಓದಿ: Rishi Sunak: ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಕೊಟ್ಟ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್!
ಮೈಸೂರಿನ ವಿಮಾನ ನಿಲ್ದಾಣದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು
ಇಂದು ನಡೆದ ಸಂಪುಟ ಸಭೆಯಲ್ಲಿ ಮೈಸೂರಿನ ವಿಮಾನ ನಿಲ್ದಾಣದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ತೀರ್ಮಾನಿಸಲಾಗಿದೆಯಂತೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ