HOME » NEWS » State » IN COLLABORATION WITH THE DEPARTMENT OF WOMEN AND CHILD DEVELOPMENT AND KARNATAKA BALAVIKASA ACADEMY AWARDED FOR 29 CHILDREN IN DHARWAD HG

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 29 ಮಕ್ಕಳಿಗೆ ಪಶಸ್ತಿ ಪ್ರದಾನ

ಭಾನುವಾರದಂದು (ಫೆ.28) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸಹಯೋಗದಲ್ಲಿ, ಧಾರವಾಡದ ಡಾ. ಮಲ್ಲಿಕಾರ್ಜುನ ಮನ್ಸೂರ ಕಲಾಭವನದಲ್ಲಿ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

news18-kannada
Updated:February 28, 2021, 11:18 PM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 29 ಮಕ್ಕಳಿಗೆ ಪಶಸ್ತಿ ಪ್ರದಾನ
ವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಧಾಟಿಸುತ್ತಿರುವ ಗಣ್ಯರು
  • Share this:
‘‘ಪಾಲಕರು ಮಕ್ಕಳ ಮೇಲೆ ಒತ್ತಡ ಹೇರದೆ, ಅವರಿಗೆ ಆಸಕ್ತಿ ಇರುವ ಕ್ಷೇತ್ರ ಹಾಗೂ ವಿಷಯಗಳಲ್ಲಿ ಮುಂದುವರೆಯಲು ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಮಕ್ಕಳು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ, ಸಾಧನೆ ಮಾಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಅಕಾಡೆಮಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಹಾಗೂ ವಿಚಾರ ಸಂಕೀರ್ಣಗಳನ್ನು ಏರ್ಪಡಿಸಲಾಗುವುದು" ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಭಾನುವಾರದಂದು (ಫೆ.28) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸಹಯೋಗದಲ್ಲಿ, ಧಾರವಾಡದ ಡಾ. ಮಲ್ಲಿಕಾರ್ಜುನ ಮನ್ಸೂರ ಕಲಾಭವನದಲ್ಲಿ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿ ಮಾತನಾಡಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 29 ಮಕ್ಕಳಿಗೆ, ಸಚಿವೆ ಶಶಿಕಲಾ ಜೊಲ್ಲೆ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತು ಮಾತನಾಡಿದ್ದ ಅವರು, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಈ ಬಾರಿಯ ಬಜೆಟ್​ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ನಂತರ ಮಾತು ಮುಂದುವರಿಸಿದ ಜಗದೀಶ್ ಶೆಟ್ಟರ್ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಗುರುತಿಸಿ, ಪುರಸ್ಕರಿಸುತ್ತಿರುವುದು ಉಳಿದ ಮಕ್ಕಳಿಗೆ ಸ್ಫೂರ್ತಿದಾಯಕ. ಅನೇಕ ಮಕ್ಕಳಿಗೆ ಪ್ರಶಸ್ತಿ ಸಿಗಬೇಕು. 2017-18, 2018-19ನೇ ಸಾಲಿನ ಅಕಾಡೆಮಿ ಗೌರವ ಹಾಗೂ 2017 -18ನೇ ಸಾಲಿನ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಯನ್ನು ಈ ವರ್ಷ ಕೊಡಲಾಗುತ್ತಿದೆ. ಇನ್ನು ಮುಂದೆ ಪ್ರತಿ ವರ್ಷವು ಪ್ರಶಸ್ತಿ ನೀಡುವಂತಹ ಕೆಲಸ ಆಗಬೇಕು ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಆ ಬಳಿಕ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

ಮಕ್ಕಳಲ್ಲಿ ಕೃಷಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ 6 ಅಥವಾ 8 ನೇ ತರಗತಿಯ ಪಠ್ಯದಲ್ಲಿ ಕೃಷಿ ಕುರಿತು ಪಾಠ ಅಳವಡಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಭೆಯನ್ನು ಕುರಿತು ಹೇಳಿದರು. ನಂತರ ಅವರು ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಅಕಾಡೆಮಿಯ ಅಧ್ಯಕ್ಷ ಈರಣ್ಣ ಜಡಿ ಅವರು ಸಮಾರೋಪ ನುಡಿಗಳನ್ನಾಡಿದರು‌. ಅನೇಕ ಗಣ್ಯರಿಂದ ಈ ಕಾರ್ಯಕ್ರಮ ಕೂಡಿತ್ತು. ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಸಿದ್ಧನಗೌಡ ಈಶ್ವರಗೌಡ ಚಿಕ್ಕನಗೌಡರು ಉಪಸ್ಥಿತರಿದ್ದರು.

ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶಂಕರ ಹಲಗತ್ತಿ, ಮಹೇಶ ಟೆಂಗಿನಕಾಯಿ, ವೇದವ್ಯಾಸ ಕೌಲಗಿ, ಡಾ.ಕಿಕ್ಕೇರಿ ಕೃಷ್ಣಮೂರ್ತಿ ಸೇರಿದಂತೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ‌.ಖಾಜಿ, ಯೋಜನಾಧಿಕಾರಿ ಭಾರತಿ ಶೆಟ್ಟರ್, ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ್, ಮನೋವೈದ್ಯ ಡಾ. ಆನಂದ ಪಾಂಡುರಂಗಿ, ಸೀಮಾ ಅಶೋಕ ಮಸೂತಿ, ನಿರ್ಮಲಾ ಯಲಿಗಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
First published: February 28, 2021, 11:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories