Fuel Price in India: ಪೆಟ್ರೋಲ್​​-ಡೀಸೆಲ್​​ ದರ ಮತ್ತೆ ಏರಿಕೆ

ಪೆಟ್ರೋಲ್ ಬೆಲೆ ಏರಿಕೆಗೆ ಮಾಮೂಲಿಯಂತೆ ಕಾರಣವಾಗಿರುವುದು ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆಯಲ್ಲಿ ಆಗುತ್ತಿರುವ ಗಣನೀಯ ಏರಿಕೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್​ನಲ್ಲಿ ಬ್ಯಾರೆಲ್ ತೈಲವು ರೂ. 3967.00 ಕ್ಕೆ ತಲುಪಿದೆ.

news18
Updated:September 13, 2019, 8:19 AM IST
Fuel Price in India: ಪೆಟ್ರೋಲ್​​-ಡೀಸೆಲ್​​ ದರ ಮತ್ತೆ ಏರಿಕೆ
ಪೆಟ್ರೋಲ್​​ ಬಂಕ್​​​
news18
Updated: September 13, 2019, 8:19 AM IST
ಬೆಂಗಳೂರು(ಸೆ.13): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್​​-ಡೀಸೆಲ್​​ ದರ ತುಸು ಹೆಚ್ಚು ಏರಿಕೆ ಕಂಡಿದ್ದು, ನಿರೀಕ್ಷೆಯಂತೆ ವಾಹನ ಸವಾರರಿಗೆ ಬರೆ ಎಳೆಯಲಾಗುತ್ತಿದೆ. ದಿನದ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಇಂದು ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ 5 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್​​ ಪೆಟ್ರೋಲ್​​ಗೆ 74.16 ರೂ., ಡೀಸೆಲ್‌ ದರ 67.36 ರೂ. ಆಗಿದೆ.

ಇನ್ನೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ ದರ 71.76 ರೂ., ಡೀಸೆಲ್‌ ದರ 65.14 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್‌ ದರ 74.56 ರೂ. ಮತ್ತು ಡೀಸೆಲ್‌ ದರ 68.84 ರೂ. ಆಗಿದೆ. ಅಲ್ಲದೇ ದೀದಿ ನಾಡು ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಪೆಟ್ರೋಲ್‌ ಲೀಟರ್​​ಗೆ 74.49 ರೂ. ಡೀಸೆಲ್‌ ಲೀಟರ್​​ಗೆ 67.55 ರೂ. ಇದೆ. ಹಾಗೆಯೇ ಮುಂಬೈನಲ್ಲಿ ಪೆಟ್ರೋಲ್‌ ದರ 77.45 ರೂ., ಡೀಸೆಲ್‌ ದರ 68.32 ರೂ. ಇದೆ.

ಇತ್ತೀಚೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಲ್ಲದ ಕಾರಣ ಕೊಂಚ ನಿರಾಳವಾಗಿದ್ದ ವಾಹನ ಸವಾರರಿಗೆ ಕಹಿಸುದ್ದಿ ಸಿಕ್ಕಿತ್ತು. ಮೂರು ತಿಂಗಳ ಮುನ್ನ ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು. ಮುಂದಿನ ದಿನಗಳಲ್ಲಿ ಇಂಧನ ದರದಲ್ಲಿ ಭಾರೀ ಏರಿಕೆಯಾಗಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಲೀಟರ್​​ಗೆ 5 ರೂ.ನಿಂದ 10 ರೂ. ಏರಿಕೆಯಾಗಬಹುದು ಎಂದು ಹೇಳಲಾಗುತ್ತಿತ್ತು.

ಇದನ್ನೂ ಓದಿ: ಡಿಕೆಶಿ ಇಡಿ ಕಸ್ಟಡಿ ಅಂತ್ಯ, ಕೋರ್ಟ್​ಗೆ ಹಾಜರ್; ಜಾಮೀನು ಅಥವಾ ಜೈಲು?; ಇಂದು ನಿರ್ಧಾರವಾಗಲಿದೆ ಮಾಜಿ ಸಚಿವರ ಭವಿಷ್ಯ!

ಇರಾನ್​​ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ನೀಡಿದ್ದ ವಿನಾಯಿತಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಕಾರಣವಾಗಿದೆ. ಈ ಆಮದು ಮೇಲಿನ ನಿರ್ಬಂಧ ಹೇರಿದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 5 ರಿಂದ 10 ರೂ.ವರೆಗೆ ಏರಿಕೆಯಾಗಲಿದೆ ಎನ್ನುತ್ತಿದ್ದವು ಮೂಲಗಳು.

ಯಾಕೆ ಬೆಲೆ ಏರಿಕೆ?: ಕಳೆದ ಐದು ದಿನಗಳಿಂದ ಪೆಟ್ರೋಲ್-ಡೀಸೆಲ್​​ ಬೆಲೆಗಳು ಏರಿಕೆಯಾಗುತ್ತಿರವುದನ್ನು ನಾವು ಗಮನಿಸಬಹುದು. ಪೆಟ್ರೋಲ್ ಬೆಲೆ ಏರಿಕೆಗೆ ಮಾಮೂಲಿಯಂತೆ ಕಾರಣವಾಗಿರುವುದು ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆಯಲ್ಲಿ ಆಗುತ್ತಿರುವ ಗಣನೀಯ ಏರಿಕೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್​ನಲ್ಲಿ ಬ್ಯಾರೆಲ್ ತೈಲವು ರೂ. 3967.00 ಕ್ಕೆ ತಲುಪಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ
Loading...

---------------
First published:September 13, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...