ಮಂಗಳೂರಿನಲ್ಲಿ ಕರ್ಫ್ಯೂ ತೆರವು; ಇಂದಿನಿಂದ ಅನಿರ್ದಿಷ್ಟಾವಧಿ ನಿಷೇಧಾಜ್ಞೆ ಜಾರಿ

ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದಿನಿಂದ ಪೊಲೀಸ್ ಆಯುಕ್ತರ ಮುಂದಿನ ಸೂಚನೆ ಬರುವವರೆಗೂ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಮಂಗಳೂರು

ಮಂಗಳೂರು

  • Share this:
ಮಂಗಳೂರು(ಡಿ.22): ರಾಷ್ಟ್ರೀಯ ಪೌರತ್ವ ಮಸೂದೆ ಕಾಯ್ದೆ ಜಾರಿ ವಿರೋಧಿಸಿ ರಾಜ್ಯದಲ್ಲಿನ ಹೋರಾಟದ ಕಿಚ್ಚು ಜೋರಾಗಿದೆ. ಮೊನ್ನೆ ಮಂಗಳೂರಿನಲ್ಲಿ ಇಬ್ಬರು ಪ್ರತಿಭಟನಾಕಾರರು ಹೋರಾಟದ ವೇಳೆ ಸಾವನ್ನಪ್ಪಿದ್ದರು. ಬಳಿಕ ನಗರದಾದ್ಯಂತ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜೊತೆಗೆ ಕರ್ಫ್ಯೂ ಜಾರಿ ಮಾಡಿ, 48 ಗಂಟೆಗಳ ಕಾಲ ಇಂಟರ್​ನೆಟ್​ ನಿಷೇಧ ಮಾಡಲಾಗಿತ್ತು.

ನಿನ್ನೆ 12 ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಪುನರಾರಂಭ ಮಾಡಲಾಗಿತ್ತು. ನಿನ್ನೆ ಬೆಳಿಗ್ಗೆ 6 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದಿನಿಂದ ಪೊಲೀಸ್ ಆಯುಕ್ತರ ಮುಂದಿನ ಸೂಚನೆ ಬರುವವರೆಗೂ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ನಾಳೆ ಪೌರತ್ವ ಕಾಯ್ದೆ ವಿರುದ್ಧ ಸೌಹಾರ್ದ ಕಾರ್ಯಕ್ರಮ; ಒಂದು ಲಕ್ಷ ಮಂದಿ ಭಾಗಿ ಸಾಧ್ಯತೆ; ಬಿಗಿ ಪೊಲೀಸ್​​ ಬಂದೋಬಸ್ತ್​​​​

ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣ ಕಾಪಾಡುವ ಉದ್ದೇಶದಿಂದ ಅನಿರ್ದಾಷ್ಟವಧಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳೂರಿನಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ.
ಮಂಗಳೂರಿನ ರಸ್ತೆಗಳು ಬಿಕೋ ಎನ್ನುತ್ತಿದ್ದು, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂಗಡಿ, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೆ ಕರ್ಫ್ಯೂ ಸಡಿಲಗೊಳಿಸಲಾಗಿತ್ತು.

ಪೌರತ್ವ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನೌಶೀನ್​​ ಮತ್ತು ಜಲೀಲ್​​ ಎಂಬ ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ಮೃತರ ಕುಟುಂಬಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳಲಿದ್ದಾರೆ.ಬಳಿಕ ಕಾಂಗ್ರೆಸ್ ಮುಖಂಡ ಜೊತೆ ಸಭೆ ನಡೆಸಲಿದ್ದಾರೆ.

ಸಿಎಎ ಮತ್ತು ಎನ್​​ಆರ್​ಸಿ ತಡೆಯುವುದು ಹೇಗೆ?; ಎರಡು ದಾರಿಗಳು ಬಿಚ್ಚಿಟ್ಟ ಪ್ರಶಾಂತ್​​ ಕಿಶೋರ್​​
Published by:Latha CG
First published: