ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕೆಪಿಸಿಸಿಯಿಂದ (KPCC) ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 2 ಗಂಟೆಗೆ ಪಾದಯಾತ್ರೆ (Rally) ಆರಂಭವಾಯಿತು. ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಸಂಗೊಳ್ಳಿ ರಾಯಣ್ಣ ಸರ್ಕಲ್ನಿಂದ ನ್ಯಾಷನಲ್ ಕಾಲೇಜು (National Collage) ಮೈದಾನದವರೆಗೆ (Ground) ಪಾದಯಾತ್ರೆ ನಡೆಯಿತು. ಪಾದಯಾತ್ರೆ ಸುಮಾರು 7 ಕಿಲೋ ಮೀಟರ್ ಸಾಗಿ ಸಂಜೆ 5.10 ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಿತು. ಡಿಕೆಶಿ, ಸಿದ್ದರಾಮಯ್ಯ (Siddaramiah), ರಂದೀಪ್ ಸುರ್ಜೇವಾಲಾ ರಾಜ್ಯ ಸರ್ಕಾರದ (State Government) ವಿರುದ್ಧ ವಾಗ್ದಾಳಿ ನಡೆಸಿದ್ರು. ಪಾದಯಾತ್ರೆ ವೇಳೆ ಲಾಠಿ ಚಾರ್ಜ್ ಕೂಡ ನಡೆಯಿತು. ನಗರ ಭಾಗದಲ್ಲಂತೂ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯ್ತು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯ ಕಾಂಗ್ರೆಸ್ನಿಂದ ಬೃಹತ್ ಪಾದಯಾತ್ರೆ ನಡೆಯಿತು. ಸಾವಿರಾರು ಮಂದಿ ಪಾದಯಾತ್ರೆಯಲ್ಲಿ ಭಾಗಿಯಾದರು. ಸ್ವಾತಂತ್ರ್ಯ ನೆನಪಿಗಾಗಿ ನಡೆದ ಪಾದಯಾತ್ರೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವೇದಿಕೆಯಾಯ್ತು.
ಸರ್ಕಾರದ ವಿರುದ್ಧ ಆಕ್ರೋಶ
ಕೆಪಿಸಿಸಿಯಿಂದ ಆಯೋಜಿಸಿದ್ದ ಬೃಹತ್ ಪಾದಯಾತ್ರೆ ಮಧ್ಯಾಹ್ನ 2 ಗಂಟೆಗೆ ಪಾದಯಾತ್ರೆ ಆರಂಭವಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಪಾದಯಾತ್ರೆ ನಡೆಯಿತು. ಪಾದಯಾತ್ರೆ ಸುಮಾರು 7 ಕಿಲೋ ಮೀಟರ್ ಸಾಗಿ ಸಂಜೆ 5.10 ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಿತು. ಡಿಕೆಶಿ, ಸಿದ್ದರಾಮಯ್ಯ, ರಂದೀಪ್ ಸುರ್ಜೇವಾಲಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.
ಪಾದಯಾತ್ರೆ ವೇಳೆ ಲಾಠಿಚಾರ್ಜ್
ನ್ಯಾಷನಲ್ ಕಾಲೇಜು ಬಳಿ ಪಾದಯಾತ್ರೆಯಲ್ಲಿ ಭಾಗಿಯಾದ ಕಾರ್ಯಕರ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಪ್ರಯೋಗ ಮಾಡಿದರು. ನಾಯಕರ ಜೊತೆ ಬ್ಯಾರಿಕೇಡ್ ತಳ್ಳಿ ಮುಂದೆ ಹೋಗಲು ಪ್ರಯತ್ನಿಸಿದ ಸಂದರ್ಭದಲ್ಲಿ ಕೆಲವರಿಗೆ ಲಾಠಿ ಏಟು ನೀಡಿ ನಿಯಂತ್ರಣ ಮಾಡಬೇಕಾಯಿತು.
ಇದನ್ನೂ ಓದಿ: ಹಾವೇರಿಯಲ್ಲಿ ಧ್ವಜಾರೋಹಣದ ವೇಳೆ ಮಗು ಜನನ, ಧ್ವಜಸ್ತಂಭದ ಬಳಿ ತಂದು ಸಂಭ್ರಮ!
ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ ನಡಿಗೆ
ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತ್ಯೇಕವಾಗಿ ನಡೆದರು. ಡಿಕೆಶಿ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆಯಾಗಿ ಹೆಜ್ಜೆ ಹಾಕಿದರೆ, ಸಿದ್ದರಾಮಯ್ಯ ಹಾಗೂ ಆಪ್ತ ಶಾಸಕರು ಜೊತೆಯಾಗಿ ಹೆಜ್ಜೆ ಹಾಕಿದರು.
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು.
ಇದನ್ನೂ ಓದಿ: ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಮಿಂಚಿದ ವಿಧಾನಸೌಧ- ಎಲ್ಲೆಡೆ ಜನಸಾಗರ, ಫುಲ್ ಟ್ರಾಫಿಕ್ ಜಾಮ್!
ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ
ಡಿಕೆಶಿ ಮಾತನಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ನೆಹರೂ ಚರಿತ್ರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಡಿಕೆಶಿ ಸರಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಕೈಬಿಟ್ಟಿದ್ದಕ್ಕಾಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶ ಕವಲು ದಾರಿಯಲ್ಲಿದೆ. ಜನರು ಆತಂಕದಿಂದ ಇದ್ದಾರೆ. ಬೆಲೆ ಏರಿಕೆ ಗಗನಕ್ಕೇರಿದೆ. ಚರಿತ್ರೆ ಬದಲಾವಣೆ ಮಾಡಲು ಹೊರಟಿದ್ದಾರೆ. ಆದರೆ, ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಡಿಕೆಶಿ ಆಕ್ರೋಶ ಹೊರಹಾಕಿದರು.
ದಾರಿಯುದ್ಧಕ್ಕೂ ಇಡ್ಲಿ, ವಡೆ, ಕೂಲ್ ಡ್ರಿಂಕ್ಸ್ ವ್ಯವಸ್ಥೆ
ಮದ್ದೂರು ವಡಾ, ತಟ್ಟೆ ಇಡ್ಲಿ, ಬಜ್ಜಿ, ಹಣ್ಣು ಹಂಪಲು ಮಜ್ಜಿಗೆ ಸೇರಿದಂತೆ ತಂಪು ಪಾನಿಯಗಳನ್ನು ದಾರಿಯುದ್ದಕ್ಕೂ ಕಾರ್ಯಕರ್ತರಿಗೆ ವಿತರಿಸಲಾಯಿತು. ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಉಚಿತ ಮೆಟ್ರೋ ವ್ಯವಸ್ಥೆ
ಕಾಂಗ್ರೆಸ್ ನಡಿಗೆ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಉಚಿತ ಮೆಟ್ರೋ ಪ್ರಯಾಣಕ್ಕೆ ಕಾಂಗ್ರೆಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕಾಗಿ ಸುಮಾರು ಒಂದು ಲಕ್ಷ ಟಿಕೆಟ್ ಖರೀದಿ ಮಾಡಲಾಗಿತ್ತು. ನ್ಯಾಷನಲ್ ಕಾಲೇಜು ಮೈದಾನದಿಂದ ಪ್ರಯಾಣಿಕರು ಮೆಟ್ರೋ ಮೂಲಕ ಪ್ರಯಾಣಿಸಿದರು. ಜನರನ್ನು ನಿಯಂತ್ರಣ ಮಾಡಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಟ್ಟರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ