ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ; ಸುತ್ತೋಲೆ ಹೊರಡಿಸಿದ ಸರ್ಕಾರ!

ರಾಜ್ಯದಲ್ಲಿ ಬಿಜೆಪಿ ಪಕ್ಷ ಸರ್ಕಾರ ರಚಿಸಿದೆಯಾದರು ಈವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಹೀಗಾಗಿ ಯಾವ ಜಿಲ್ಲೆಗೂ ಜಿಲ್ಲಾಧಿಕಾರಿಯನ್ನು ನೇಮಕ ಮಾಡಲಾಗಿಲ್ಲ. ಹೀಗಾಗಿ ಇಂದು ಈ ಬಾರಿಯ ಸ್ವತಂತ್ರ್ಯ ದಿನಾಚರಣೆಗೆ ಸಚಿವರುಗಳು ಆಯಾ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುವುದು ಸಾಧ್ಯವಿಲ್ಲದಂತಾಗಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಹೀಗೊಂದು ಸುತ್ತೋಲೆ ಹೊರಡಿಸಿದೆ ಎನ್ನಲಾಗುತ್ತಿದೆ.

MAshok Kumar | news18
Updated:August 13, 2019, 6:16 PM IST
ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ; ಸುತ್ತೋಲೆ ಹೊರಡಿಸಿದ ಸರ್ಕಾರ!
ಸಾಂದರ್ಭಿಕ ಚಿತ್ರ.
  • News18
  • Last Updated: August 13, 2019, 6:16 PM IST
  • Share this:
ಬೆಂಗಳೂರು (ಆಗಸ್ಟ್.13); ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲಾ ಜಿಲ್ಲೆಯಲ್ಲೂ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡುವುದು ಸಂಪ್ರದಾಯ. ಈ ವರೆಗೆ ರಾಜ್ಯದಲ್ಲಿ ಈ ಸಂಪ್ರದಾಯವನ್ನೇ ಪಾಲಿಸಿಕೊಂಡು ಬರಲಾಗುತ್ತಿತ್ತು. ಆದರೆ, ಬಸವರಾಜ ಬೊಮ್ಮಾಯಿ ಕಾಲದ ನಂತರ ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲಿದ್ದಾರೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, “2019ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ 15 ಆಗಸ್ಟ್ 2019ರಂದು ಬೆಂಗಳೂರು ನಗರವನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡುವಂತೆ ಸೂಚಿಸಲಾಗಿದೆ.
ಅಲ್ಲದೆ, ರಾಜ್ಯದಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ನೆರೆಯ ಪರಿಸ್ಥಿತಿ ಉಂಟಾಗಿರುವ ಕಾರಣ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಆದೇಶಿಸಲಾಗಿದೆ.

government
ಸರ್ಕಾರದ ಸುತ್ತೋಲೆ.


ರಾಜ್ಯದಲ್ಲಿ ಬಿಜೆಪಿ ಪಕ್ಷ ಸರ್ಕಾರ ರಚಿಸಿದೆಯಾದರು ಈವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಹೀಗಾಗಿ ಯಾವ ಜಿಲ್ಲೆಗೂ ಜಿಲ್ಲಾಧಿಕಾರಿಯನ್ನು ನೇಮಕ ಮಾಡಲಾಗಿಲ್ಲ. ಹೀಗಾಗಿ ಇಂದು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಸಚಿವರುಗಳು ಆಯಾ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುವುದು ಸಾಧ್ಯವಿಲ್ಲದಂತಾಗಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಹೀಗೊಂದು ಸುತ್ತೋಲೆ ಹೊರಡಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ನೆರೆ ಬಂತು, ಮನೆ- ಆಸ್ತಿ ಹೋಯ್ತು ಆದ್ರೆ, ಜಾತಿ ಮಾತ್ರ ಹೋಗಲಿಲ್ಲ; ಮೈಸೂರಿನಲ್ಲಿ ಜಾತಿಗೊಂದು ಪರಿಹಾರ ಕೇಂದ್ರ ತೆರೆದ ಜಿಲ್ಲಾಡಳಿತ!

First published:August 13, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...