ಬೆಂಗಳೂರು (ಆ. 9): ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ರೈಲು ನಿಲ್ದಾಣವನ್ನು ಕರ್ನಾಟಕದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡಲಾಗಿದೆ. ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿ ಚಿತ್ರೀಕರಣಗೊಂಡ ಈ ರೈಲು ನಿಲ್ದಾಣದಲ್ಲಿ ಈಗ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
ವರ್ಚುವಲ್ ವಿಡಿಯೋ ಮೂಲಕ ಅರಸಾಳು ರೈಲು ನಿಲ್ದಾಣ, ಪ್ಲಾಟ್ಫಾರಂ, ಮಾಲ್ಗುಡಿ ಮ್ಯೂಸಿಯಂ ಉದ್ಘಾಟನೆ ಮಾಡಿದ ಕೇಂದ್ರದ ರೈಲ್ವೆ ಸಚಿವ ಸುರೇಶ್ ಅಂಗಡಿ ಈ ಕುರಿತು ಮಾಹಿತಿ ನೀಡಿದರು. ಶಿವಮೊಗ್ಗ- ಶಿಕಾರಿಪುರ- ರಾಣೆಬೆನ್ನೂರು ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅದಕ್ಕೆ 245 ಕೋಟಿ ರೂ. ಬೇಕಾಗಲಿದೆ. ಇನ್ನೆರಡು ತಿಂಗಳೊಳಗೆ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮಗೊಳ್ಳುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಯಡಿಯೂರಪ್ಪ 994 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ಯೋಜನೆಯನ್ನು ಅನುಷ್ಠಾನಕ್ಕೆ ತರಲು ಭೂಮಿ ನೀಡುತ್ತಿದ್ದಾರೆ. ಹಾಗೇ, ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಯೋಜನಾ ವೆಚ್ಚ ಭರಿಸುವ ಭರವಸೆಯನ್ನೂ ನೀಡಿದ್ದಾರೆ. ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರ ಭೂಮಿಯನ್ನು ನೀಡಿದ ಕೂಡಲೆ ಕಾಮಗಾರಿ ಶುರುವಾಗಲಿದೆ ಎಂದು ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
Union Minister of State for Railways Suresh Angadi along with other dignitaries virtually inaugurated the restored Arasalu station through video link today: South Western Railway pic.twitter.com/1OcQvYa5xT
— ANI (@ANI) August 8, 2020
ಕನ್ನಡದ ಖ್ಯಾತ ನಟ ಹಾಗೂ ನಿರ್ದೇಶಕ ಶಂಕರ್ ನಾಗ್ ನಿರ್ದೇಶಿಸಿದ್ದ ಧಾರಾವಾಹಿ ಮಾಲ್ಗುಡಿ ಡೇಸ್ ಚಿತ್ರೀಕರಣಗೊಂಡಿದ್ದ ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ರೈಲು ನಿಲ್ದಾಣವನ್ನು ಮಾಲ್ಗುಡಿ ಮ್ಯೂಸಿಯಂ ಮಾಡಲಾಗಿದೆ. ಆರ್.ಕೆ. ನಾರಾಯಣ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ಮಾಲ್ಗುಡಿ ಡೇಸ್ ಧಾರಾವಾಹಿಯನ್ನು 1986-89ರ ಅವಧಿಯಲ್ಲಿ ಶಂಕರ್ ನಾಗ್ ನಿರ್ದೇಶಿಸಿದ್ದರು. ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿ ನಂತರ ಭಾರತದ ಅನೇಕ ಭಾಷೆಗಳಿಗೆ ಅನುವಾದವಾಗಿತ್ತು.
Come and take a walk down the memory lane!
Railways has developed Arasalu Station in Karnataka as 'Malgudi Museum', showcasing the fictional town from the iconic show, 'Malgudi Days'. pic.twitter.com/Jk5BJupxph
— Piyush Goyal (@PiyushGoyal) August 8, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ