News18 India World Cup 2019

Cabinet Expansion; ರಾಜ್ಯ ಸಂಪುಟ ಸೇರಿದ ಆರ್. ಶಂಕರ್, ಹೆಚ್​. ನಾಗೇಶ್; ಪ್ರಮಾಣ ವಚನ ನೀಡಿದ ರಾಜ್ಯಪಾಲ ವಿ.ಆರ್. ವಾಲಾ!

Karnataka Cabinet: ರಾಜ್ಯಪಾಲರ ಭವನದಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಇಬ್ಬರೂ ಸಚಿವರಿಗೆ ಪ್ರಮಾಣ ವಚನ ಭೋದಿಸಿದರು. ನೂತನ ಸಚಿವರಾದ ಆರ್. ಶಂಕರ್ ಹಾಗೂ ಹೆಚ್​. ನಾಗರಾಜ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

MAshok Kumar | news18
Updated:June 14, 2019, 3:34 PM IST
Cabinet Expansion; ರಾಜ್ಯ ಸಂಪುಟ ಸೇರಿದ ಆರ್. ಶಂಕರ್, ಹೆಚ್​. ನಾಗೇಶ್; ಪ್ರಮಾಣ ವಚನ ನೀಡಿದ ರಾಜ್ಯಪಾಲ ವಿ.ಆರ್. ವಾಲಾ!
ಹೆಚ್.ನಾಗೇಶ್​- ಆರ್​​​.ಶಂಕರ್​
MAshok Kumar | news18
Updated: June 14, 2019, 3:34 PM IST
ಬೆಂಗಳೂರು (ಜೂನ್​.14); ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಸಭೆ ಕೊನೆಗೂ ವಿಸ್ತರಣೆಯಾಗಿದ್ದು, ರಾಣಿಬೆನ್ನೂರು ಕ್ಷೇತ್ರದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಶಾಸಕ ಆರ್​. ಶಂಕರ್ ಹಾಗೂ ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್​. ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ.

ರಾಜ್ಯಪಾಲರ ಭವನದಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಇಬ್ಬರೂ ಸಚಿವರಿಗೆ ಪ್ರಮಾಣ ವಚನ ಭೋದಿಸಿದರು. ನೂತನ ಸಚಿವರಾದ ಆರ್. ಶಂಕರ್ ಹಾಗೂ ಹೆಚ್​. ನಾಗರಾಜ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಇದನ್ನೂ ಓದಿ : Cabinet Expansion: ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಬಂಡಾಯದ ಸುಳಿವು; ಸಚಿವ ಸ್ಥಾನ ನೀಡದಿದ್ದರೆ ಪಕ್ಷ ಬಿಡುವ ಸಾಧ್ಯತೆ!

ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ರಾಣಿ ಬೆನ್ನೂರು ಕ್ಷೇತ್ರದ ಶಾಸಕ ಆರ್. ಶಂಕರ್ ತನ್ನ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವನ್ನು ಕಾಂಗ್ರೆಸ್​ ಜೊತೆಗೆ ವಿಲೀನಗೊಳಿಸಿದ್ದಾರೆ. ಅಲ್ಲದೆ ಈ ಕುರಿತ ಪತ್ರವನ್ನು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಸಂಪುಟದಲ್ಲಿ ಪಕ್ಷೇತರ ಶಾಸಕರಿಗೆ ಅವಕಾಶ ಮಾಡಿಕೊಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಇಂದಿನ ಸಂಪುಟ ವಿಸ್ತರಣೆಯಲ್ಲಿ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಪಟ್ಟಿ ಮತ್ತಷ್ಟು ಬೆಳೆಯುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

ಇದನ್ನೂ ಓದಿ : Cabinet Expansion; ಇಂದು ಮಹತ್ವದ ಸಚಿವ ಸಂಪುಟ ವಿಸ್ತರಣೆ; ಪಕ್ಷೇತರ ಶಾಸಕ ಹೆಚ್​. ನಾಗೇಶ್ ಮಂತ್ರಿಗಿರಿ ಖಚಿತ!
Loading...

First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...