• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Budget 2023: ಮೀನುಗಾರಿಕಾ ದೋಣಿಗಳಿಗೆ ಜಿಪಿಎಸ್, ಸೀಮೆಎಣ್ಣೆ ಬದ್ಲು ಇನ್ಮೇಲೆ ಡೀಸೆಲ್/ಪೆಟ್ರೋಲ್ ಬಳಕೆಗೆ ಸಹಾಯಧನ

Karnataka Budget 2023: ಮೀನುಗಾರಿಕಾ ದೋಣಿಗಳಿಗೆ ಜಿಪಿಎಸ್, ಸೀಮೆಎಣ್ಣೆ ಬದ್ಲು ಇನ್ಮೇಲೆ ಡೀಸೆಲ್/ಪೆಟ್ರೋಲ್ ಬಳಕೆಗೆ ಸಹಾಯಧನ

ಆಯವ್ಯಯ ಬಜೆಟ್​ 2023-24

ಆಯವ್ಯಯ ಬಜೆಟ್​ 2023-24

ಈ ಬಾರಿಯ ರಾಜ್ಯದ ಆಯವ್ಯಯ 2023-24 ಬಜೆಟ್​ ಅನ್ನು ಇದೀಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದು, ಇದರಲ್ಲಿ ರಾಜ್ಯದಲ್ಲಿ ಮೀನುಗಾರಿಕೆ ವಲಯಕ್ಕೆ ಬಹುದೊಡ್ಡ ಕೊಡುಗೆಯನ್ನು ಘೋಷಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.

  • News18 Kannada
  • 4-MIN READ
  • Last Updated :
  • Karnataka, India
  • Share this:

    ಇದೀಗ ರಾಜ್ಯ ಮುಖ್ಯಮಂತ್ರಿ 2023 ರ ಆಯವ್ಯಯ ಬಜೆಟ್ (Karnataka Budget 2023-24)​ ಮಂಡನೆ ಮಾಡುತ್ತಿದ್ದು, ಇದರಲ್ಲಿ ಮೀನುಗಾರರಿಗೆ ಬಂಪರ್​ ಯೋಜನೆಗಳನ್ನು ಘೋಷಿಸಿದ್ದಾರೆ. ಇದು ಬಸವರಾಜ್​ ಬೊಮ್ಮಾಯಿ ಅವರ ಎರಡನೇ ಬಜೆಟ್​ ಘೋಷಣೆಯಾಗಿದ್ದು, ,ಇದರಲ್ಲಿ ಮೀನುಗಾರಿಕೆಯನ್ನು (Fishing) ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಬಹಳಷ್ಟು ಅನುದಾನಗಳನ್ನು ಘೋಷಣೆ ಮಾಡಲಾಗಿದ್ದು, ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.


    • ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ. ಗಳ ಅನುದಾನದಲ್ಲಿ ISRO ಅಭಿವೃದ್ಧಿಪಡಿಸಿರುವ GPS ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ಅನುಕೂಲವಾಗಲಿದೆ. ದೋಣಿಗಳನ್ನು ಪತ್ತೆ ಹಚ್ಚಲು

    • ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ನಮ್ಮ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಇದು 10,000 ವಸತಿರಹಿತ ಮೀನುಗಾರರಿಗೆ ಅನ್ವಯವಾಗುತ್ತದೆ.


    Karnataka Budget 2023 Live Updates: ರೈತರಿಗೆ ಬಂಪರ್ ಆಫರ್- ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ


    ಸೀಮೆಎಣ್ಣೆ ಬದಲಿಗೆ ಪೆಟ್ರೋಲ್, ಡಿಸೇಲ್ ಚಾಲಿತ ದೋಣಿಗಳು

    • ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್‌ ಆಧಾರಿತ ಮೋಟಾ‌ರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ ವರ್ಷಗಳ ಅವಧಿಗೆ 2 ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು.

    • ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ನೀಡುತ್ತಿರುವ ಡೀಸೆಲ್‌ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಹೆಚ್ಚಿಸಲಾಗುವುದು. ಇದರಿಂದ ಕಿಲೋ ದರದಲ್ಲಿ ಲೀಟರ್‌ಗಳವರೆಗೆ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ.

    • ಮೀನುಗಾರರಿಗೆ ನೀಡುತ್ತಿರುವ ಸೀಮೆ ಎಣ್ಣೆ ಸಹಾಯಧನದ ಪ್ರಕ್ರಿಯೆಯನ್ನು ಸರಳೀಕರಣದ ಮುಖಾಂತರ ಮಾಡಲಾಗುವುದು. ಈ ಸಹಾಯಧನ ಪ್ರಸಕ್ತ ಸಾಲಿನಿಂದ ನೇರವಾಗಿ ಮೀನುಗಾರರ ಖಾತೆಗೆ ಜಮೆ ಮಾಡಲಾಗುತ್ತದೆ.


    ಮತ್ಸ್ಯ ಸಿರಿ ಯೋಜನೆ

    • ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ (Deep sea fishing boats) ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಮತ್ಸ್ಯ ಸಿರಿ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

    • ಸೀಗಡಿ ಮೀನುಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ.

    Published by:Prajwal B
    First published: