Nimhans ಘಟಿಕೋತ್ಸವ ಸಮಾರಂಭದಲ್ಲಿ ಕನ್ನಡಕ್ಕೆ ಅವಮಾನ; ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದ ಕುಮಾರಸ್ವಾಮಿ
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆಯ (Nimhans) ಘಟಿಕೋತ್ಸವವನ್ನು ಭಾನುವಾರ ಆಯೋಜನೆ ಮಾಡಲಾಗಿತ್ತು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಿದ್ದರು. ಆದರೆ, ರಾಜ್ಯ ಸರ್ಕಾರದ ಈ ಸಮಾರಂಭದಲ್ಲಿ ಕನ್ನಡ (Kannada) ಭಾಷೆಯನ್ನು ಅವಮಾನಿಸಲಾಗಿದೆ ಎಂಬ ಕೂಗು ಕೇಳಿ ಬಂದಿದೆ. ಈ ಸಮಾರಂಭದಲ್ಲಿ ಹಿಂದಿಗೆ (Hindi) ಮೊದಲ ಸ್ಥಾನ, ಇಂಗ್ಲೀಷ್ಗೆ (English) ಎರಡನೇ ಸ್ಥಾನ ನೀಡಿದ್ದರೆ, ಕನ್ನಡ ಭಾಷೆಗೆ ಮೂರನೇ ಸ್ಥಾನ ನೀಡಲಾಗಿತ್ತು. ಈ ವಿಚಾರವನ್ನು ಸಾಮಾನ್ಯವಾಗಿ ಹಲವರು ವ್ಯಾಪಕವಾಗಿ ಖಂಡಿಸಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಸಹ ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.1/6 pic.twitter.com/QxdU1ThDq3
ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, "ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? 3/6
ರಾಜ್ಯ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, "ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ?.
ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ?
ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು. 5/6#ನಮ್ಮಕನ್ನಡ#ನಮ್ಮಕರ್ನಾಟಕ
ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?.
ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು" ಎಂದು ಹೆಚ್.ಡಿ. ಕುಮಾರಸ್ವಾಮಿ ಕರೆ ನೀಡಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ