Kamal Pant: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ; ನೂತನ ಕಮಿಷನರ್ ಆಗಿ ಕಮಲ್ ಪಂಥ್ ನೇಮಕ
Bengaluru Police Commissioner: ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು (ಜು. 31): ಕರ್ನಾಟಕ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಜಾಗಕ್ಕೆ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 1990ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂಥ್ ಇಂದಿನಿಂದ ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ಗಳು ಹೆಚ್ಚುತ್ತಿದೆ. ಪ್ರತಿದಿನ 2 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್ಗಳು ಪತ್ತೆಯಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಎತ್ತಂಗಡಿ ಮಾಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂಥ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂಥ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂಥ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಂಡಿದ್ದಾರೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ