ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: Kamal Pant: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ; ನೂತನ ಕಮಿಷನರ್ ಆಗಿ ಕಮಲ್ ಪಂಥ್ ನೇಮಕ
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ