ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ (Rajeshwari Gayakwad) ಸೂಪರ್ ಮಾರ್ಕೆಟ್ (Super Market) ಮಾಲೀಕ ಮತ್ತು ಅವರ ಪುತ್ರನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬುಧವಾರ ಸಂಜೆ ವಿಜಯಪುರ (Vijayapura) ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್ಗೆ ರಾಜೇಶ್ವರಿ ಗಾಯಕ್ವಾಡ್ ಸ್ನೇಹಿತರ ಜೊತೆ ತೆರಳಿದ್ದರು. ಈ ವೇಳೆ ಸೂಪರ್ ಮಾರ್ಕೆಟ್ ಸಿಬ್ಬಂದಿ ಜೊತೆ ಜಗಳ ಮಾಡಿಕೊಂಡಿದ್ದಾರಂತೆ. ಇದೇ ಸಂದರ್ಭದಲ್ಲಿ ಸೂಪರ್ ಮಾರ್ಕೆಟ್ ಮಾಲೀಕ ಮಲ್ಲಿಕಾರ್ಜುನ್ ಮತ್ತು ಅವರ ಪುತ್ರನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಸೂಪರ್ ಮಾರ್ಕೆಟ್ಗೆ ಬಂದಿದ್ದ ರಾಜೇಶ್ವರಿ ಗಾಯಕ್ವಾಡ್, ಕೆಲವು ಕಾಸ್ಮೆಟಿಕ್ ವಸ್ತುಗಳನ್ನು ಖರೀದಿಸಿದ್ದಾರೆ. ಹಿಂದಿರುಗುವ ವೇಳೆ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸುವ ವೇಳೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಮದಿ ಸೂಪರ್ ಮಾರ್ಕೆಟ್ ಗೆ ಹೋಗಿದ್ದು ನಿಜ, ಆದ್ರೆ ಯಾವುದೇ ರೀತಿಯ ಗಲಾಟೆ ನಡೆದಿಲ್ಲ ಎಂದು ರಾಜೇಶ್ವರಿ ಗಾಯಕ್ವಾಡ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ