• Home
 • »
 • News
 • »
 • state
 • »
 • Congress Gruhalakshmi: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 2 ಸಾವಿರ ಮಾಸಾಶನ! 'ಗೃಹಲಕ್ಷ್ಮೀ' ಯೋಜನೆ ಘೋಷಿಸಿದ ಪ್ರಿಯಾಂಕಾ ಗಾಂಧಿ

Congress Gruhalakshmi: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 2 ಸಾವಿರ ಮಾಸಾಶನ! 'ಗೃಹಲಕ್ಷ್ಮೀ' ಯೋಜನೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಘೋಷಿಸಿರುವ 'ಗೃಹಲಕ್ಷ್ಮೀ' ಯೋಜನೆ

ಕಾಂಗ್ರೆಸ್ ಘೋಷಿಸಿರುವ 'ಗೃಹಲಕ್ಷ್ಮೀ' ಯೋಜನೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಿಕ ಸಹಾಯ ಧನ ನೀಡುವುದಾಗಿ ರಾಜ್ಯ ಕಾಂಗ್ರೆಸ್ ಭರವಸೆ ನೀಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 'ನಾ ನಾಯಕಿ' ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಮುಂದೆ ಓದಿ ...
 • News18 Kannada
 • 2-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಮುಂಬರುವ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka assembly elections 2023) ಕಾಂಗ್ರೆಸ್ (Congress) ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ನೇತೃತ್ವದಲ್ಲಿ ‘ನಾ ನಾಯಕಿ’ (Naa Nayaki) ಎಂಬ ಕಾರ್ಯಕ್ರಮ ಆಯೋಜಿಸಿದ್ದ ಕಾಂಗ್ರೆಸ್, ಮಹಿಳಾ ಮತದಾರರನ್ನು ಸೆಳೆಯಲು ಸಖತ್ ಪ್ಲಾನ್ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಾಶನ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಗೃಹಲಕ್ಷ್ಮೀ’ (Gruhalakshmi) ಹೆಸರಿನ ಯೋಜನೆ ಜಾರಿಗೆ ತರಲಿದ್ದು, ಅದರ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಾಶನ ನೀಡುವುದಾಗಿ ಭರವಸೆ ನೀಡಲಾಗಿದೆ.


“ಮಹಿಳೆಯರಿಗೆ 2 ಸಾವಿರ ರೂಪಾಯಿ ಮಾಸಾಶನ”


ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಿಕ ಸಹಾಯ ಧನ ನೀಡುವುದಾಗಿ ರಾಜ್ಯ ಕಾಂಗ್ರೆಸ್ ಭರವಸೆ ನೀಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಾ ನಾಯಕಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
‘ಗೃಹಲಕ್ಷ್ಮೀ’ ಯೋಜನೆಯಡಿ ಮಹಿಳೆಯರಿಗೆ ಸಹಾಯಧನ


ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದು, ಆ ಮೂಲಕ ಮಹಿಳೆಯರಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಹೇಳಲಾಗಿದೆ. ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಮಹತ್ವದ ಕೊಡುಗೆ ನೀಡುತ್ತಿದ್ದೇವೆ. ಯೋಜನೆಯ ಭರವಸೆಯೊಂದಿಗೆ ಗ್ಯಾರಂಟೀ ಚೆಕ್ ಅನ್ನು ಈಗಲೇ ನೀಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: Priyanka Gandhi: "ರಾಜ್ಯದಲ್ಲಿ ಶೇಕಡಾ 40ರ ಸರ್ಕಾರವಿದೆ!" 'ನಾ ನಾಯಕಿ' ಕಾರ್ಯಕ್ರಮದಲ್ಲಿ ಪ್ರಿಯಾಕಾಗಾಂಧಿ ವಾಗ್ದಾಳಿ


ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ಅಂತ ಕಾಂಗ್ರೆಸ್ ಹೇಳಿದೆ. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷರಾದ  ಡಿಕೆ ಶಿವಕುಮಾರ್ ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು.


ಈ ಕರೆಗೆ ಸ್ಪಂದಿಸಿ ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳು ಸ್ವೀಕಾರವಾಗಿವೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕೆ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ.
“ಇದು ಕಾಂಗ್ರೆಸ್ ಗ್ಯಾರೆಂಟಿ!”
ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು ₹2,000ರಂತೆ ವರ್ಷಕ್ಕೆ ₹24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ. ಇದು ಕಾಂಗ್ರೆಸ್ ಗ್ಯಾರೆಂಟಿ.

Published by:Annappa Achari
First published: