Mysuru Airport: ನವ ಕರ್ನಾಟಕ ನಿರ್ಮಾತೃವಿಗೆ ಗೌರವ, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು

ಮೈಸೂರಿನ ಮಂಡಕಳ್ಳಿಯಲ್ಲಿ ಇರುವ ವಿಮಾನ ನಿಲ್ದಾಣಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಬೇಕು ಎಂಬ ಆಗ್ರಹ ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ಈ ಆಗ್ರಹಕ್ಕೆ, ಕೂಗಿಗೆ ರಾಜ್ಯ ಸರ್ಕಾರ ಮಣಿದಿದೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಕೃಷ್ಣರಾಜ ಒಡೆಯರ್ ಹೆಸರು

ಮೈಸೂರು ವಿಮಾನ ನಿಲ್ದಾಣಕ್ಕೆ ಕೃಷ್ಣರಾಜ ಒಡೆಯರ್ ಹೆಸರು

  • Share this:
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wodeyar) .. ಕನ್ನಡಿಗರೆಲ್ಲರೂ ಎದ್ದು ನಿಂತು ಕೈ ಎತ್ತಿ ಮುಗಿಯಬೇಕಾದ ಹೆಸರು ಇದು. ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರಿನ (Mysuru) ಒಡೆಯರ ಸಂಸ್ಥಾನದ ಪ್ರಸಿದ್ಧ ದೊರೆ. ಮೈಸೂರು ರಾಜ್ಯವನ್ನು (Mysore State) ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದರು ನಾಲ್ವಡಿ ಕೃಷ್ಣರಾಜ ಒಡೆಯರ್. ಜನರು ಅವರನ್ನು ಪ್ರೀತಿಯಿಂದ ಕರೆಯುತ್ತಾ ಇದ್ದುದು ‘ರಾಜರ್ಷಿ’ ಅಂತ. ಒಡೆಯರ್ ಕೊಡುಗೆ ನೀಡದ ಕ್ಷೇತ್ರಗಳೇ ಇಲ್ಲ. ಕೃಷಿ, ಕೈಗಾರಿಕೆ, ನೀರಾವರಿ, ಜಲ ವಿದ್ಯುತ್‌, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ವಲಯಗಳಲ್ಲಿ ಅಂದಿನ ಮೈಸೂರು ರಾಜ್ಯ ಮುಂಚೂಣಿಯಲ್ಲಿತ್ತು. ಇದರ ಹಿಂದೆ ಇವರ ಕೊಡುಗೆ ಅಪಾರವಾಗಿತ್ತು. ಅಂದು ಬೆಂಗಳೂರು (Bengaluru), ಮೈಸೂರು ನಗರಗಳು (Mysuru City) ಎಲ್ಲರ ಆಕರ್ಷಣೆಯ ಕೇಂದ್ರವಾಗುವಂತೆ ಮಾಡಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ಕನ್ನಡಿಗರು (Kannadigas) ಬೆಳಗೆದ್ದು ನೆನಸಿಕೊಳ್ಳಲೇ ಬೇಕಾದ ಮಹನೀಯರಲ್ಲಿ, ಪ್ರಾತಃ ಸ್ಮರಣೀಯರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೂಡ ಒಬ್ಬರು. ಆಧುನಿಕ ಮೈಸೂರಿನ ನಿರ್ಮಾಣಕ್ಕೆ, ಕರುನಾಡ ಅಭಿವೃದ್ಧಿಗೆ ಒಡೆಯರ್ ಕೊಡುಗೆ ಅಪಾರ. ಇದೀಗ ಅವರನ್ನು ಮತ್ತೊಮ್ಮೆ ನೆನೆಸಿಕೊಳ್ಳುವ ದಿನ ಬಂದಿದೆ.

ಮೈಸೂರು ವಿಮಾನ ನಿಲ್ದಾಣಕ್ಕೆ ‘ನಾಲ್ವಡಿ’ ಹೆಸರು

ಮೈಸೂರಿನ ಮಂಡಕಳ್ಳಿಯಲ್ಲಿ ಇರುವ ವಿಮಾನ ನಿಲ್ದಾಣಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಬೇಕು ಎಂಬ ಆಗ್ರಹ ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ಈ ಆಗ್ರಹಕ್ಕೆ, ಕೂಗಿಗೆ ರಾಜ್ಯ ಸರ್ಕಾರ ಮಣಿದಿದೆ. ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ.

ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರ ಜೊತೆಗೆ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Explained: ಕನ್ನಡಿಗರು ಬೆಳಗೆದ್ದು ನೆನೆಯಲೇ ಬೇಕಾದ ನಾಲ್ವಡಿ ಕೃಷ್ಣರಾಜ ಒಡೆಯರ್, 'ರಾಜರ್ಷಿ' ಹೆಜ್ಜೆ ಗುರುತು ಇಲ್ಲಿದೆ

ಸಿಎಂಗೆ ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ

ಇನ್ನು ಈ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಕೂಡ ಸಿಎಂಗೆ ಒತ್ತಾಯ ಮಾಡಿದ್ದರು. ಅದರಂತೆ ಮನವಿಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆ ನೀಡಿದ್ದಾರೆ.



ಹೀಗಾಗಿ ಸಿಎಂ ಹಾಗೂ ಸಚಿವರಿಗೆ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: BS Yediyurappa ಚುನಾವಣಾ ನಿವೃತ್ತಿ ಬಗ್ಗೆ ಪುತ್ರನ ಎಕ್ಸ್‌ಕ್ಲೂಸಿವ್ ಮಾತು; ನನ್ನ ತಂದೆ ಮತ್ತು ಪಕ್ಷ ಎರಡು ಕಣ್ಣಿದ್ದಂತೆ ಎಂದ ವಿಜಯೇಂದ್ರ

ಬೆಂಗಳೂರು, ಮೈಸೂರಿನ ಅಭಿವೃದ್ಧಿಗೆ ಕೊಡುಗೆ

ಮೈಸೂರು ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾಗಿದೆ. ಮೈಸೂರು ಬೆಂಗಳೂರು ಪ್ರದೇಶಗಳಂತಹ ನಗರಗಳಲ್ಲಿ ರಚಿತವಾದ ಶ್ರೇಷ್ಠ ಕಟ್ಟಡಗಳು, ರಸ್ತೆಗಳು, ವಿದ್ಯುತ್ ದೀಪಗಳು, ಉದ್ಯಾನವನಗಳು, ಜಲ ಕಾರಂಜಿಗಳು, ವಿಹಾರ ಧಾಮಗಳು, ಶ್ರೇಷ್ಠ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳು, ಅನಾಥಾಶ್ರಮಗಳು, ಛತ್ರಗಳು, ಶುಲ್ಕ ವಿಧಿಸದೆ ಉತ್ತಮ ಸೇವೆ ನೀಡುತ್ತಿದ್ದ ಆಸ್ಪತ್ರೆಗಳು, ಶುಶ್ರೂಷಾ ಧಾಮಗಳು, ಸಂಪರ್ಕ ವ್ಯವಸ್ಥೆಗಳು, ಪ್ರಯಾಣ ಸೌಲಭ್ಯಗಳು ಬಹುಷಃ ಇಷ್ಟು ಶ್ರೇಷ್ಠ ಮಟ್ಟದಲ್ಲಿದ್ದುದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಕಾಲದಲ್ಲಿ.  ಈ ಪ್ರಾಂತ್ಯದಲ್ಲಿದ್ದ ಸರ್ವ ಭಾಷಿಗರ ಸಮನ್ವಯ, ಸರ್ವ ಧರ್ಮೀಯರ ಸಮನ್ವಯ, ಎಲ್ಲಾ ವರ್ಗದವರ ಹಿತಕಾಯುವ ಮನೋಭಾವ ಇತ್ಯಾದಿಗಳು ಸಾರ್ವಕಾಲಿಕವಾಗಿ ಮಹೋನ್ನತವಾದ ಗಳಿಗೆಗಳು. ಈ ಸಂಸ್ಥಾನದಲ್ಲಿ ಕಲೆ, ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿಗಳ ಪೋಷಣೆ ಅದ್ವಿತೀಯವಾಗಿತ್ತು.
Published by:Annappa Achari
First published: