ಯಾದಗಿರಿ (ಜ.19): ಕಾಂಗ್ರೆಸ್ ಪಕ್ಷದ ವಿರುದ್ಧ ಸದಾ ವಾಗ್ದಾಳಿ ನಡೆಸುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೆ ಕೈ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಇಂದು ರಾಷ್ಟ್ರೀಯ ಕಾಂಗ್ರೆಸ್ ಆಗಿ ಉಳಿದಿಲ್ಲ. ಅದು ಪಾಕಿಸ್ತಾನ ರಾಷ್ಟ್ರೀಯ ಕಾಂಗ್ರೆಸ್ ಆಗಿದೆ ಎಂದು ಲೇವಡಿ ಮಾಡಿದರು.
ಬೆಂಗಳೂರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಪಿಎಫ್ಐ ಸಂಚು ರೂಪಿಸಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ಯತ್ನಾಳ್ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “SDPI ಹಾಗೂ PFI ಸಂಘಟನೆಗಳು ದೇಶ ಸೇವೆ ಮಾಡುವುದಿಲ್ಲ. ಅವರು ಪಾಕಿಸ್ತಾನದ ಏಜೆಂಟ್ಗಳು. ಈ ಸಂಘಟನೆಗಳಿಗೆ ಪಾಕ್ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಇದೆ. ಅವರು ಎಲ್ಲಾ ಕಡೆ ಕೋಮು ಗಲಭೆ ಮಾಡುವ ದುರುದ್ದೇಶ ಹೊಂದಿದ್ದಾರೆ,” ಎಂದು ಯತ್ನಾಳ್ ಆರೋಪಿಸಿದರು.
ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ನಿಗಾ ಇಡಬೇಕು ಎಂದು ಯತ್ನಾಳ್ ಅಭಿಪ್ರಾಯ ಪಟ್ಟರು. “ದೇಶವಿರೋಧಿ ಚಟುವಟಿಕಗೆ ಕುಮ್ಮಕ್ಕು ನೀಡುವ ರಾಜಕೀಯ ನಾಯಕರ ಮೇಲೆ ನಿಗಾ ಇಡಬೇಕು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ದೇಶ ಬೇಕಾಗಿಲ್ಲ. ಓಟ್ ಬ್ಯಾಂಕ್ಗಾಗಿ ದೇಶ ಮಾರಾಟ ಮಾಡಿದರೂ ಪರವಾಗಿಲ್ಲ ಎನ್ನುವ ಧೋರಣೆ ಈ ಪಕ್ಷಗಳದ್ದು. ಕಾಂಗ್ರೆಸ್ ಇಂದು ರಾಷ್ಟ್ರೀಯ ಕಾಂಗ್ರೆಸ್ ಆಗಿ ಉಳಿಸಿಲ್ಲ. ಅದು ಪಾಕಿಸ್ತಾನ ರಾಷ್ಟ್ರೀಯ ಕಾಂಗ್ರೆಸ್ ಆಗಿದೆ,” ಎಂದು ಟೀಕಿಸಿದರು.
ಇದನ್ನೂ ಓದಿ: ಏನು ಮಾತಾಡದಂತೆ ಶಾಸಕ ಯತ್ನಾಳ್ಗೆ ಸೂಚಿಸಿದ್ದೇನೆ: ಸಿಎಂ ಬಿ.ಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧ ಮಾಡುವ ಸರ್ಕಾರದ ನಿರ್ಧಾರ ವಿಚಾರವಾಗಿ ಮಾತನಾಡಿದ ಯತ್ನಾಳ್, “ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವಂತಹ ಯಾವುದೇ ಸಂಘಟನೆಗಳಿದ್ದರೂ ಅದನ್ನು ನಿಷೇಧ ಮಾಡಬೇಕು. ಅವುಗಳ ಮೇಲೆ ತೀವ್ರ ನಿಗಾವಹಿಸಬೇಕು. ರಾಜ್ಯದಲ್ಲಿ ಗುಪ್ತಚರ ಇಲಾಖೆಯನ್ನು ಚುರುಕುಗೊಳಿಸಬೇಕು,” ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ