ಪಕ್ಷದೊಳಗಿನ ಹಿತಶತ್ರುಗಳ ವಿರುದ್ಧ ಹೋರಾಡಲು ನನ್ನಿಂದ ಅಸಾಧ್ಯ; ರಾಜೀನಾಮೆ ಹಿಂದಿನ ಕಾರಣ ತಿಳಿಸಿದ ಸಿದ್ದರಾಮಯ್ಯ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಈಗಾಗಲೇ ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ತಮ್ಮ ತೀರ್ಮಾನದಿಂದ ಹಿಂದೆ ಸರಿಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ಬೆಂಗಳೂರು (ಡಿಸೆಂಬರ್ 12); “ನನ್ನ ಹೋರಾಟ ಏನಿದ್ದರೂ ಬಿಜೆಪಿ ಪಕ್ಷದ ವಿರುದ್ಧ. ಇದನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ, ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ. ಇದೇ ಕಾರಣಕ್ಕೆ ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ನೋವು ತೋಡಿಕೊಂಡಿರುವುದು ತಿಳಿದುಬಂದಿದೆ.

ರಾಜ್ಯ ಉಪ ಚುನಾವಣೆಯಲ್ಲಿನ ಸೋಲಿನ ಬಳಿಕ ನಿನ್ನೆ ರಾತ್ರಿ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು, ಶಿವಾಜಿನಗರದ ನೂತನ ಶಾಸಕ ರಿಜ್ವಾನ್ ಅರ್ಷದ್ ,ಮಾಜಿ ಸಚಿವ ಕೃಷ್ಣ ಭೈರೇಗೌಡ ಸಹ ಭಾಗವಹಿಸಿದ್ದರು.

ಈ ವೇಳೆ ಆಪ್ತರ ಬಳಿ ಸೋಲಿನ ಕುರಿತು ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ನನ್ನ ಹೋರಾಟ ಇದ್ದದ್ದು ಬಿಜೆಪಿ ಪಕ್ಷದ ವಿರುದ್ಧ ಮಾತ್ರ. ಆದರೆ, ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಮಾಡಲು ಸಾಧ್ಯವೇ ಇಲ್ಲ. ಕತ್ತಲಲ್ಲಿ ಇದ್ದುಕೊಂಡು ಬೆಳಕಲ್ಲಿ ಇರುವವರಿಗೆ ಬಾಣ ಬಿಟ್ಟರೆ ಹೇಗೆ ಗೊತ್ತಾಗುತ್ತೆ? ಇದೇ ಕಾರಣಕ್ಕೆ ನಾನು ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈ ರಾಜೀನಾಮೆಯನ್ನು ಹಿಂಪಡೆಯಲು ಮನಸ್ಸಿಲ್ಲ. ಹೀಗಾಗಿ ಕೇವಲ ಶಾಸಕನಾಗಿ ಮುಂದುವರೆಯುತ್ತೇನೆ” ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಈಗಾಗಲೇ ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ತಮ್ಮ ತೀರ್ಮಾನದಿಂದ ಹಿಂದೆ ಸರಿಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ : ‘ನಾ ಇರುವವರೆಗೆ ಶರತ್ ಬಚ್ಚೇಗೌಡ ಅವರಿಗೆ ಬಿಜೆಪಿ ಪಕ್ಷದೊಳಗೆ ಪ್ರವೇಶ ಇಲ್ಲ’; ಎಂಟಿಬಿ ನಾಗರಾಜ್ ಮನವಿಗೆ ಸ್ಪಂದಿಸಿದ ಬಿಎಸ್​ವೈ
First published: