Siddaramaiah| ಮೋದಿ ಸರ್ಕಾರ ಅತ್ಯವಸರದಿಂದ 100 ಕೋಟಿ ಲಸಿಕೆ ಸಂಭ್ರಮಾಚರಣೆಗೆ ಮುಂದಾಗಿರುವುದು ಹಾಸ್ಯಾಸ್ಪದ; ಸಿದ್ದರಾಮಯ್ಯ

ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ..? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ.

ಸಿದ್ದರಾಮಯ್ಯ.

  • Share this:
    ಬೆಂಗಳೂರು (ಅಕ್ಟೋಬರ್​ 22); ಕೇಂದ್ರ ಬಿಜೆಪಿ ಸರ್ಕಾರ (BJP Government) ಕಳೆದ ಮೇ ತಿಂಗಳಲ್ಲಿ ದೇಶದಾದ್ಯಂತ ಕೊರೋನಾ ಲಸಿಕೆ (Corona Vaccine) ಅಭಿಯಾನಕ್ಕೆ ಚಾಲನೆ ನೀಡಿತ್ತು. ಅದರಂತೆ ಈವರೆಗೆ ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಬಿಜೆಪಿ ಸರ್ಕಾರ ಇದನ್ನು ಸಾಧನೆ ಎದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ (Social Media) ಪರ-ವಿರೋಧವಾಗಿ ಸಾಕಷ್ಟು ವಾದ-ವಿವಾದಗಳು ನಡೆಯುತ್ತಿವೆ. ಆದರೆ, ಬಿಜೆಪಿಯವರ (BJP) ಸಂಭ್ರಮಾಚರಣೆ ವಿರುದ್ಧ ಇಂದು ಟ್ವಿಟರ್​ ಮೂಲಕ ಸರಣಿ ಟ್ವೀಟ್​ ಮಾಡಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), "ಯಾವ ಸಾಧನೆಗೆ ಸಂಭ್ರಮಾಚರಣೆ?" ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ (Central Government) ವಿರುದ್ಧ ಕಿಡಿಕಾರಿದ್ದಾರೆ.



    ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ.



    ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ..? ನರೇಂದ್ರಮೋದಿಯವರೇ" ಎಂದು ಪ್ರಶ್ನಿಸಿದ್ದಾರೆ.

    ಮತ್ತೊಂದು ಟ್ವೀಟ್​ನಲ್ಲಿ, "ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ.



    ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ..? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ..?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ: Kodagu District: ಕೊರಗಜ್ಜ ದೇವಾಲಯದಿಂದ ಎರಡು ಪ್ಯಾಕೇಟ್ ಮದ್ಯ ಎಗರಿಸಿದ ಭೂಪ!

    ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆಮೇಲೆ ಮಾಡೋಣ" ಎಂದು ಸಲಹೆ ನೀಡಿದ್ದಾರೆ.

    ಇದನ್ನೂ ಓದಿ: Mysuru Double Murder​: ಅಪ್ಪನ ಅಕ್ರಮ ಸಂಬಂಧ ಸಹಿಸದ ಮಗನಿಂದ ತಂದೆ ಜೊತೆ ತಂದೆ ಪ್ರೇಯಸಿ ಕೊಲೆ

    ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ:

    ಬಿಜೆಪಿ ಸರ್ಕಾರ ಕೊರೋನಾ ಲಸಿಕೆ ಅಭಿಯಾನದ ಯಶಸ್ಸಿನ ಬಗ್ಗೆ ಮಾತನಾಡುತ್ತಿರುವ ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೆಟ್ರೋಲ್-ಡೀಸೆಲ್ ಬೆಲೆ 100ರ ಗಡಿ ದಾಟಿದೆ, ನಿರುದ್ಯೋಗ ಮಿತಿ ಮೀರಿದೆ, ಅಲ್ಲದೆ, ಹಸಿವಿನ ಸೂಚ್ಯಾಂಕದಲ್ಲಿ ಮೋದಿ ಸರ್ಕಾರ ಭಾರತವನ್ನು 100 ಗಡಿ ದಾಟಿಸಿದೆ. ಆದರೆ, ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡದರೆ, ಲಸಿಕೆ ಅಭಿಯಾನದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.
    Published by:MAshok Kumar
    First published: