ಬೆಂಗಳೂರು; ಎಐಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ದೇಶವ್ಯಾಪಿ ಚರ್ಚೆ ನಡೆಯುತ್ತಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷದೊಳಗೆ ಆಂತರಿಕ ಕಿತ್ತಾಟ ಶುರುವಾಗಿದೆ. ಇದೀಗ ಗಾಂಧಿ ಕುಟುಂಬದ ನಾಯಕತ್ವ ಪ್ರಶ್ನೆ ಮಾಡಿದವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು. ಹೊರತು ದುರ್ಬಲಗೊಳಿಸುವುದಲ್ಲ ಎಂದು ನಾಯಕತ್ವ ಪ್ರಶ್ನಿಸಿದವರಿಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ.@INCIndia
— Siddaramaiah (@siddaramaiah) August 23, 2020
ಇದನ್ನು ಓದಿ: ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕೂಗು; 23 ಹಿರಿಯ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನೇಮಕವಾಗಿದ್ದರು. ಇದೀಗ ಕಾಂಗ್ರೆಸ್ ಬಲ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದೇ ಸಂದರ್ಭದಲ್ಲಿ ಐದು ಮಾಜಿ ಸಿಎಂಗಳು, ಕಾಂಗ್ರೆಸ್ ಕಾರ್ಯ ಸಮಿತಿಯ ಸದಸ್ಯರು, ಸಂಸದರು, ಮಾಜಿ ಕೇಂದ್ರ ಸಚಿವರು ಸೇರಿ 23 ಕಾಂಗ್ರೆಸ್ ನಾಯಕರು ಒಟ್ಟಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಪಕ್ಷದ ಪ್ರತಿ ಹಂತದಲ್ಲೂ ಬದಲಾವಣೆ ತರುವಂತೆ ನಾಯಕರು ಮನವಿ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ