ಡಿಕೆಶಿ ಬೆನ್ನಲ್ಲೇ ಮಾಜಿ ಡಿಸಿಎಂ ಪರಮೇಶ್ವರ್ಗೆ ಐಟಿ ಶಾಕ್; ಮನೆ, ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳ ದಾಳಿ
ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ. ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಅಂತ ಹೇಳಲಾಗುತ್ತಿದೆ. ಬೇಕಾದಷ್ಟು ಹಣ ಇದೆ. ಅಷ್ಟಿದ್ದರೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದ್ದಾರೆ.
- News18 Kannada
- Last Updated: October 10, 2019, 2:48 PM IST
ಬೆಂಗಳೂರು(ಅ.10): ಮಾಜಿ ಸಚಿವ ಡಿಕೆ ಶಿವಕುಮಾರ್ ಬೆನ್ನಲ್ಲೇ ಮಾಜಿ ಡಿಸಿಎಂ ಪರಮೇಶ್ವರ್ ಅವರಿಗೆ ಐಟಿ ಶಾಕ್ ನೀಡಿದೆ. ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ತುಮಕೂರಿನಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳ ಮೇಲೆ ಬೆಂಗಳೂರು ಐಟಿ ಸೆಲ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ಬೃಹತ್ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ ಬೆಂಗಳೂರು; ತಂಡೋಪ ತಂಡವಾಗಿ ಬರುತ್ತಿದ್ದಾರೆ ರೈತರು
ತುಮಕೂರಷ್ಟೇ ಅಲ್ಲ, ನೆಲಮಂಗಲದಲ್ಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿರುವ ಪರಮೇಶ್ವರ್ ಒಡೆತನದ ಮೆಡಿಕಲ್ ಕಾಲೇಜು ಮೇಲೆ ದಾಳಿ ಮಾಡಿದ್ಧಾರೆ. ಜೊತೆಗೆ ಸದಾಶಿವನಗರದ ಅವರ ಮನೆ ಮೇಲೂ ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಮನೆ ಮೇಲೆ ಐಟಿ ದಾಳಿಯಾಗಿದೆ.
ಸಿದ್ಧಾರ್ಥ ಕಾಲೇಜಿನಲ್ಲಿ 10 ಅಧಿಕಾರಿಗಳ ತಂಡ ದಾಳಿ ನಡೆಸಿ ಬೆಳಗ್ಗೆಯಿಂದಲೂ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ಟಮಕ ಬಳಿಯ ಜಾಲಪ್ಪ ಕಾಲೇಜು ಮೇಲೂ ದಾಳಿಯಾಗಿದೆ. ಆರ್ ಎಲ್ ಜಾಲಪ್ಪ ಮಾಜಿ ಸಂಸದ. ಬೆಳ್ಳಂ ಬೆಳಗ್ಗೆ ಇಬ್ಬರು ನಾಯಕರ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, "ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ. ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಅಂತ ಹೇಳಲಾಗುತ್ತಿದೆ. ಬೇಕಾದಷ್ಟು ಹಣ ಇದೆ. ಅಷ್ಟಿದ್ದರೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದ್ದಾರೆ.
ಇಂದಿನಿಂದ ವಿಧಾನಸಭೆ ಚಳಿಗಾಲ ಅಧಿವೇಶನ ಆರಂಭ; ಬಿಜೆಪಿ-ವಿಪಕ್ಷಗಳ ನಡುವೆ ನೆರೆ ವಿಚಾರದಲ್ಲಿ ಏರ್ಪಡಲಿದೆ ಜಿದ್ದಾಜಿದ್ದಿ?
ತುಮಕೂರಿನಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳ ಮೇಲೆ ಬೆಂಗಳೂರು ಐಟಿ ಸೆಲ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.