ಬೆಂಗಳೂರು (ಡಿ.06): ಗುಜರಾತ್ ಚುನಾವಣೆ ಫಲಿತಾಂಶ (Gujarath Election Result) ಡಿಸೆಂಬರ್ 8 ರಂದು ಹೊರಬೀಳಲಿದೆ. ಇತ್ತ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿಗೆ (BJP) ಬಹುಮತ ಬರಲಿದೆ ಎಂದು ಹೇಳ್ತಿದೆ. ಈ ಫಲಿತಾಂಶ ಕರ್ನಾಟಕದ (Karnataka) ಮೇಲೂ ಪರಿಣಾಮ ಬೀರುತ್ತದೆ ಎನ್ನುವ ಮಾತುಗಳು ಸಹ ಕೇಳಿ ಬಂದಿದೆ. ಈ ಬಗ್ಗೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ ಎಂದ್ರು. ರಾಜ್ಯದಲ್ಲಿ ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಜನ ಉತ್ತಮ ಆಡಳಿತ, ಅಭಿವೃದ್ಧಿಗೆ ಬೆಂಬಲ ನೀಡ್ತಾರೆ
ಡಾ.ಬಿ ಆರ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಜನ ಇದೀಗ ಉತ್ತಮ ಆಡಳಿತ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲ ನೀಡೋದಿಲ್ಲ ಎನ್ನುವುದು ಈ ಸಮೀಕ್ಷೆಯಿಂದ ಸ್ಪಷ್ಟವಾಗಿದೆ ಎಂದು ಹೇಳಿದ್ರು.
ಮೋದಿ ನಾಯಕತ್ವಕ್ಕೆ ಜನರ ಬೆಂಬಲವಿದೆ
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಬಾರಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ ಎಂದು ಹೇಳಿದ್ರು. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು, ಗುಜರಾತ್ ನಲ್ಲಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದು ಬೊಮ್ಮಾಯಿ ಹೇಳಿದ್ರು.
ಮಹಾ ಸಚಿವರಿಗೂ ಚುನಾವಣೆಗೂ ಸಂಬಂಧವಿಲ್ಲ
ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ.
ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ
ಸುಪ್ರೀಂಕೋರ್ಟ್ ನಲ್ಲಿ ಪ್ರಕರಣವಿದ್ದು, ನಮ್ಮ ನಡೆ ಸಂವಿಧಾನ ಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಇದನ್ನೂ ಓದಿ: Karnataka Politics: ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಎಂಎಲ್ಸಿ ಎಚ್ ವಿಶ್ವನಾಥ್, ಕುತೂಹಲ ಮೂಡಿಸಿದ ನಡೆ!
ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಗಳನ್ನು ಕುರಿತ ಎಕ್ಸಿಟ್ ಪೋಲ್ ಗಳು ಎರಡೂ ರಾಜ್ಯಗಳಲ್ಲಿ ಬಿಜೆಪಿ (BJP) ಮೇಲುಗೈ ಸಾಧಿಸಲಿದೆ ಎಂದು ಹೇಳುತ್ತಿವೆ. ಈ ಬಗ್ಗೆ ಮಾತಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯವನರು (Siddaramaiah) ಗುಜರಾತನಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವುದನ್ನು ಅರೆಮನಸ್ಸಿನಿಂದ ಒಪ್ಪಿಕೊಳ್ಳುತ್ತಾರೆ ಆದರೆ, ಹಿಮಾಚಲ ಪ್ರದೇಶದಲ್ಲಿ ತೀವ್ರ ಪೈಪೋಟಿ ಎಂದು ಹೇಳಿದ್ದಾರೆ. ಎರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರವು ಎಂದು ಹೇಳಿದ್ರು.
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 66 ನೇ ಪುಣ್ಯಸ್ಮರಣೆ ಹಿನ್ನೆಲೆ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದ್ರು. ನಾನು ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ಒತ್ತಾಯ ಮಾಡುತ್ತೇನೆ, ಪ್ರಿಮ್ಯಾಟ್ರಿಕ್ ವಿದ್ಯಾರ್ಥಿಗಳಿಗೆ ನಿಲ್ಲಿಸಿರುವ ವಿದ್ಯಾರ್ಥಿವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ರು. ಬಾಬಾಸಾಹೇಬ್ ಅಂಬೇಡ್ಕರ್ ನಮಗೆ ಇಂತಹ ಸಂವಿಧಾನ ಕೊಡದಿದ್ದರೆ ಮೋದಿ ಪ್ರಧಾನಿ ಆಗ್ತಿರಲಿಲ್ಲ, ಹಾಗೇ ನಾನೂ ಕೂಡ ಮುಖ್ಯಮಂತ್ರಿ ಆಗ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ