Government Order: ಪ್ರತಿ ವರ್ಷ ಮಾರ್ಚ್ 16 ರಂದು ಸರ್ಕಾರದ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ. ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ.

ಜಗದ್ಗುರು ರೇಣುಕಾಚಾರ್ಯ

ಜಗದ್ಗುರು ರೇಣುಕಾಚಾರ್ಯ

  • Share this:
ಬೆಂಗಳೂರು (ಮಾ 25): ಜಗದ್ಗುರು ಶ್ರೀ ರೇಣುಕಾಚಾರ್ಯ (Jagadguru Renukacharya) ಜಯಂತಿಯನ್ನು (Jayanti ) ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ (State Government) ಕೈಗೊಂಡಿದೆ. ಈ ಸಂಬಂಧ ಶುಕ್ರವಾರ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ. ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು.
 ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಆದೇಶ ಹೊರಡಿಸಿದೆ.ಬೆಂಗಳೂರು: ಟಿಪ್ಪು ಇತಿಹಾಸವನ್ನು ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ: ಬಿ.ಸಿ ನಾಗೇಶ್ ಸ್ಪಷ್ಟನೆ


ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಲಾಗಿದೆಯಾ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ, ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸವನ್ನು ಕೈಬಿಟ್ಟಿಲ್ಲ. ಆದರೆ, ಟಿಪ್ಪು ಬಗ್ಗೆ ವೈಭವೀಕರಿಸಿದ ಮಾಹಿತಿಗೆ ಬ್ರೇಕ್ ಹಾಕಲಾಗಿದೆ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಹಾಕಲಾಗಿದೆ. ಈ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಸತ್ಯಾಸತ್ಯತೆ ಇನ್ನಷ್ಟೇ ತಿಳಿದುಬರಬೇಕಿದೆ.

ಆದರೆ, ಪಠ್ಯ ಪುಸ್ತಕದಲ್ಲಿ ಟಿಪ್ಪು ಇತಿಹಾಸವನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ. ಟಿಪ್ಪು ಇತಿಹಾಸ ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ. ಇತಿಹಾಸದ ಕೆಲ ವಿಚಾರಗಳು ಪಠ್ಯ ಪುಸ್ತಕದಲ್ಲಿ ಕಡೆಗಣನೆ ಮಾಡಲಾಗಿತ್ತು. ಕಡೆಗಣಿಸಿದ ವಿಷಯವನ್ನು ಪರಿಚಯಿಸಲು ಪ್ರಯತ್ನಿಸ್ತಿದ್ದೇವೆ. ಇತಿಹಾಸವನ್ನು ತಿರುಚಲು ಯತ್ನಿಸಿದ್ದನ್ನ ಸರಿಪಡಿಸುತ್ತೇವೆ. ಪಠ್ಯದಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ಈ ಬಗ್ಗೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Hubballi: ಸ್ಪೀಕರ್ ಬಾಯಲ್ಲಿ RSS ಮಂತ್ರ, ಎಲ್ಲಿ ಅಡಗಿತ್ತು ಸಿದ್ದರಾಮಯ್ಯರ ವೀರಾವೇಶ; ಕುಮಾರಸ್ವಾಮಿ ಕಿಡಿ

ದುಪಟ್ಟಾ ಧರಿಸಲು ಅನುಮತಿ ನೀಡಲು ಸಿದ್ದರಾಮಯ್ಯ ಆಗ್ರಹದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒತ್ತಡಕ್ಕೆ ಮಣಿದು ದುಪಟ್ಟಾಗೆ ಆಗ್ರಹಿಸಿದ್ದಾರೆ. ತಮ್ಮ ಒಟ್ಟು ಭಾಷಣದಲ್ಲಿ ಹಿಜಾಬ್ ಬಗ್ಗೆ ಮಾತನಾಡಿರಲಿಲ್ಲ. ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಇರುವ ಪ್ರಾಮುಖ್ಯತೆ ಗೊತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪ್ರಾಮುಖ್ಯತೆ ಬಗ್ಗೆ ಗೊತ್ತಿದೆ. ಹೈಕೋರ್ಟ್​ನ ಹಿಜಾಬ್ ತೀರ್ಪನ್ನ ಸರ್ಕಾರ ಪಾಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರ ಭೂ ಪರಿಹಾರ ಸರಳೀಕರಣ- ಸಚಿವ ನಿರಾಣಿ

ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.

ಇದನ್ನೂ ಓದಿ: Kodagu: ಕುಲಗೋವುಗಳ ಸಮ್ಮೇಳನದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಖಾಲಿ ಮಾಡಿಸಿದ ಬಜರಂಗದಳದ ಮುಖಂಡರು

ವಿಧಾನಸಭೆಯಲ್ಲಿಂದು ಶಾಸಕ ಎನ್.ಎ. ಹ್ಯಾರಿಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ  ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕಾಯ್ದೆಗಳು ಪ್ರತ್ಯೇಕವಾಗಿದ್ದವು. ಇತ್ತೀಚಿಗೆ ಹಾಲಿ ಇದ್ದ ಕೆಐಎಡಿಬಿ ಕಾಯ್ದೆಗೆ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಿರುವುದರಿಂದ ರೈತರಿಗೆ ತೊಂದರೆಯಾಗದಂತೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಹೊಸ ಭೂ ಸ್ವಾಧೀನ ಕಾಯ್ದೆ 2013ರ ಅನ್ವಯ ಭೂ ಪರಿಹಾರ ಒದಗಿಸುವ ಸಂಬಂಧ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇನ್ನು ಮುಂದೆ ಸರ್ಕಾರ ಯಾವುದೇ ವಿಳಂಬವಾಗದಂತೆ ಪರಿಹಾರ ವಿತರಣೆ ಮಾಡಲಿದೆ ಎಂದರು.

Published by:Pavana HS
First published: