ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಅವರನ್ನು ಬಿಜೆಪಿ (BJP) ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ (PM Program) ಕೈ ಬಿಡಲಾಗಿದೆ. ರಾಷ್ಟ್ರೀಯ ಯುವಜನೋತ್ಸವ (National Yuva Janotsva) ಕಾರ್ಯಕ್ರಮಕ್ಕೆ ನಾಳೆ (ಜನವರಿ 12) ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ. ದಸರಾ ಸಮಯದಲ್ಲಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಆಗಮಿಸಿದ್ದ ವೇಳೆಯೂ ಇದೇ ರೀತಿ ನಡೆದಿತ್ತು. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದಲ್ಲಿಯೂ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಶೆಟ್ಟರ್ ಅಸಮಾಧಾನ ಹೊರ ಹಾಕಿದಾಗ ವೇದಿಕೆಯಲ್ಲಿ ಸ್ಥಾನ ಮೀಸಲಿರಿಸಲಾಗಿತ್ತು.
ಇದೀಗ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಜಗದೀಶ್ ಶೆಟ್ಟರ್ ಅವರಿಗೆ ಕೊಕ್ ಕೊಡಲಾಗಿದೆ. ಜನವರಿ 12ರಂದು ಹುಬ್ಬಳ್ಳಿಯ ಕುಸಗಲ್ ರೈಲ್ವೇ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ.
ವೇದಿಕೆಯಲ್ಲಿ ಯಾರಿಗೆಲ್ಲಾ ಸ್ಥಾನ?
ಪ್ರಧಾನಿ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅನುರಾಗ್ ಠಾಕೂರ್, ನಿಸಿಥ್ ಪ್ರಮಾಣಿಕ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಸಿ.ನಾರಾಯಣಗೌಡ, ಹಾಲಪ್ಪ ಆಚಾರ್, ಶಂಕರಪಾಟೀಲ ಮುನೇನಕೊಪ್ಪ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದರೂ ಸ್ಥಳೀಯ ಶಾಸಕರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈ ಬಿಡಲಾಗಿದೆ. ಈ ಕಡೆಗಣನೆಗೆ ಶೆಟ್ಟರ್ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.
ಶೆಟ್ಟರ್ ಅವರಿಗೆ ಟಿಕೆಟ್ ತಪ್ಪುತ್ತಾ?
ಈ ಕಡೆಗಣನೆ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪುತ್ತಾ ಅನ್ನೋ ಅನುಮಾನಗಳನ್ನು ಮತ್ತಷ್ಟು ಬಲವಾಗಿಸಿವೆ. ಈ ಮೂಲಕ ಬಿಜೆಪಿ ಟಿಕೆಟ್ ನೀಡಲ್ಲ ಎಂಬ ಸುಳಿವು ನೀಡುತ್ತಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿ ಬರುತ್ತಿವೆ. ಪ್ರಧಾನಿ ಕಾರ್ಯಕ್ರಮದ ಸಿದ್ಧತೆಯನ್ನೂ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಪ್ರತ್ಯೇಕವಾಗಿಯೇ ವೀಕ್ಷಿಸಿದ್ದಾರೆ.
ಬಿಜೆಪಿಯ ಲಕ್ಕಿ ಗ್ರೌಂಡ್ನಲ್ಲಿ ಮೋದಿ ಕಾರ್ಯಕ್ರಮ
ಬಿಜೆಪಿಯ ಲಕ್ಕಿ ಗ್ರೌಂಡ್ನಲ್ಲಿ (BJP Lucky Ground) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಗ್ರೌಂಡ್ನಲ್ಲಿ ಕಾರ್ಯಕ್ರಮ ಮಾಡಿದಾಗಲೆಲ್ಲಾ ಬಿಜೆಪಿಗೆ (BJP) ಹೆಚ್ಚು ಸೀಟು ಬಂದಿರೋದ್ರಿಂದ ಇದು ಲಕ್ಕಿ ಗ್ರೌಂಡ್ ಎನಿಸಿಕೊಂಡಿದೆ. ಅದೇ ಕಾರಣಕ್ಕೆ ಧಾರವಾಡದ (Dharwad) ಕಾರ್ಯಕ್ರಮಕ್ಕೆ ಹುಬ್ಬಳ್ಳಿಯಲ್ಲಿ (Hubballi) ಉದ್ಘಾಟನೆ ಭಾಗ್ಯ ಸಿಕ್ಕಿದೆ.
ಹುಬ್ಬಳ್ಳಿಯಲ್ಲಿ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ರೈಲ್ವೇ ಮೈದಾನ (Hubballi Railway Ground) ಬಿಜೆಪಿಯ ಲಕ್ಕಿ ಗ್ರೌಂಡ್. ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಪಿಎಂ ಆಗಿದ್ದಾಗ ಇದೇ ಗ್ರೌಂಡ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದನ್ನೂ ಓದಿ: Karnataka Politics: ಗುಜರಾತ್ ಮಾದರಿಯಲ್ಲಿ ಮಾಜಿ ಸಿಎಂಗೆ ಟಿಕೆಟ್ ತಪ್ಪಿಸಲು ಬಿಜೆಪಿಯಲ್ಲಿಯೇ ತಯಾರಿ!
ಜನವರಿ 19ಕ್ಕೆ ಕರ್ನಾಟಕಕ್ಕೆ ಮೋದಿ?
ಜನವರಿ 19ಕ್ಕೆ ಕಲಬುರಗಿಯಲ್ಲಿ ಐತಿಹಾಸಿಕ ಬಂಜಾರ ಸಮಾವೇಶ ಆಯೋಜಿಸಿದ್ದು, ಅಲ್ಲೂ ಉತ್ತರ ಕರ್ನಾಟಕ ಜನರನ್ನ ಸೆಳೆಯೋಕೆ ಪ್ರಧಾನಿಯವರನ್ನು ಆಹ್ವಾನಿಸಿದ್ದಾರೆ. 12 ಫೆಬ್ರವರಿ 2023ಕ್ಕೆ ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿಯವರು ಬರ್ತಿದ್ದಾರೆ. ಶಿವಮೊಗ್ಗ ಕಾರ್ಯಕ್ರಮದ ಮೂಲಕ ಮಲೆನಾಡು ಭಾಗದಲ್ಲಿ ಮತಬೇಟೆಗೆ ಬಿಜೆಪಿ ಲಗ್ಗೆ ಹಾಕ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ