ಹುಬ್ಬಳ್ಳಿ: ಬಿಜೆಪಿಯನ್ನು (BJP) ಮುಗಿಸಲು ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಅದರ ಭಾಗವಾಗಿಯೇ ನಮ್ಮಂಥವರನ್ನು ಟಾರ್ಗೆಟ್ ಮಾಡಲಾಗಿದೆ. ಬಿಜೆಪಿ ಅಧಿಕಾರಕ್ಕೆ ತರೋದು ಬೇಡ ಅಂತ ಹೀಗಾ ಮಾಡ್ತಿದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಹೇಳಿದ್ದಾರೆ. ಇಂದು ಶಿರಸಿಗೆ (Sirsi) ತೆರಳುತ್ತಿದ್ದೇನೆ. ಸ್ಪೀಕರ್ ಕಾಗೇರಿ (Speaker Kageri) ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಜೊತೆ ಮಾತನಾಡಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಎಂದು ತಿಳಿಸಿದರು.
ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದ ಜಗದೀಶ್ ಶೆಟ್ಟರ್, ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿ, ಶಾಗೆ ಏನೂ ಗೊತ್ತಿಲ್ಲ
ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಪ್ಷನ್ ಓಪನ್ ಇವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಮೋದಿ, ಅಮಿತ್ ಶಾಗೆ ಗ್ರೌಂಡ್ ಲೆವಲ್ ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು, ಇಲ್ಲಿನ ನಾಯಕರು ಬಿಜೆಪಿ ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಬೇಸರ ಹೊರಹಾಕಿದರು.
ಇದನ್ನೂ ಓದಿ: Ajay Singh: ಗೆಲುವಿನ ಜಯಭೇರಿ ನಿರೀಕ್ಷೆಯಲ್ಲಿ ಮಾಜಿ ಸಿಎಂ ಪುತ್ರ; ಇಲ್ಲಿದೆ ಜೇವರ್ಗಿ ಶಾಸಕರ ಕಿರು ಪರಿಚಯ
ಎಲ್ಲರನ್ನೂ ಸಮಾನವಾಗಿ ಕಂಡಿದ್ದೇನೆ
ಕಾಂಗ್ರೆಸ್‌ನ ಮುಖಂಡರು ಯಾರೂ ಸಂಪರ್ಕಿಸಿಲ್ಲ, ಆದರೆ ಪ್ರತಿನಿಧಿ ಕಳಿಸಿದ್ದಾರೆ. ಕೆಲವರ ಹಿತಕ್ಕಾಗಿ ಬಿಜೆಪಿ ಬಲಿಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ. ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ. ಟೇಕನ್ ಇಟ್ ಗ್ರ್ಯಾಂಟೆಡ್ ಅನ್ನೋ ಹಾಗೆ ಮಾತಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ