ಹುಬ್ಬಳ್ಳಿ: ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಅವರಿಗೆ ಸ್ಥಳೀಯ ನಾಯಕರ ಬಂಡಾಯದ ಬಿಸಿ ತಾಗುತ್ತಿದೆ. ನಾಳೆ ನಾಮಪತ್ರ ಸಲ್ಲಿಕೆಗೆ (Nomination) ಕೊನೆಯ ದಿನವಾಗಿದ್ದು, ಬಂಡಾಯ ಅಭ್ಯರ್ಥಿಗಳ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯಲ್ಲ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ್ (Altaf Kittur) ಹೇಳಿದ್ದಾರೆ. ಕಾಂಗ್ರೆಸ್ ಆಶ್ವಾಸನೆ ಕೊಟ್ಟು, ಏನೂ ಅಧಿಕಾರ ಕೊಡಲಿಲ್ಲ. ನನಗೆ ಮಾತ್ರ ಅಲ್ಲ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡಿದೆ. ಹೀಗಾಗಿ ನಾನು ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದಿದ್ದಾರೆ.
ನನಗೆ ಬಿಜೆಪಿನೂ ವಿರೋಧಿ, ಕಾಂಗ್ರೆಸ್ ನೂ ವಿರೋಧಿ. ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ಉಂಟಾಗಿದೆ. ಯಾವುದೇ ಕಾರಣಕ್ಕೂ ಅಖಾಡದಿಂದ ಹಿಂದೆ ಸರಿಯಲ್ಲ ಎಂದು ಅಲ್ತಾಫ್ ಕಿತ್ತೂರ್ ಸ್ಪಷ್ಟಪಡಿಸಿದ್ದಾರೆ.
ಯಾರೇ ನನ್ನನ್ನು ಟಾರ್ಗೆಟ್ ಮಾಡಲಿ, ನನ್ನ ಕೆಲಸ ನಾನು ಮಾಡುತ್ತೇನೆ. ಸೆಂಟ್ರಲ್ ಕ್ಷೇತ್ರದ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ನನ್ನನ್ನು ಸೋಲಿಸಲು ನಾಗಪುರದಿಂದ ವಿಸ್ತಾರಕರು ಬಂದಿದಾರೆ ಅಂತ ಹೇಳ್ತಾರೆ.
ಜಗದೀಶ್ ಶೆಟ್ಟರ್ ಪ್ರಶ್ನೆ
ಎಲ್ಲಿಂದ ಬೇಕಾದ್ರೂ ವಿಸ್ತಾರಕರು ಬರಲಿ. ಆದ್ರೆ ಅರ್ಎಸ್ಎಸ್ ಕೇಂದ್ರ ಸ್ಥಾನವಿರುವ ನಾಗಪುರದಲ್ಲಿಯೇ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಸೋತಿತ್ತು. ಹಾಗಿದ್ರೆ ವಿಸ್ತಾರಕರ ತಂತ್ರಗಾರಿಕೆ ಅಲ್ಲೇಕೆ ವಿಫಲವಾಯ್ತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟೆರ್ ಪ್ರಶ್ನೆ ಮಾಡಿದ್ದಾರೆ.
ರಾಹುಲ್ ಗಾಂಧಿ ಜೊತೆ ಚರ್ಚೆ
ಕೂಡಲಸಂಗಮಕ್ಕೆ ಹೋಗುವ ಮಾರ್ಗ ಮಧ್ಯೆ ರಾಹುಲ್ ಗಾಂಧಿ ಹುಬ್ಬಳ್ಳಿ ಗೆ ಬಂದಿದ್ದರು. ಅವರನ್ನು ಭೇಟಿ ಮಾಡಿ ವಿವಿಧ ವಿಚಾರಗಳನ್ನು ಚರ್ಚಿಸಿದ್ದೇನೆ. ಲಿಂಗಾಯತ ನಾಯಕರಿಗೆ ಬಿಜೆಪಿಯಲ್ಲಿ ಅನ್ಯಾಯ ಇತ್ಯಾದಿ ವಿಚಾರಗಳೂ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Katta Jagadish Naidu: ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಟ್ಟಾ ಜಗದೀಶ್ ನಾಯ್ಡು ಬಗ್ಗೆ ಗೊತ್ತಿರಬೇಕಾದ ಸಂಗತಿಗಳಿವು!
ಲಿಂಗಾಯತ ಮತಗಳು ಕಾಂಗ್ರೆಸ್ಗೆ ಬರಲಿವೆ
ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಕಾರಣವಾದ ಅಂಶಗಳು, ಪಕ್ಷ ಸಂಘಟನೆ, ಪಕ್ಷದಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನಮಾನದ ಕುರಿತು ಚರ್ಚೆ ನಡೆಸಿದ್ದೇನೆ. ಕಾಂಗ್ರೆಸ್ ನಲ್ಲಿ ಐವತ್ತಕ್ಕೂ ಹೆಚ್ಚು ಲಿಂಗಾಯತರಿಗೆ ಟಿಕೇಟ್ ನೀಡಲಾಗಿದೆ. ಹೀಗಾಗಿ ಲಿಂಗಾಯತರ ಮತಗಳ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ಗೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ