ಮಾಜಿ ಸಚಿವ ಜನಾರ್ದನ ರೆಡ್ಡಿ (Former Minister Janardhan Reddy) ರಾಜಕೀಯ ನಡೆ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಸುದ್ದಿಗೋಷ್ಠಿ ಮಾಡಿ ಹೊಸ ಪಕ್ಷ ಸ್ಥಾಪನೆ (New Party) ವಿಚಾರವನ್ನು ಹೇಳ್ತಾರೆ ಅಂತ ಹೇಳಲಾಗಿತ್ತು. ಆದ್ರೆ ಹೊಸ ಪಕ್ಷ ಘೋಷಣೆಗೂ ಮುನ್ನ ರಾಜ್ಯದ ಪ್ರಮುಖ ದೇವಸ್ಥಾನ, ಮಠಗಳಿಗೆ ಜನಾರ್ಧನ ರೆಡ್ಡಿ ಭೇಟಿ ನೀಡಲಿದ್ದಾರೆ. ತದನಂತರ ಡಿಸೆಂಬರ್ 25ರಂದು ಬೆಂಗಳೂರಿನಲ್ಲಿ (Bengaluru) ಮಹತ್ವದ ಸುದ್ದಿಗೋಷ್ಠಿ ನಡೆಸೋದಾಗಿ ಜನಾರ್ದನ ರೆಡ್ಡಿ ಹೇಳಿಕೊಂಡಿದ್ದಾರೆ. ತಮ್ಮ ಮುಂದಿನ ವಾರದ ಕಾರ್ಯಕ್ರಮದ ಮಾಹಿತಿಯನ್ನು ಜನಾರ್ದನ ರೆಡ್ಡಿ ತಮ್ಮ ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ (Facebook Page) ಹಂಚಿಕೊಂಡಿದ್ದಾರೆ.
ನಾಳೆಯಿಂದ ರಾಜ್ಯ ಪ್ರವಾಸ ಕೈಗೊಳ್ಳಲು ಜನಾರ್ದನ ರೆಡ್ಡಿ ಮುಂದಾಗಿದ್ದಾರೆ. ನಾಳೆ ತುಮಕೂರಿನ ಸಿದ್ದ ಗಂಗಾ ಮಠ ಹಾಗು ಸಿದ್ದರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಗದಗದ ತೋಂಟದಾರ್ಯ ಶ್ರೀಗಳ ಗದ್ದುಗೆ ಹಾಗೂ ಪುಟ್ಟರಾಜ ಗವಾಯಿಗಳ ಗದ್ದುಗೆಯ ದರ್ಶನ ಪಡೆಯಲಿದ್ದಾರೆ.
ಡಿಸೆಂಬರ್ 21ರಂದು ಮಸ್ಕಿಯಲ್ಲೂ ಪ್ರಮುಖರ ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಡಿ 22 ರಂದು ಗಂಗಾವತಿಯ ಗ್ರಾಮ ದೇವತೆ ದುರ್ಗಾದೇವಿಯ ಜಾತ್ರಾ ಮಹೋತ್ಸವದಲ್ಲಿ ಜನಾರ್ದನ ರೆಡ್ಡಿ ಭಾಗಿಯಾಗಲಿದ್ದಾರೆ.
ಹೊಸ ಪಕ್ಷದ ಘೋಷಣೆ ಸಾಧ್ಯತೆ
ಡಿಸೆಂಬರ್ 25ರಂದು ಬೆಂಗಳೂರಿನ ಪಾರಿಜಾತ ಅಪಾರ್ಟ್ಮೆಂಟ್ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಹಳ ದಿನಗಳ ಬಳಿಕ ಬೆಂಗಳೂರಲ್ಲಿ ಸುದ್ದಿಗೋಷ್ಠಿಗೆ ಮುಂದಾಗಿರುವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷದ ಸ್ಥಾಪನೆ ವಿಷಯನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.
ನಿರಾಸೆಯಿಂದ ದೆಹಲಿಗೆ ಬಂದ ಶ್ರೀರಾಮುಲು!
ಶ್ರೀರಾಮುಲು ಅವರು ಗೆಳೆಯನ ಪರ ಲಾಬಿ ಮಾಡಲು ದೆಹಲಿಗೆ ತೆರಳಿ ನಿರಾಸೆಯಿಂದ ಹಿಂದಿರುಗಿದ್ದಾರೆ. ಎರಡು ದಿನ ದೆಹಲಿಯಲ್ಲಿದ್ದ ಶ್ರೀರಾಮುಲು ರಹಸ್ಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಅತ್ಯಾಪ್ತ ಗೆಳೆಯನನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವಂತೆ ಮಾಡಿಕೊಂಡಿದ್ದರಂತೆ. ಆದ್ರೆ ಈ ಬಗ್ಗೆ ಅಮಿತ್ ಶಾ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ ಎಂದು ಹೇಳಲಾಗಿದೆ
ಇದನ್ನೂ ಓದಿ: Janardhan Reddy: ರಾಜಕೀಯಕ್ಕೆ ಜನಾರ್ದನ ರೆಡ್ಡಿ ಪತ್ನಿ? ಹೊಸ ಪಕ್ಷ ಸ್ಥಾಪನೆ ಮಾಡ್ತಾರಾ?
ಕಲ್ಯಾಣ ಕರ್ನಾಟಕ ಪಕ್ಷ ನೋಂದಣಿ ಪ್ರಕ್ರಿಯೆ
ಶ್ರೀರಾಮುಲು ಅವರಿಗೂ ಮೊದಲೇ ದೆಹಲಿಗೆ ತೆರಳಿದ್ದ ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ಹೊಸ ಪಕ್ಷ ನೋಂದಣಿ ಕಾರ್ಯದಲ್ಲಿ ತೊಡಗಿದ್ದರಂತೆ. ತಮ್ಮ ನೂತನ ಪಾರ್ಟಿಗೆ ಕಲ್ಯಾಣ ಕರ್ನಾಟಕ ಪಕ್ಷ (Kalyana Karnataka Party) ಎಂದು ಹೆಸರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗೆಳೆಯನ ಮಾತು ಒಪ್ಪದ ಗಣಿ ಧಣಿ
ಹೊಸ ಪಕ್ಷ ಸ್ಥಾಪನೆಗೆ ಮುಂದಾಗದಂತೆ ಶ್ರೀರಾಮುಲು ಮನವಿ ಮಾಡಿಕೊಂಡರೂ ಜನಾರ್ದನ ರೆಡ್ಡಿ ಒಪ್ಪಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಇಬ್ಬರು ರಾಜ್ಯಕ್ಕೆ ಹಿಂದಿರುಗಿದ್ದಾರೆ. ಆದ್ರೆ ಜನಾರ್ದನ ರೆಡ್ಡಿ ದೆಹಲಿಯಲ್ಲಿ ಆಪ್ತರ ಮೂಲಕ ಪಕ್ಷದ ನೋಂದಣಿ ಮಾಡಿಸುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Janardhan Reddy: ಜನಾರ್ದನ ರೆಡ್ಡಿ ಮುಂದೆ ಹೊಸ ಆಯ್ಕೆ; ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದ್ರಾ?
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ
ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ವಾಸ್ತವ್ಯ ಹೂಡುವ ವಿಚಾರದ ಬಗ್ಗೆ ಮಾತಾಡಿದ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ರಾಜ್ಯ, ರಾಷ್ಟ್ರ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ. ಜನಾರ್ದನ ರೆಡ್ಡಿ ಹನುಮಮಾಲೆ ಧರಿಸಿ ಆಂಜನಾದ್ರಿಗೆ ಬಂದಿದ್ದಾಗ ನಾನೂ ಭಾಗಿಯಾಗಿದ್ದೆ ಎಂದು ಹೇಳಿದ್ದಾರೆ.
ರಾಜಕೀಯಕ್ಕೆ ಜನಾರ್ದನ ರೆಡ್ಡಿ ಪತ್ನಿ?
ಈ ಎಲ್ಲಾ ಬೆಳವಣಿಗೆ ನಡುವೆ ಪತ್ನಿ ಲಕ್ಷ್ಮಿ ಅರುಣಾ (Janardhan Reddy Wife Laxmi Aruna) ಅವರನ್ನು ರಾಜಕೀಯಕ್ಕೆ ಕರೆ ತರುವ ಕುರಿತು ಜನಾರ್ದನ ರೆಡ್ಡಿ ಚಿಂತನೆ ನಡೆಸಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ. ಈಗಾಗಲೇ ಒಂದು ಹಂತದಲ್ಲಿ ಸಿದ್ಧತೆ ನಡೆಸಿರುವ ಜನಾರ್ದನ ರೆಡ್ಡಿ ಕ್ಷೇತ್ರವನ್ನ ಸಹ ಆಯ್ಕೆ ಮಾಡಿದ್ದಾರಂತೆ.
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಚುನಾವಣೆ ಕಣಕ್ಕಿಳಿಸಲು ಜನಾರ್ದನ ರೆಡ್ಡಿ ಆಪ್ತರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ