• Home
  • »
  • News
  • »
  • state
  • »
  • Karnataka Weather Today: ಅಕ್ಟೋಬರ್ 15 ವರೆಗೆ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ- ಬೆಂಗಳೂರಿನ ಇಂದಿನ ಹವಾಮಾನ ಹೀಗಿರಲಿದೆ

Karnataka Weather Today: ಅಕ್ಟೋಬರ್ 15 ವರೆಗೆ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ- ಬೆಂಗಳೂರಿನ ಇಂದಿನ ಹವಾಮಾನ ಹೀಗಿರಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Rainfall: ಬೆಂಗಳೂರು ಮತ್ತು ಉಪನಗರಗಳಲ್ಲಿ ಅಧಿಕ ಮಳೆಯಾಗಿದ್ದು. ಈಗಾಗಲೇ 150 ಮಿಮೀ ಮಳೆ ದಾಖಲಿಸುವ ಮೂಲಕ ತಿಂಗಳ ಸಾಮಾನ್ಯ ಮಟ್ಟವನ್ನು ತಲುಪಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಮಿಂಚು ಹೆಚ್ಚಾಗಿರಲಿದ್ದು, ಚಂಡಮಾರುತದ ಚಟುವಟಿಕೆ ಇರುವುದರಿಂದ ಗಾಳಿ ಹೆಚ್ಚಿರುತ್ತದೆ.

  • Share this:

Karnataka Rains Today ಬೆಂಗಳೂರು(ಅ.12):ಮುಂಗಾರು (Monsoon)ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ (Javab)ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ(Karnataka) ಸಹ ಕಳೆದ 3 ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದೆ(Rainfall). ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಅಧಿಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.  ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.


ರಾಜ್ಯದ ಇಂದಿನ ಹವಾಮಾನ ಹೇಗಿರಲಿದೆ?


ಇನ್ನು ರಾಜ್ಯದಲ್ಲಿ ಇಂದು ಮತ್ತೆ ಮುಂಗಾರು ಚುರುಕಾಗಲಿದ್ದು,ಧಾರಕಾರ ಮಳೆಯಾಗುವ ಸಾಧ್ಯತೆ ಇದೆ.  ಶಿವಮೊಗ್ಗ, ಬೆಳಗಾವಿ,, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ.


ಬೆಂಗಳೂರಿನಲ್ಲಿ ವಾತಾವರಣ ಹೇಗಿರಲಿದೆ.


ಇದನ್ನೂ ಓದಿ: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು


ಬೆಂಗಳೂರು ಮತ್ತು ಉಪನಗರಗಳಲ್ಲಿ ಅಧಿಕ ಮಳೆಯಾಗಿದ್ದು. ಈಗಾಗಲೇ 150 ಮಿಮೀ ಮಳೆ ದಾಖಲಿಸುವ ಮೂಲಕ ತಿಂಗಳ ಸಾಮಾನ್ಯ ಮಟ್ಟವನ್ನು ತಲುಪಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಮಿಂಚು ಹೆಚ್ಚಾಗಿರಲಿದ್ದು, ಚಂಡಮಾರುತದ ಚಟುವಟಿಕೆ ಇರುವುದರಿಂದ ಗಾಳಿ ಹೆಚ್ಚಿರುತ್ತದೆ.


ಅಲ್ಲದೇ ನಿನ್ನೆ ಸಂಜೆಯಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಗೆ ಜನರು ಅಕ್ಷರಶಃ ನಲುಗಿದ್ದಾರೆ. ನಗರದ ಎಲ್ಲೆಡೆ ಸುರಿದಿರುವ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.  ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತ್ತಗೊಂಡಿದೆ. ಈ ನಡುವೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಿದ ಎಡೆಬಿಡದ ಮಳೆಗೆ ಟರ್ಮಿನಲ್​ ಮುಂಭಾಗ ನೀರು ನಿಂತಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.


ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ


ಕಳೆದ 24 ಗಂಟೆಗಳಲ್ಲಿ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಗಂಗಾ ಪಶ್ಚಿಮ ಬಂಗಾಳದಲ್ಲಿ ಸಾಧಾರಣ ಮಳೆಯಾಗಿದೆ.ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ, ತಮಿಳುನಾಡಿನ ಉಳಿದ ಭಾಗಗಳು, ಕರ್ನಾಟಕ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ದಕ್ಷಿಣ ಗುಜರಾತ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಿದೆ. ಲಕ್ಷದ್ವೀಪ, ರಾಯಲಸೀಮ, ಪಶ್ಚಿಮ ಮಧ್ಯಪ್ರದೇಶ, ಈಶಾನ್ಯ ಭಾರತ ಮತ್ತು ಆಗ್ನೇಯ ರಾಜಸ್ಥಾನದಲ್ಲಿ ಲಘು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಯಾವ್ಯಾವ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮತ್ತು ಕರಾವಳಿ ಕರ್ನಾಟಕದ ಮೇಲೆ ಕೆಲವು ಭಾರೀ ಮಳೆಯಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ  ಮಹಾರಾಷ್ಟ್ರ ಕೊಂಕಣ, ಗೋವಾ, , ರಾಯಲಸೀಮಾ, ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಮಳೆ ಮುಂದುವರೆಯುತ್ತದೆ. ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು ಸಮುದ್ರ ತೀರದ ಜನರಿಗೆ ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: ತಮಿಳುನಾಡಿಗೆ 25.84 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ


ತಮಿಳುನಾಡಿನ ಉಳಿದ ಭಾಗ, ಲಕ್ಷದ್ವೀಪ, ಒಳ ಕರ್ನಾಟಕ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ಮತ್ತು ಜಮ್ಮು ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್ ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ಪಶ್ಚಿಮ ಬಂಗಾಳ, ಒಡಿಶಾದ ಕೆಲವು ಭಾಗಗಳು, ನೈಋತ್ಯ ಮಧ್ಯಪ್ರದೇಶ, ದಕ್ಷಿಣ ಗುಜರಾತ್‌ನ ಕೆಲವು ಭಾಗಗಳು ಮತ್ತು ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಪಾಕೆಟ್‌ಗಳಲ್ಲಿ  ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

Published by:Sandhya M
First published: