2 ಎ ಮೀಸಲಾತಿ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 1 ರಿಂದ ಮತ್ತೆ ಧರಣಿ

ಕೊಡಗಿನ ಕೊಡ್ಲಿಪೇಟೆಯಲ್ಲಿ ನಡೆದ ಅಭಿಯಾನದಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ಪ್ರತಿಭಟನೆ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.

ಕೊಡಗಿನ ಕೊಡ್ಲಿಪೇಟೆಯಲ್ಲಿ ನಡೆದ ಅಭಿಯಾನದಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ಪ್ರತಿಭಟನೆ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.

ಕೊಡಗಿನ ಕೊಡ್ಲಿಪೇಟೆಯಲ್ಲಿ ನಡೆದ ಅಭಿಯಾನದಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ಪ್ರತಿಭಟನೆ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.

  • Share this:
ಕೊಡಗು (ಆ. 29) : 2ಎ ಮೀಸಲಾತಿ (2 A reservation) ಈಡೇರದಿದ್ದರೆ ಅಕ್ಟೋಬರ್ 1 ರಿಂದ ಮತ್ತೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ  (jaya mruthyunjaya swamiji )ಸರ್ಕಾರವನ್ನು ಎಚ್ಚರಿಸಿದ್ದಾರೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಕೊಡಗಿನ ಕೊಡ್ಲಿಪೇಟೆಯಲ್ಲಿ ನಡೆದ ಅಭಿಯಾನದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಅಕ್ಟೋಬರ್ 1 ರಂದು ಮಾಜಿ ಸಿಎಂ ಜೆಎಚ್ ಪಟೇಲ್ ಅವರ ಜನ್ಮದಿನವಿದೆ. ಅವರ ಜನ್ಮದಿನ ಬೆಂಗಳೂರಿನಲ್ಲಿ ಆಚರಿಸಿ, ಅದೇ ವೇದಿಕೆಯಲ್ಲಿ ಧರಣಿ ಆರಂಭಿಸಲಾಗುವುದು ಎಂದರು.

ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಹೋರಾಟ, ಅಭಿಯಾನ ನಡೆಯುತ್ತಿರುವುದು ಸರ್ಕಾರಕ್ಕೆ ಗೊತ್ತಿದೆ. ಕೊಡಗಿನ ಕೂಗು ವಿಧಾನಸೌಧ ತಲುಪುತ್ತದೆ. ನಮ್ಮ ಹೋರಾಟ ಮತ್ತು ಸರ್ಕಾರದ ನಡುವೆ ಸಿಸಿ ಪಾಟೀಲ್ ಅವರಿದ್ದಾರೆ. ಅವರ ಮೂಲಕವೂ ನಮ್ಮ ಅಭಿಯಾನದ ಸಂಪೂರ್ಣ ಮಾಹಿತಿ ಇದೆ. ಸೆಪ್ಟೆಂಬರ್ 30 ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನ ನಡೆಯಲಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಂಬಿಕೆ ಇದೆ. ಒಂದು ವೇಳೆ ಮೀಸಲಾತಿಯ ಬೇಡಿಕೆ ಈಡೇರದಿದ್ದರೆ ಮತ್ತೆ ಧರಣಿ ಆರಂಭವಾಗುವುದು ಖಚಿತ ಎಂದು ತಿಳಿಸಿದರು.

ಧರಣಿ ಆರಂಭ ಆಗುವವರೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ನೀಡಲ್ಲ ಎಂದುಕೊಂಡಿದ್ದೇವೆ. ಹೀಗಾಗಿ ನಮ್ಮ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದಿದ್ದಾರೆ. ಇನ್ನು ಪಂಚಮಸಾಲಿ ಹೋರಾಟದ ಮುಖಂಡ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಕಳೆದ ಹೋರಾಟದಲ್ಲಿ 10 ಲಕ್ಷ ಜನರನ್ನು ಸೇರಿಸಿದ್ದೆವು. ಈ ಬಾರಿ ಇದು ಕೊನೆಯ ಹೋರಾಟವಾಗಿದ್ದು, ಮಾಡಿ ಇಲ್ಲವೆ ಮಡಿ ಎಂಬ ನಿರ್ಣಯಕ್ಕೆ ಬಂದಿದ್ದೇವೆ. ನಮ್ಮ ಬೇಡಿಕೆ ಈಡೇರಬೇಕು ಇಲ್ಲ, ನಾವು ಮಡಿಯಬೇಕು. ಈ ಬಾರಿಯ ಹೋರಾಟದಲ್ಲಿ 20 ಲಕ್ಷ ಜನರನ್ನು ಸೇರಿಸಲಿದ್ದೇವೆ ಎಂದು ಎಚ್ಚರಿಸಿದರು.

ಇದನ್ನು ಓದಿ: ಅರ್ಧ ಎಕರೆ ಜಮೀನಿಗಾಗಿ ನಡೆಯಿತು ಮಾರಣ ಹೋಮ; ಒಂದೇ ಕುಟುಂಬದ ನಾಲ್ವರ ಹತ್ಯೆ

ಹಿಂದಿನ ಹೋರಾಟ ಆದಾಗ ಮಾಜಿ ಸಿಎಂ ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದರು. ಅವರು ನಮಗೆ ಆರು ತಿಂಗಳ ಸಮಯಾವಕಾಶ ನೀಡುವಂತೆ ಕೇಳಿಕೊಂಡಿದ್ದರು. ಇದೀಗ ಸಿಎಂ ಬದಲಾಗಿರಬಹುದು. ಆದರೆ ಅವರದೇ ಪಕ್ಷದ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾರೆ . ಅವರು ನಮ್ಮ ಮನವಿಯನ್ನು ಸ್ವೀಕರಿಸಿ ಬೇಡಿಕೆ ಈಡೇರಿಸುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಲೈಂಗಿಕ ದೌರ್ಜನ್ಯದ ಕುರಿತು ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಸುರಕ್ಷತೆಯನ್ನು ನೀಡುವ ರಾಜ್ಯ ಎನ್ನುವಂತಿತ್ತು. ಆದರೆ ಈ ಘಟನೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಭಯದಿಂದ ಓಡಾಡುವ ಸ್ಥಿತಿ ಇದೆ. ಇದು ಇಡೀ ರಾಜ್ಯದ ನೈತಿಕತೆ ತಲೆತಗ್ಗಿಸುವಂತಾಗಿದೆ. 2011 ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಪ್ರಕರಣದ ಬಳಿಕ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನನ್ನು ರಾಜ್ಯದಲ್ಲೂ ಜಾರಿಗೆ ತಂದು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದಿದ್ದಾರೆ. ಮಹಿಳೆಯರ ರಕ್ಷಣೆ ನೀಡಬೇಕೆಂದು ಸರ್ಕಾರ ಜಾರಿಗೆ ತರುವ ಕಾನೂನುಗಳು ಅವರ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವಂತೆ ಆಗಬಾರದು ಎಂದು ಆಗ್ರಹಿಸಿದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:Seema R
First published: