news18-kannada Updated:February 6, 2020, 11:49 AM IST
ಸಿದ್ದರಾಮಯ್ಯ-ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು (ಫೆಬ್ರವರಿ 06); ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಿಗೆ ಬಿಜೆಪಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಠಕ್ಕರ್ ನೀಡಲು ಮುಂದಾಗಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.
ಶಾಸಕ ರಿಷ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾಗಿದ್ದು ಏಕೈಕ ವಿಧಾನ ಪರಿಷತ್ ಸ್ಥಾನಕ್ಕೆ ಇದೇ ತಿಂಗಳ 17 ರಂದು ಚುನಾವಣೆ ನಡೆಯಲಿದೆ. ಇಂದು ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆದರೆ, ನಿನ್ನೆವರೆಗೆ ಲಕ್ಷ್ಮಣ ಸವದಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಹೇಳಿದ್ದ ಮೈತ್ರಿ ನಾಯಕರು ಇಂದು ನಡೆದಿರುವ ದಿಢೀರ್ ಬೆಳವಣಿಗೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಿಎಂ ಮಾತುಕತೆ ನಡೆಸಿದ್ದು,ಇಂದು ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕೈ ಮುಖಂಡ ಅನಿಲ್ ಕುಮಾರ್ ನಾಮಪತ್ರ ಸಲ್ಲಿಸುವುದು ಬಹುತೇಕ ಖಚಿತವಾಗಿದೆ.
ಬಿಜೆಪಿ ಅಸಮಾಧಾನಿತ ,ಸಚಿವ ಸ್ಥಾನ ವಂಚಿತ ಶಾಸಕರನ್ನು ಸೆಳೆದು ವಿಧಾನ ಪರಿಷತ್ನಲ್ಲಿ ಮತ ಹಾಕಿಸಿಕೊಳ್ಳಲು ಯೋಜನೆಗೆ ಮೈತ್ರಿ ನಾಯಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ರಾಜ್ಯ ಸಂಪುಟ ವಿಸ್ತರಣೆ; 10 ನೂತನ ಸಚಿವರ ಪ್ರಮಾಣ ವಚನ; ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ
First published:
February 6, 2020, 10:47 AM IST