ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಎಂಎಲ್​​ಸಿ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮಾಜಿ ಎಂಎಲ್​ಸಿ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಎಸ್ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ ಪಿ ರಂಗನಾಥ್  ಅವರುಗಳ ಹೆಸರುಗಳನ್ನು ಅಂತಿಮಗೊಳಿಸಿದೆ.

ಜೆಡಿಎಸ್

ಜೆಡಿಎಸ್

 • Share this:
  ಬೆಂಗಳೂರು(ಅಕ್ಟೋಬರ್​. 01): ಅಕ್ಟೋಬರ್ 28 ರಂದು ನಡೆಯುವ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರ ಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮಾಜಿ ಎಂಎಲ್​ಸಿ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಎಸ್ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ ಪಿ ರಂಗನಾಥ್ ಅವರುಗಳ ಹೆಸರುಗಳನ್ನು ಅಂತಿಮಗೊಳಿಸಿದೆ. ಇನ್ನೂ ಶಿರಾ ಕ್ಷೇತ್ರದಲ್ಲಿ ಮಾಜಿ ಸಚಿವ ಬಿ.ಸತ್ಯನಾರಾಯಣ ಅವರ ಕುಟುಂಬದವರು ಅಲ್ಲದೆ ಇತರೆ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಈಗಾಗಲೇ ಎರಡು ಮೂರು ಸುತ್ತಿನ ಸಮಾಲೋಚನೆಯನ್ನು ಈ ಕ್ಷೇತ್ರದ ಮುಖಂಡರ ಜೊತೆ ನಡೆಸಿದ್ದಾರೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಗೆ ಸರಿಸಮಾನಾಗಿ ಪೈಪೋಟಿ ನೀಡುವಂತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶವಿದೆ. ಈಗ ಕ್ಷೇತ್ರದಲ್ಲಿ ಏಳೆಂಟು ಮಂದಿ ಟಿಕೆಟ್ ಆಕಾಂಕ್ಷಿಗಳು ಇರುವುದರಿಂದ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

  ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಹಲವರ ಹೆಸರುಗಳು ಕೇಳಿಬರುತ್ತಿದೆ. ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಕಳೆದ ಬಾರಿ ರಾಮಚಂದ್ರಪ್ಪ ಹಾಗೂ ಹನುಮಂತರಾಯಪ್ಪ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

  ನವೆಂಬರ್‌ 3ರಂದು ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್​.ಆರ್​. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

  ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

  ಆರ್​.ಆರ್​. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್​ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

  ಇದನ್ನೂ ಓದಿ : Dasara2020: ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆ: ನಾಳೆ ಅಧಿಕೃತವಾಗಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ

  ಆರ್​.ಆರ್​. ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್​ಗೆ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವುದು ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ನಾವು ಮಾನಸಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

  ನವೆಂಬರ್‌ 3ರಂದು ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್‌ 9ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಬಳಿಕ 17ನೇ ತಾರೀಕಿನಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಇದಾದ ನಂತರ ನವೆಂಬರ್ 10ರಂದು ಎರಡು ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳಲಿದೆ
  Published by:G Hareeshkumar
  First published: