ರಾಮನಗರ (ಡಿ.17): ಕಾಂಗ್ರೆಸ್ನಿಂದ (Congress) ಒಕ್ಕಲಿಗ ನಾಯಕರ ಸಭೆ ವಿಚಾರವಾಗಿ ರಾಮನಗರದ (Ramanagara) ಗುಡ್ಡದಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (H D Kumaraswamy) ಮಾತನಾಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ (JDS) ಭದ್ರಕೋಟೆ ಹೊಡೆಯಲು ಎಲ್ಲರೂ ಹೊರಟಿದ್ದಾರೆ. ಹಲವಾರು ವರ್ಷಗಳಿಂದ ಪ್ರಯತ್ನ ಮಾಡ್ತಿದ್ದಾರೆ. ಈ ಭದ್ರಕೋಟೆಯನ್ನ ಜನ ಬಿಗಿಯಾಗಿ ಕಟ್ಟಿದ್ದಾರೆ. ಭದ್ರಕೋಟೆ ಒಡೆಯಲು ಅವರ ಬಳಿ ಯಾವುದೇ ಅಸ್ತ್ರಗಳಿಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಗೆ (Congress Leaders) ಹೆಚ್ಡಿಕೆ ಟಾಂಗ್ ಕೊಟ್ಟಿದ್ದಾರೆ.
ನಿಖಿಲ್ ಸ್ಪರ್ಧೆ ಕಾರ್ಯಕರ್ತರು ನಿರ್ಧಾರ ಮಾಡ್ತಾರೆ
ರಾಮನಗರದಿಂದ ಸ್ಪರ್ಧೆನಿಖಿಲ್ ಕುಮಾರಸ್ವಾಮಿ ವಿಚಾರವಾಗಿ ಮಾತನಾಡಿ ಅಭ್ಯರ್ಥಿ ಆಯ್ಕೆ ಬಗ್ಗೆ ರಾಮನಗರದಲ್ಲಿ ಯಾವುದೇ ಸಮಸ್ಯೆ ಇಲ್ಲ, ಅಂತಿಮವಾಗಿ ಕೂತು ಕಾರ್ಯಕರ್ತರು ನಿರ್ಧಾರ ಮಾಡ್ತಾರೆ.
ಅಭ್ಯರ್ಥಿ ಬಗ್ಗೆ ನೀವೆ ತೀರ್ಮಾನ ಮಾಡಿ ಅಂತ ಕಾರ್ಯಕರ್ತರಿಗೆ ಹೇಳಿದ್ದೇನೆ. ಕಾರ್ಯಕರ್ತರ ಭಾವನೆ, ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.
ಅನಿತಾ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದ್ದಾರೆ
ನನ್ನನ್ನು ಬೆಳಸಿದ ಕ್ಷೇತ್ರ ರಾಮನಗರ, ಇಲ್ಲಿ ಅನಿತಾ ಕುಮಾರಸ್ವಾಮಿ ಕೂಡಾ ಚೆನ್ನಾಗಿ ಕೆಲಸ ಮಾಡಿದ್ದಾರೆ. ಅವರ ಮೇಲೂ ಒಳ್ಳೆಯ ಅಭಿಪ್ರಾಯ ಇದೆ. ನಿಖಿಲ್ ನಿಲ್ಲಬೇಕೋ, ಅನಿತಾ ಕುಮಾರಸ್ವಾಮಿ ನಿಲ್ಲಬೇಕೋ ಅದು ಕಾರ್ಯಕರ್ತರ ತೀರ್ಮಾನ ಮಾಡ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ರು.
ಇನ್ನು ಉಗ್ರ ಶಾರೀಕ್ ಕುರಿತು ಬಿಜೆಪಿ-ಕಾಂಗ್ರೆಸ್ ಚರ್ಚೆ ವಿಚಾರವಾಗಿ ಮಾತನಾಡಿ ಇದರಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚಿದೆ. ಸರ್ಕಾರ ಈಗಾಗಲೇ ತನಿಖೆ ಮಾಡುತ್ತಿದೆ. ಪ್ರಕರಣವನ್ನ ನಾವು ಲಘುವಾಗಿ ಪರಿಗಣಿಸಲು ಆಗುವುದಿಲ್ಲ. ಕಠಿಣ ರೀತಿಯಲ್ಲಿ ನಿಷ್ಪಕ್ಷಪಾತವಾದ ತನಿಖೆ ಮಾಡಬೇಕು.
ಅದು ಸರ್ಕಾರದ ಜವಾಬ್ದಾರಿ ಎಂದರು.
ಸೋಮವಾರ ಮೊದಲ ಹಂತದ ಪಟ್ಟಿ ಬಿಡುಗಡೆ
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿ ನಿನ್ನೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿತ್ತು, ಆದರೆ ಧಾರ್ಮಿಕ ವೇದಿಕೆಯಲ್ಲಿ ರಾಜಕೀಯ ಬೇಡ ಅಂತ ಹೇಳಿದ್ರು. ಅಲ್ಲದೇ ಟಿಟಿಡಿಯ ಗೈಡ್ ಲೈನ್ ಉಲ್ಲಂಘನೆ ಆಗಬಾರದು ಅಂತ ಮುಂದೂಡಿದ್ದೇವೆ. ಸೋಮವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
ಕುಮಾರಸ್ವಾಮಿ ಭರ್ಜರಿ ರೋಡ್ ಶೋ
ಶಾಸಕಿ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಗೆ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದರು. ರಾಮನಗರದ ಹಲವು ಗ್ರಾಮದಲ್ಲಿ ಕುಮಾರಸ್ವಾಮಿ ಹವಾ ಜೋರಾಗಿತ್ತು. ನಿಖಿಲ್ ಕುಮಾರಸ್ವಾಮಿ ಸಹ ರೋಡ್ ಶೋದಲ್ಲಿ ಭಾಗಿಯಾಗಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿಗೆ ಹೊರೆಹೊತ್ತು ಕಳಶದೊಂದಿಗೆ ಮಹಿಳೆಯರು ಬೆಂಬಲ ಸೂಚಿಸಿದ್ರು. ದಾರಿಯುದ್ದಕ್ಕೂ ಕುಮಾರಸ್ವಾಮಿಗೆ ನೂರಾರು ಜನರ ಭಾರೀ ಜನಬೆಂಬಲ ವ್ಯಕ್ತವಾಯಿತು.
ಮೊದಲು ಪಕ್ಷ ಕಟ್ಟುತ್ತೇನೆ, ಕಾರ್ಯಕರ್ತರು ಸ್ಪರ್ಧೆ ಬಗ್ಗೆ ನಿರ್ಧಾರ ಮಾಡ್ತಾರೆ
ರಾಮನಗರ ಕ್ಷೇತ್ರದಿಂದ ನಿಖಿಲ್ ಸ್ಪರ್ಧೆ ವಿಚಾರವಾಗಿ ರಾಮನಗರದ ಗುಡ್ಡದಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ರು. ನನ್ನ ಸ್ಪರ್ಧೆ ಪಕ್ಷಕ್ಕೆ ಬಿಟ್ಟ ತೀರ್ಮಾನ, ನನಗೆ ಪಕ್ಷದ ಸಂಘಟನೆ ಜವಾಬ್ದಾರಿ ಕೊಟ್ಟಿದ್ದಾರೆ.
ಯುವ ಘಟಕದ ರಾಜ್ಯಾಧ್ಯಕ್ಷನ್ನಾಗಿ ಮಾಡಿದ್ದಾರೆ.
ಇದನ್ನೂ ಓದಿ: BJP Tweet: ಡಿ ಕೆ ಶಿವಕುಮಾರ್ಗೆ ಭಯೋತ್ಪಾದಕರೇ ಬ್ರದರ್ಸ್, ಡಿಕೆಶಿ ವಿರುದ್ಧ ಬಿಜೆಪಿ ಸಾಲು ಸಾಲು ಟ್ವೀಟ್
ನಾನೂ ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆ ಮಾಡ್ತಿದ್ದೇನೆ. ಕುಮಾರಣ್ಣ ಪಂಚರತ್ನ ರಥಯಾತ್ರೆ ಮಾಡ್ತಿದ್ದಾರೆ.
ಹಾಗಾಗಿ ರಾಮನಗರ ಜಿಲ್ಲೆಯಾದ್ಯಂತ ಹೆಚ್ಚು ಸಂಚಾರ ಮಾಡ್ತಿದ್ದೇನೆ. ಎರಡೂ ರಾಷ್ಟ್ರೀಯ ಪಕ್ಷಗಳ ಮೇಲೆ ಜನರಿಗೆ ನಂಬಿಕೆ ಇಲ್ಲ, ಜೆಡಿಎಸ್ ನಂತಹ ನಿಷ್ಠಾವಂತ ಕಾರ್ಯಕರ್ತರೂ ಇಲ್ಲ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿಖಿಲ್ ಹೋದ ಕಡೆಯೆಲ್ಲ ಕಾರ್ಯಕರ್ತರು ಮುಂದಿನ ರಾಮನಗರ ಅಭ್ಯರ್ಥಿ ಎಂದು ಘೋಷಣೆ ಕೂಗಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ