Sharada purya nayak: ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್​ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಶಾರದ ಪೂರ್ಯ ನಾಯಕ್​

ಶಾರದ ಪೂರ್ಯ ನಾಯಕ್​

  • Share this:
    ಬೆಂಗಳೂರು (ಜು. 7): ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್​ ( sharada purya nayak) ಅವರು ಪ್ರಾಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಅದೃಷ್ಟವಶಾತ್​ ಅವರು ಪಾರಾಗಿದ್ದು, ಅವರ ಎಡಗಾಲಿಗೆ ಹೆಚ್ಚು ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಇನ್ನು ಕಾರು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದಿಂದ ಅವರು ಬೆಂಗಳೂರಿಗೆ ತೆರಳುತ್ತಿದ್ದಾಗ ನೆಲಮಂಗಲ ತುಮಕೂರು ರಸ್ತೆಯ ಕುಲುವನಹಳ್ಳಿ ಬಳಿ ಅವರಿದ್ದ ಇನ್ನೋವ ಕ್ರಿಸ್ಟಾ ಪಲ್ಟಿ ಹೊಡೆದಿದೆ. ಚಾಲಕನ ಅತೀ ವೇಗ ಚಾಲನೆಯಿಂದ ರಸ್ತೆ ಡಿವೈಡರ್ ಹಾರಿ ಎದುರು ಬರುತ್ತಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.

    ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್​ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತವಾದ ತಕ್ಷಣಕ್ಕೆ ಅವರಿಬ್ಬರಿಗೆ ನೆಲಮಂಗಳದ ಖಾಸಗಿ ಆಸ್ಪತ್ರೆಗೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾಜಿ ಶಾಸಕರ ಎಡಗಾಲಿಗೆ ಫ್ರಾಕ್ಚರ್​ ಆಗಿದೆ ಎಂದು ಮೂಲಗಳು ತಿಳಿಸಿದ್ದು, ಘಟನೆ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    Published by:Seema R
    First published: