DK Shivakumar: ಜೆಡಿಎಸ್ ಅಲ್ಪಸಂಖ್ಯಾತರನ್ನು ನಿಲ್ಲಿಸಿ Political Strategy ಮಾಡಿದೆ; ಡಿ.ಕೆ. ಶಿವಕುಮಾರ್

ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಪರಮೇಶ್ವರ್ ಅವರು, ಪಂಜಾಬಿನಲ್ಲಿ ದಲಿತ ಸಮುದಾಯದವರನ್ನು ಸಿಎಂ ಮಾಡಿದ್ದಾರೆ. ನಮ್ಮಲ್ಲೂ ದಲಿತ ಸಿಎಂ ಕೇಳುವಂತದಾಗಬಹುದು. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ ಇಲ್ಲೂ ದಲಿತ ಸಿಎಂ ಕೊಡಬೇಕು ಎಂದು ಕೇಳುವಂತದಾಗಬಹುದು ಎಂದು ಹೇಳಿದ್ದರು.

ಡಿಕೆ ಶಿವಕುಮಾರ್.

ಡಿಕೆ ಶಿವಕುಮಾರ್.

  • Share this:
    ಬೆಂಗಳೂರು: ದಲಿತರು ಸಿಎಂ (Dalit CM) ಆಗಬಹುದು ಎಂಬ ಪರಮೇಶ್ವರ್ ಹೇಳಿಕೆ (Parameshwar Statement) ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President DK Shivakumar) ಅವರು, ನೀವು‌ ಸಹ ಆಸೆ ಪಡಬಹುದು. ಎಲ್ಲರೂ ಆಸೆ ಪಡಬಹುದು. ಅದೆಲ್ಲ ಪಾರ್ಟಿ ತೀರ್ಮಾನ ಮಾಡುತ್ತೆ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಎಲ್ಲವೂ ಅನುಭವ ಇದೆ. ಅವರಿಗೆ ಏನ್ ಮಾತಾಡ್ಬೇಕು ಮಾತಾಡ್ಬಾರ್ದು ಅಂತ ಗೊತ್ತಿದೆ. ಮೊದಲು ಪಕ್ಷ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಜೆಡಿಎಸ್ ಬೈ ಎಲೆಕ್ಷನ್​ನಲ್ಲಿ ಅಲ್ಪ ಸಂಖ್ಯಾತ ಅಭ್ಯರ್ಥಿ ಘೋಷಣೆ ಮಾಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರದ್ದು ಪೊಲಿಟಿಕಲ್ ಪಾರ್ಟಿ. ಅವರು ಪೊಲಿಟಿಕಲ್ ತಂತ್ರಗಾರಿಕೆ ಮಾಡಿದ್ದಾರೆ. ನ್ಯಾವ್ಯಾಕೆ ಅದರ ಬಗ್ಗೆ ಮಾತನಾಡಬೇಕು ಎಂದರು. ಎರಡು ಕ್ಷೇತ್ರದ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಜಿಲ್ಲಾ ಮುಖಂಡರ ಜೊತೆಗೆ ಅಭಿಪ್ರಾಯ ಪಡೆದಿದ್ದೇವೆ. ಹೈಕಮಾಂಡ್​ಗೆ ಮಾಹಿತಿ ನೀಡಿದ್ದೇವೆ. ಯಾರೇ ಕ್ಯಾಂಡಿಡೇಟ್ ಆದ್ರೂ, ಸದ್ಯಕ್ಕೆ ನಮಗೆ ಅದು ಮುಖ್ಯವಲ್ಲ. ನಮ್ಮ ನಾಯಕರು ಈಗಾಗಲೇ ಚುನಾವಣೆ ಗೆಲುವಿಗೆ ಸಿದ್ದತೆ ಮಾಡಿಕೊಂಡಿದ್ದಾರೆ. 4ರಂದು ಸಿಂದಗಿಗೆ ನಾವು ನಮ್ಮ ಪಕ್ಷದ ಮುಖಂಡರು ಭೇಟಿ ಕೊಡ್ತೀವಿ. 7ರಂದು ಹಾನಗಲ್ ಕ್ಷೇತ್ರಕ್ಕೆ ನಮ್ಮೆಲ್ಲ ನಾಯಕರು ಭೇಟಿ ಮಾಡ್ತೀವಿ. ನಾಮಿನೇಷನ್ ನಲ್ಲಿ ಭಾಗಿಯಾಗ್ತೀವಿ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡ್ತೀವಿ ಕಾಂಗ್ರೆಸ್ ಪಕ್ಷ ಎರಡು ಸೀಟ್ ಗೆದ್ದೆ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ದಲಿತ ಸಿಎಂ ಅಸ್ತ್ರ ಪ್ರಯೋಗ ಮಾಡಿದ ಪರಮೇಶ್ವರ್

    ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಪರಮೇಶ್ವರ್ ಅವರು, ಪಂಜಾಬಿನಲ್ಲಿ ದಲಿತ ಸಮುದಾಯದವರನ್ನು ಸಿಎಂ ಮಾಡಿದ್ದಾರೆ. ನಮ್ಮಲ್ಲೂ ದಲಿತ ಸಿಎಂ ಕೇಳುವಂತದಾಗಬಹುದು. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ ಇಲ್ಲೂ ದಲಿತ ಸಿಎಂ ಕೊಡಬೇಕು ಎಂದು ಕೇಳುವಂತದಾಗಬಹುದು. ಆದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಹೇಳುವ ಮೂಲಕ ದಲಿತ ಸಿಎಂ ಅಸ್ತ್ರ ಪ್ರಯೋಗ ಮಾಡಿದ್ದಾರೆ.

    ಎರಡು ಕ್ಷೇತ್ರಗಳ ಉಪಚುನಾವಣೆ ಮೇಲೆ ಮೂರು ಪಕ್ಷಗಳ ಕಣ್ಣು

    ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇದೇ ತಿಂಗಳು 30ರಂದು ಉಪಚುನಾವಣೆ ನಡೆಯಲಿದೆ. ಅದಕ್ಕಾಗಿ ಮೂರು ಪಕ್ಷಗಳು ಈಗಿನಿಂದಲೇ ತಯಾರಿ ಆರಂಭಿಸಿವೆ. ಈಗಾಗಲೇ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ದಿನಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿವೆ. ಈ ಎರಡು ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಕಾಂಗ್ರೆಸ್ ಮತಗಳನ್ನು ವಿಭಜನೆ ಮಾಡುವ ಸಲುವಾಗಿಯೇ ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿಲ್ಲಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

    ಇದನ್ನು ಓದಿ: JDS Candidates: ಎರಡು ಕ್ಷೇತ್ರಗಳಿಗೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ ಜೆಡಿಎಸ್; ಸಿಂಧಗಿಗೆ ಶಕೀಲಾ, ಹಾನಗಲ್​ನಿಂದ ನಿಯಾಜ್ ಸ್ಪರ್ಧೆ!

    ವಿಜಯಪುರ ಜಿಲ್ಲೆಯ ಸಿಂದಗಿ ಬೈಎಲೆಕ್ಷನ್​ನಲ್ಲಿ ಶಾಸಕ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು 'ಕೈ' ಅಭ್ಯರ್ಥಿಯಾಗಿ ಈ ಹಿಂದೆಯೇ ಘೋಷಣೆ ಮಾಡಿತ್ತು. ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂಸಿ ಮನಗೂಳಿ ನಿಧನದ ಬಳಿಕ, ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಜೆಡಿಎಸ್ ಟಿಕೆಟ್ ಫಿಕ್ಸ್ ಎಂದು ಹೇಳಲಾಗಿತ್ತು. ಆದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಯಾವುದೇ ಸ್ಪಷ್ಟನೆ ನೀಡಲಿಲ್ಲ. ಇದರಿಂದ ಬೇಸರಗೊಂಡ ಅಶೋಕ ಮನಗೂಳಿ ಮಾರ್ಚ್ 9ರಂದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದರು. ಇದೀಗ ಜೆಡಿಎಸ್ ಸಿಂದಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
    Published by:HR Ramesh
    First published: