• Home
  • »
  • News
  • »
  • state
  • »
  • JDS Politics: ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್​ ರಣಕಹಳೆ; ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​

JDS Politics: ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್​ ರಣಕಹಳೆ; ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​

H.D ಕುಮಾರಸ್ವಾಮಿ, ಮಾಜಿ ಪ್ರಧಾನ ದೇವೇಗೌಡ

H.D ಕುಮಾರಸ್ವಾಮಿ, ಮಾಜಿ ಪ್ರಧಾನ ದೇವೇಗೌಡ

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

  • Share this:

ಮೈಸೂರು (ಅ.21): ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಇನ್ನೂ 6  ತಿಂಗಳು ಬಾಕಿ ಇರುವಾಗಲೇ  ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಜೆಡಿಎಸ್​ ನಾಯಕರು, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.


ಮೈಸೂರು ಅಭ್ಯರ್ಥಿಗಳ ಪಟ್ಟಿ ರಿಲೀಸ್​

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.




ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ


* ಚಾಮುಂಡೇಶ್ವರಿ – ಜಿ. ಟಿ. ದೇವೇಗೌಡ


* ಹುಣಸೂರು – ಜಿ. ಟಿ. ಹರೀಶ್ ಗೌಡ


* ಕೆ. ಆರ್. ನಗರ – ಸಾ. ರಾ. ಮಹೇಶ್


* ಪಿರಿಯಾಪಟ್ಟಣ – ಕೆ. ಮಹದೇವ್


* ಟಿ. ನರಸೀಪುರ – ಅಶ್ವಿನ್


* ಎಚ್. ಡಿ. ಕೋಟೆ – ಜಯಪ್ರಕಾಶ್


hd devegowda warn, gt devegowda return to jds, gt devegowda son, kannada news, karnataka news, ಹೆಚ್​ ಡಿ ದೇವೇಗೌಡರ ಎಚ್ಚರಿಕೆ, ಜಿಟಿ ದೇವೇಗೌಡ ಪುತ್ರನಿಗೆ ಟಿಕೆಟ್
ಹೆ್ಚ್​​ಡಿ ದೇವೇಗೌಡ


2023ಕ್ಕೆ ಮಿಷನ್​ 123


2023ಕ್ಕೆ ಮಿಷನ್​ 123 ಶುರು ಮಾಡಿರುವ ಕುಮಾರಸ್ವಾಮಿ ಈಗ 126 ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ. ಇದರಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ ಪುತ್ರ ಹರೀಶ್​​ಗೂ ಟಿಕೆಟ್​ ಖಚಿತವಾಗಿದೆ .


‘40 ಸ್ಥಾನ ಬಂದ್ರೆ ರಾಜಕೀಯ ಬಿಡ್ತೀನಿ’


ಈ ಬಾರಿ ಜೆಡಿಎಸ್​ಗೆ 30ರಿಂದ 40 ಸ್ಥಾನ ಬಂದರೆ ಅಧಿಕಾರದಿಂದ ದೂರ ಇರುತ್ತೇನೆ. 30ರಿಂದ 40 ಸ್ಥಾನ ಬಂದರೂ ನಾನು ಸಿಎಂ ಆಗುತ್ತೇನೆ ಎಂದು ನಮ್ಮ ಪಕ್ಷದ ಶಾಸಕರು ಅಂದುಕೊಳ್ಳುವುದು ಬೇಡ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: Zameer Ahmed Khan: ಡಿಸೆಂಬರ್​ನಲ್ಲಿ ಕಾದಿದೆ ಬಿಜೆಪಿಗೆ ಬಿಗ್​ ಶಾಕ್​​; ಎಚ್​ಡಿಕೆಗೂ ಜಮೀರ್​ ಸವಾಲ್!


ಜೆಡಿಎಸ್​ ತೊರೆಯುವ ನಿರ್ಧಾರದಿಂದ ಹಿಂದೆ ಸರಿದ ಜಿಟಿಡಿ


ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಹೆಚ್​​ಡಿಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದ ಅರಸಿಕೆರೆ ಶಾಸಕ ಶಿವಲಿಂಗೇಗೌಡರು (MLA Shivalingegowda) ಪಕ್ಷದಲ್ಲಿಯೇ ಉಳಿಯುವ ಬಗ್ಗೆ ತೀರ್ಮಾನ ಮಾಡಿದ್ದಾರೆ.


ಗಳಗಳನೇ ಕಣ್ಣೀರಿಟ್ಟ ಜಿಟಿಡಿ


ಜೆಡಿಎಸ್​​ ಬಿಟ್ಟು ಹೋಗಲ್ಲ ಅಂತ ಜಿ.ಟಿ.ದೇವೇಗೌಡರು ಗಳಗಳನೆ ಕಣ್ಣೀರಿಟ್ಟಿದ್ದಾರೆ. ಗುರುವಾರ ದೇವೇಗೌಡರನ್ನು ಭೇಟಿಯಾದ ಅವರು, ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ. ನನ್ನನ್ನು ಮರಿ ದೇವೇಗೌಡ ಎಂದು ಕರೆಯುತ್ತಿದ್ರು. ಜಿಟಿಡಿ ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಹೆಚ್.ಡಿ ದೇವೇಗೌಡರು ಹೇಳಿದ್ರು. ಆದ್ದರಿಂದ ದೇವೇಗೌಡರು ಕಂಡ ಕನಸು ನನಸು ಮಾಡುತ್ತೇವೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ. ಕುಮಾರಸ್ವಾಮಿಯವರನ್ನ ಸಿಎಂ ಮಾಡುತ್ತೇನೆ ಎಂದು ಜಿಟಿ ದೇವೇಗೌಡ ಕಣ್ಣೀರಿಟ್ಟಿದ್ದಾರೆ.


ಜಿಟಿಡಿ ವಿರೋಧಿಗಳಿಗೆ ಹೆಚ್​​ಡಿಡಿ ಎಚ್ಚರಿಕೆ


ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಜಿ.ಟಿ ದೇವೇಗೌಡರ ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರ ಕೇಳಿದರೂ ನಾನು ಸಹಿಸುವುದಿಲ್ಲ. ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಮೈಸೂರು ಜಿಲ್ಲೆಯ ಎಲ್ಲಾ ಉಸ್ತುವಾರಿ ಜಿಟಿಡಿಗೆ ಕೊಟ್ಟಿದ್ದೇವೆ. ಅವರ ನಾಯಕತ್ವದಲ್ಲೇ ಎಲ್ಲಾ ನಡೆಯುತ್ತದೆ. ಅವರ ತೀರ್ಮಾನವೇ ಅಂತಿಮ. ಅವರ ಬಗ್ಗೆ ಕೊಂಕು ಮಾತನಾಡಿದ್ದಾರೆ ನಾನು ಸಹಿಸುವುದಿಲ್ಲ ಎಂದು ಜಿಟಿಡಿ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.


ಇದನ್ನೂ ಓದಿ: Building Collapse: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿತ! ಕಾಲೇಜಿಗೆ ರಜೆ ಘೋಷಣೆ


ಸಿಎಂ ಬೊಮ್ಮಾಯಿಗೆ ಹೆಚ್​​ಡಿಕೆ ಸವಾಲು


ಸಿದ್ದರಾಮಯ್ಯ ಸಿಎಂ ಆಗಿದ್ದ  ಅವಧಿಯಲ್ಲಿ ನೇಮಕಾತಿಯಲ್ಲಿ (Recruitment) ನಡೆದಿರುವ ಅಕ್ರಮ ವ್ಯವಹಾರಗಳ ದಾಖಲೆಗಳನ್ನು ರಾಹುಲ್‌ ಗಾಂಧಿಗೆ (Rahul Gandhi) ಕಳುಹಿಸುತ್ತೀರೇಕೆ? ನಿಮಗೆ ಧಮ್ ಇದ್ದರೆ ಸಚಿವ ಸಂ‍ಪುಟದಲ್ಲಿಟ್ಟು ತನಿಖೆ ಮಾಡಿಸಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಸವಾಲು ಹಾಕಿದ್ದಾರೆ.


Published by:ಪಾವನ ಎಚ್ ಎಸ್
First published: