News18 India World Cup 2019

ಕುತೂಹಲ ಕೆರಳಿಸಿದ ಬಿಜೆಪಿ ನಾಯಕ ಶ್ರೀನಿವಾಸ ಪ್ರಸಾದ್ ಭೇಟಿ; ಬಂಡಾಯಕ್ಕೆ ಸಿದ್ಧತೆ ನಡೆಸಿದ್ದಾರಾ ಹೆಚ್​. ವಿಶ್ವನಾಥ್​?;

Cabinet Expansion: ಹೆಚ್​. ವಿಶ್ವನಾಥ್​ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಿಂದ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಕುರಿತು ಊಹಾಪೋಹಗಳು ಕೇಳಿ ಬರುತ್ತಲೇ ಇದ್ದವು. ಆದರೆ, ಇಂದು ಅವರು ಬಿಜೆಪಿ ನಾಯಕ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಅವರು ಶೀಘ್ರದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರಕ್ಕೆ ಮತ್ತಷ್ಟು ಇಂಬು ನೀಡುವಂತಿದೆ.

MAshok Kumar | news18
Updated:June 14, 2019, 1:09 PM IST
ಕುತೂಹಲ ಕೆರಳಿಸಿದ ಬಿಜೆಪಿ ನಾಯಕ ಶ್ರೀನಿವಾಸ ಪ್ರಸಾದ್ ಭೇಟಿ; ಬಂಡಾಯಕ್ಕೆ ಸಿದ್ಧತೆ ನಡೆಸಿದ್ದಾರಾ ಹೆಚ್​. ವಿಶ್ವನಾಥ್​?;
ಹೆಚ್​. ವಿಶ್ವಾನಾಥ್​.
MAshok Kumar | news18
Updated: June 14, 2019, 1:09 PM IST
ಬೆಂಗಳೂರು (ಜೂನ್​.14); ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಳೆದ ವಾರ ರಾಜೀನಾಮೆ ನೀಡುವ ಮೂಲಕ ಮಾತೃ ಪಕ್ಷದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಹೆಚ್​. ವಿಶ್ವನಾಥ್​ ಇಂದು  ಬಿಜೆಪಿಯ ಹಿರಿಯ ನಾಯಕ ಹಾಗೂ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಹೆಚ್​. ವಿಶ್ವನಾಥ್​ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಿಂದ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಕುರಿತು ಊಹಾಪೋಹಗಳು ಕೇಳಿ ಬರುತ್ತಲೇ ಇದ್ದವು. ಆದರೆ, ಇಂದು ಅವರು ಬಿಜೆಪಿ ನಾಯಕ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಅವರು ಶೀಘ್ರದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರಕ್ಕೆ ಮತ್ತಷ್ಟು ಇಂಬು ನೀಡುವಂತಿದೆ. ಅಲ್ಲದೆ ಹಿರಿಯ ನಾಯಕ ವಿಶ್ವನಾಥ್ ಅವರ ಈ ನಡೆ ಜೆಡಿಎಸ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿವೆ.

ಇದನ್ನೂ ಓದಿ : Cabinet Expansion: ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಬಂಡಾಯದ ಸುಳಿವು; ಸಚಿವ ಸ್ಥಾನ ನೀಡದಿದ್ದರೆ ಪಕ್ಷ ಬಿಡುವ ಸಾಧ್ಯತೆ!

ಸಿಎಂ ಕುಮಾರಸ್ವಾಮಿ ವಿರುದ್ಧ ವಿಶ್ವನಾಥ್ ಅಸಮಾಧಾನ:

ಲೋಕಸಭೆ ಹಾಗೂ ಮಂಡ್ಯ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷನಾಗಿ ತಾವು ಹೇಳಿದ ವ್ಯಕ್ತಿಗೆ ಟಿಕೆಟ್ ನೀಡಲಾಗಿಲ್ಲ. ಟಿಕೆಟ್ ನೀಡುವ ವಿಚಾರದಲ್ಲಿ ಕುರುಬರನ್ನು ಕಡೆಗಣಿಸಲಾಗಿದೆ ಎಂಬುದು ಹೆಚ್​.  ವಿಶ್ವನಾಥ್ ಆರೋಪವಾಗಿತ್ತು. ಅಲ್ಲದೆ ಇದೇ ಕಾರಣಕ್ಕೆ ಮಾಧ್ಯಮಗಳ ಎದುರು ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಆದರೆ, ಅವರ ಮನಸ್ಸಿನಲ್ಲಿ ಸಚಿವ ಸ್ಥಾನದ ಆಕಾಂಕ್ಷೆ ಇದ್ದದ್ದೂ ಸುಳ್ಳಲ್ಲ. ಇದೇ ಕಾರಣಕ್ಕೆ ಅವರು ಸಚಿವ ಸಂಪುಟ ವಿಸ್ತರಣೆಯ ಹಿಂದಿನ ದಿನ ಗುರುವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ, ಈ ಸಂದರ್ಭದಲ್ಲಿ ಸಚಿವ ಸ್ಥಾನದ ಬಗ್ಗೆ ಸಿಎಂ ಪ್ರಸ್ತಾಪಿಸಲೇ ಇಲ್ಲ. ಇದರಿಂದ ಬೇಸರಗೊಂಡಿದ್ದ ವಿಶ್ವನಾಥ್ ಪಕ್ಷ ತೊರೆಯುವ ಕುರಿತು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಅವರು ಇಂದು ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿರುವುದು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ.
Loading...

ಇದನ್ನೂ ಓದಿ : Cabinet Expansion; ಇಂದು ಮಹತ್ವದ ಸಚಿವ ಸಂಪುಟ ವಿಸ್ತರಣೆ; ಪಕ್ಷೇತರ ಶಾಸಕ ಹೆಚ್​. ನಾಗೇಶ್ ಮಂತ್ರಿಗಿರಿ ಖಚಿತ!

ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶ್ರೀನಿವಾಸ್ ಪ್ರಸಾದ್ ಅವರನ್ನು ಮನೆಯಲ್ಲೇ ಭೇಟಿ ಮಾಡಿರುವ ವಿಶ್ವನಾಥ್ ರಾಜ್ಯ ರಾಜಕೀಯದ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಎನ್ನಲಾಗುತ್ತಿದೆ. ಆದರೆ, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಕುರಿತು ಹೆಚ್​. ವಿಶ್ವನಾಥ್ ಆಗಲಿ ಅಥವಾ  ಶ್ರೀನಿವಾಸ್ ಪ್ರಸಾದ್ ಆಗಲಿ ಮಾಧ್ಯಮಗಳ ಎದುರು ಪ್ರತಿಕ್ರಿಯಿಸಲು ಮುಂದಾಗಲಿಲ್ಲ.

ಆದರೆ, ವಿಶ್ವನಾಥ್ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿ ವಿಚಾರ ಮಾತ್ರ ಜೆಡಿಎಸ್ ಹಾಗೂ ಮೈತ್ರಿ ಸರ್ಕಾರಕ್ಕೆ ಆಶಾದಾಯವಾಗಿಲ್ಲ ಎಂಬುದಂತೂ ಖಚಿತ. ಇನ್ನೂ ಸಚಿವ ಸಂಪುಟ ವಿಸ್ತರಣೆಯಾದ ನಂತರ ಉಭಯ ಪಕ್ಷಗಳು ಇನ್ನೂ ಅನೇಕ ಸಂದಿಗ್ಧ ಪರಿಸ್ಥಿತಿಗಳಿಗೆ ಒಳಗಾಗಲಿವೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ನಾಯಕ ಹೆಚ್. ವಿಶ್ವನಾಥ್ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗ್ತಾರ? ಅಥವಾ ಪಕ್ಷದಲ್ಲೇ ಉಳೀತಾರ? ಎಂಬುದನ್ನು ಕಾದು ನೋಡಬೇಕಿದೆ.
First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...