• Home
  • »
  • News
  • »
  • state
  • »
  • Girl Death Case: ಮೃತ ಬಾಲಕಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಕುಟುಂಬಸ್ಥರ ಕಣ್ಣೀರು

Girl Death Case: ಮೃತ ಬಾಲಕಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಕುಟುಂಬಸ್ಥರ ಕಣ್ಣೀರು

ಮೃತ ಬಾಲಕಿ ಮನೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ

ಮೃತ ಬಾಲಕಿ ಮನೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ

ಮೃತ ಬಾಲಕಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಗಳನ್ನು ಕಳೆದುಕೊಂಡು ಕುಗ್ಗಿರುವ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ. ಇದೇ ವೇಳೆ ಬಾಲಕಿ ಪೋಷಕರು ನಿಖಿಲ್ ಕುಮಾರಸ್ವಾಮಿ ಕಾಲಿಗೆ ಬಿದ್ದು ಗೋಳಾಡಿದ್ದಾರೆ.

ಮುಂದೆ ಓದಿ ...
  • News18 Kannada
  • Last Updated :
  • Karnataka, India
  • Share this:

ಮಂಡ್ಯ (ಅ.14): ಟ್ಯೂಷನ್​​ಗೆ (Tuition) ಹೋಗಿದ್ದ ದಿವ್ಯಾ ಎಂಬ 10 ವರ್ಷದ ಬಾಲಕಿ ನೀರಿನ ಸಂಪಿನಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಟ್ಯೂಷನ್ ಶಿಕ್ಷಕನೇ (Teacher) ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದಾನೆ. ಕಾಂತರಾಜ್ (Kantaraj) ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್​ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ಆರೋಪಿ ಕಾಂತರಾಜ್ ಬಂಧಿಸಿ ಪೊಲೀಸರು (Police) ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಬಾಲಕಿ ಮನೆಗೆ ಇಂದು ಜೆಡಿಎಸ್​ ಯುವ ಸಂಘಟನೆ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.




ನಿಖಿಲ್ ಕುಮಾರಸ್ವಾಮಿ ಭೇಟಿ


ಮೃತ ಬಾಲಕಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಗಳನ್ನು ಕಳೆದುಕೊಂಡು ಕುಗ್ಗಿರುವ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ. ಇದೇ ವೇಳೆ ಬಾಲಕಿ ಪೋಷಕರು ನಿಖಿಲ್ ಕುಮಾರಸ್ವಾಮಿ ಕಾಲಿಗೆ ಬಿದ್ದು ಗೋಳಾಡಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿಸುವಂತೆ ಕೇಳಿಕೊಂಡಿದ್ದಾರೆ.


ಅತ್ಯಾಚಾರವೆಸಗಿ ಕೊಂದವರಿಗೆ ಗಲ್ಲುಶಿಕ್ಷೆ ವಿಧಿಸಬೇಕು


ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ನಿಖಿಲ್​ ಕುಮಾರಸ್ವಾಮಿ, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಈ ವಿಚಾರವಾಗಿ ಅಸೆಂಬ್ಲಿಯಲ್ಲಿ ಮಾತನಾಡ್ತುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ಈ ವಿಚಾರದಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಕ್ರಮವಹಿಸಬೇಕು ಎಂದು ಹೇಳಿದ್ದಾರೆ.



ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಷಾದನೀಯ ಎಂದು ಮಳವಳ್ಳಿ ಶಾಸಕ ಅನ್ನದಾನಿ ಹೇಳಿಕೆ ನೀಡಿದ್ದಾರೆ. ಘಟನೆಯಿಂದ ಇಡೀ ತಾಲೂಕಿನ ಜನತೆ ದುಃಖದಲ್ಲಿ ಮುಳುಗಿದೆ. ಆದರೆ ಜಿಲ್ಲಾಡಳಿತ ಘಟನೆ ಬಗ್ಗೆ ಕ್ರಮವಹಿಸದೇ ಕುಂಭಮೇಳ ಮಾಡ್ತಿದೆ. ಸಂತ್ರಸ್ತ ಕುಟುಂಬಕ್ಕೆ ಜಿಲ್ಲಾಧಿಕಾರಿ ಬಂದು ಸಾಂತ್ವನ ಹೇಳಿಲ್ಲ ಎಂದು ಅನ್ನದಾನಿ ಹೇಳಿದ್ದಾರೆ.


ಟ್ಯೂಷನ್​ಗೆ ತೆರಳಿದ್ದ ಬಾಲಕಿ ಶವವಾಗಿ ಪತ್ತೆ


ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.




ನಿನ್ನೆ ಬಾಲಕಿಯನ್ನ ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು.


ಇದನ್ನೂ ಓದಿ: Government Employees: ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೇಸ್​ಗೆ ಮತ್ತಷ್ಟು ತಿರುವು ಸಿಗುವ ಸಾಧ್ಯತೆ ಇದೆ.

Published by:ಪಾವನ ಎಚ್ ಎಸ್
First published: