HOME » NEWS » State » JDS LEADER SARA MAHESH HITS BACK SIDDARAMAIAH AFTER HD KUMARASWAMY IN TWITTER SCT

Siddaramaiah: ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ; ಕುಮಾರಸ್ವಾಮಿ ಬೆನ್ನಲ್ಲೇ ಸಾ.ರಾ. ಮಹೇಶ್ ಟೀಕೆ

Siddaramaiah: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಸಾ.ರಾ. ಮಹೇಶ್ ಟೀಕಿಸಿದ್ದಾರೆ.

news18-kannada
Updated:September 20, 2020, 3:35 PM IST
Siddaramaiah: ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ; ಕುಮಾರಸ್ವಾಮಿ ಬೆನ್ನಲ್ಲೇ ಸಾ.ರಾ. ಮಹೇಶ್ ಟೀಕೆ
Siddaramaiah: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಸಾ.ರಾ. ಮಹೇಶ್ ಟೀಕಿಸಿದ್ದಾರೆ.
  • Share this:
ಬೆಂಗಳೂರು (ಸೆ. 20): ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಎಡಬಿಡಂಗಿ ಮತ್ತು ಅವಕಾಶವಾದಿ ರಾಜಕಾರಣಿ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಟೀಕಿಸಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ಸಾ.ರಾ. ಮಹೇಶ್ ಕೂಡ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ. ಜೆಡಿಎಸ್​ ಬಿಟ್ಟು ಕಾಂಗ್ರೆಸ್ ಸೇರಿರುವ ಸಿದ್ದರಾಮಯ್ಯನವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಯಾವುದೇ ಅಧಿಕಾರವಿಲ್ಲ. ಸ್ವಾರ್ಥ ರಾಜಕಾರಣಕ್ಕೆ ಇನ್ನೊಂದು ಹೆಸರೇ ಸಿದ್ದರಾಮಯ್ಯ ಎಂದು ಸಾ.ರಾ. ಮಹೇಶ್ ಲೇವಡಿ ಮಾಡಿದ್ದಾರೆ.

ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿದವರು ಸಿದ್ದರಾಮಯ್ಯ. ಸಮಾಜವಾದದ ಸೋಗನ್ನು ಕಳಚಿಕೊಂಡ ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಸಾ.ರಾ. ಮಹೇಶ್ ಟೀಕಿಸಿದ್ದಾರೆ.
ತಾವು ಬೆಳೆದು ಬಂದ ಪಕ್ಷಕ್ಕೆ ದ್ರೋಹ ಬಗೆದ, ಹತ್ತಿದ ಏಣಿಯನ್ನು ಒದೆಯುವ ಜಾಯಮಾನದ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್​ ನಾಯಕ ಸಾ.ರಾ. ಮಹೇಶ್ ಸಿದ್ದರಾಮಯ್ಯನವರ ಮೇಲೆ ಟ್ವಿಟರ್ ಮೂಲಕ ದಾಳಿ ನಡೆಸಿದ್ದಾರೆ.


ಸಿದ್ದರಾಮಯ್ಯ ಎಂತಹ ಸ್ವಾರ್ಥಿ, ಎಡಬಿಡಂಗಿ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ. ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್​ಗೆ ಜಿಗಿದ ಸಿದ್ದರಾಮಯ್ಯ 'ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು-ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು. ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಹೆಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದರು. ಅದರ ಬೆನ್ನಲ್ಲೇ ಸಾ.ರಾ. ಮಹೇಶ್ ಕೂಡ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ.
Published by: Sushma Chakre
First published: September 20, 2020, 3:35 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading