HOME » NEWS » State » JDS LEADERS PROTESTING IN FRONT OF VIDHANA SOUDHA GANDHI STATUE AGAINST BJP GOVERNMENT AGRICULTURE ACT SHM SCT

ಕೃಷಿ ಕಾಯ್ದೆ ವಿರೋಧಿಸಿ ಜೆಡಿಎಸ್ ಶಾಸಕರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಜೆಡಿಎಸ್ ನಿಂದಲೂ ಪ್ರತಿಭಟನೆ‌ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

news18-kannada
Updated:December 8, 2020, 2:16 PM IST
ಕೃಷಿ ಕಾಯ್ದೆ ವಿರೋಧಿಸಿ ಜೆಡಿಎಸ್ ಶಾಸಕರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ
ಬಸವರಾಜ್ ಹೊರಟ್ಟಿ
  • Share this:
ಬೆಂಗಳೂರು (ಡಿ. 8): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಜೆಡಿಎಸ್ ಶಾಸಕರು ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಜೆಡಿಎಸ್ ನಿಂದಲೂ ಪ್ರತಿಭಟನೆ‌ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತ ವಿರೋಧಿ ಕಾಯ್ದೆಗಳು ರದ್ದಾಗಲಿ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ‌ ಕುಮಾರಸ್ವಾಮಿ, ಹಿರಿಯ ನಾಯಕ ಬಸವರಾಜ್ ಹೊರಟ್ಟಿ, ಪುಟ್ಟರಾಜ್, ಶ್ರೀಕಂಠೇಗೌಡ, ಶಿವಲಿಂಗೇಗೌಡ, ತಿಪ್ಪೇಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ರೈತರ ಹಕ್ಕುಗಳನ್ನ ಕಸಿಯುವ ಪ್ರಯತ್ನ‌ ನಡೆಯುತ್ತಿದೆ. ಇದರ‌ ವಿರುದ್ಧ ಜನಸಾಮಾನ್ಯರು ಧ್ವನಿ ಎತ್ತಿದ್ದಾರೆ. ಭಾರತ್ ಬಂದ್ ಯಶಸ್ವಿಯಾಗಿದೆ. ಈಗಲಾದರೂ‌ ಕಾನೂನು ತರಲು ಹೊರಟಿರುವುದನ್ನು ಕೈಬಿಡಬೇಕು. ಕೇಂದ್ರ, ರಾಜ್ಯ ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಜನವಿರೋಧಿ ನೀತಿಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆ ತಂದಿವೆ. ಜೆಡಿಎಸ್ ಕೂಡ ಈ ಕಾಯ್ದೆಗಳನ್ನು ವಿರೋಧಿಸುತ್ತದೆ. ಅನ್ನದಾತ ಅನ್ನ ಕೊಡದಿದ್ದರೆ ಯಾರ ಬದುಕೂ ಕೂಡ ನಡೆಯುವುದಿಲ್ಲ. ವಿದೇಶಿ ಕಂಪನಿಗಳಿಗೆ ಅನುಕೂಲ ಮಾಡುವ ದೃಷ್ಡಿಯಿಂದ ಕಾಯ್ದೆ ತರಲಾಗಿದೆ. ರೈತರು ಕೂಡ ಅಸಹಕಾಯರಾಗಿದ್ದು ರೈತರ ಹಕ್ಕುಗಳನ್ನು ಕಸಿಯುವ ಪ್ರಯತ್ನ ಮಾಡ್ತಿದ್ದಾರೆ. ರೈತರ ಹೋರಾಟಕ್ಕೆ ನಮ್ಮ ಜೆಡಿಎಸ್ ಸಂಪೂರ್ಣ ಬೆಂಬಲವಿದೆ. ವಿಧಾನ ಪರಿಷತ್ ನಲ್ಲಿ ಭೂ ಸುಧಾರಣೆ ಕಾಯ್ದೆ ತರಲು ಹೊರಟಿದೆ ಅದನ್ನು ವಾಪಾಸ್ ಪಡೆಯಬೇಕು ಎಂದು ಹೆಚ್​.ಕೆ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Bharath Bandh: ನಮ್ಮದು ರೈತಪರ ಸರ್ಕಾರ; ಭಾರತ್ ಬಂದ್ ಯಶಸ್ವಿಯಾಗಲ್ಲ; ಸಿಎಂ ಬಿಎಸ್ ಯಡಿಯೂರಪ್ಪ

ಬಳಿಕ ಮಾತನಾಡಿದ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ, ದೇಶದಲ್ಲಿ ರೈತರಿಗೆ ಹೆಚ್ಚು ಕಡಿಮೆಯಾದರೆ ರೈತರಿಗೆ ಪರಿಣಾಮ ಬೀರಲಿದೆ. ರೈತರ ಬದಲಿಗೆ ಹೊರಗಿನವರು ಕೃಷಿ ಭೂಮಿ ಖರೀದಿಸುವುದು ಸರಿಯಲ್ಲ. ಹಾಗಾಗಿ ರೈತ ವಿರೋಧಿ ಕಾಯ್ದೆ ಕೈಬಿಡಬೇಕು ಎಂದು ಆಗ್ರಹಿಸಿದರು.
Youtube Video

ಇದೇ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಭಾರತ್ ಬಂದ್ ಗೆ ನಾವೂ ಬೆಂಬಲ ವ್ಯಕ್ತಪಡಿಸಿದ್ದೇವೆ. ದೇವೇಗೌಡರು ಎಂದಿಗೂ ರೈತರ ಪರ ಧ್ವನಿ ಎತ್ತಿದ್ದವರು. ರೈತರಿಗೆ ನೈತಿಕ ಬೆಂಬಲ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ. ರೈತರನ್ನ ವಿರೋಧಿಸಿ ಯಾವುದೇ ಸರ್ಕಾರಗಳು ಉಳಿದಿಲ್ಲ. ಕೂಡಲೇ ರೈತ ವಿರೋಧಿ ಕಾಯ್ದೆ ಕೈಬಿಡಬೇಕು ಎಂದು ಒತ್ತಾಯಿಸಿದರು
Published by: Sushma Chakre
First published: December 8, 2020, 2:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories