• Home
  • »
  • News
  • »
  • state
  • »
  • JDS Party: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ರಣತಂತ್ರ, ಅಭ್ಯರ್ಥಿಗಳಿಗೆ ರಹಸ್ಯ ಸ್ಥಳದಲ್ಲಿ ತರಬೇತಿ!

JDS Party: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ರಣತಂತ್ರ, ಅಭ್ಯರ್ಥಿಗಳಿಗೆ ರಹಸ್ಯ ಸ್ಥಳದಲ್ಲಿ ತರಬೇತಿ!

ಚುನಾವಣೆಗೆ ಜೆಡಿಎಸ್ ತಯಾರಿ

ಚುನಾವಣೆಗೆ ಜೆಡಿಎಸ್ ತಯಾರಿ

ಈ ಬಾರಿ ಕ್ಷೇತ್ರ ಉಳಿಸಿಕೊಳ್ಳುವ ಜೊತೆ ಬೇರೆ ಬೇರೆ ವಿಧಾನಸಭೆ ಕ್ಷೇತ್ರಗಳನ್ನು ತನ್ನ ವಶ ಪಡಿಸಿಕೊಳ್ಳಲು ಜೆಡಿಎಸ್ ನಾನಾ ಪ್ಲಾನ್ ಮಾಡುತ್ತಿದೆ. ಮೊದಲ ಹಂತದಲ್ಲಿ 126ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

  • News18 Kannada
  • Last Updated :
  • Karnataka, India
  • Share this:

ಬೆಂಗಳೂರು (ನ.05): ವಿಧಾನಸಭೆ ಚುನಾವಣೆಗೆ (Assembly Election) 5-6 ತಿಂಗಳು ಬಾಕಿ ಇರುವಾಗಲೇ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿದೆ. ಮತದಾರರ ಮನ ಸೆಳೆಯಲು ನಾನಾ ಕಸರತ್ತು ಮಾಡ್ತಿದ್ದಾರೆ. ಜೆಡಿಎಸ್​ ಪಕ್ಷದ (JDS Party ) ವರಿಷ್ಠರು ಮುಂಬರುವ ಚುನಾವಣೆಯಲ್ಲಿ ಭಾರೀ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಅವರು ಮುಂದಾಗಿದ್ದಾರೆ. ಅನಾರೋಗ್ಯದ ನಡುವೆ ಕೂಡ ಹೆಚ್​.ಡಿ ದೇವೇಗೌಡರು (H.D Devegowda) ಚುನಾವಣೆ ರಣತಂತ್ರ ರೂಪಿಸುತ್ತಿದ್ದಾರೆ.   


ರಹಸ್ಯ ಸ್ಥಳಗಳಲ್ಲಿ ಅಭ್ಯರ್ಥಿಗಳಿಗೆ ತರಬೇತಿ


ಪೂರ್ಣ ಪ್ರಮಾಣದಲ್ಲಿ ಚುನಾವಣಾ ಸಿದ್ಧತೆ ಆರಂಭಿಸಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ರಹಸ್ಯ ಸ್ಥಳದಲ್ಲಿ ಅಭ್ಯರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಕಳೆದ ಎರಡು ದಿನಗಳಿಂದ ಅಭ್ಯರ್ಥಿಗಳಿಗೆ ಖಡಕ್ ತರಬೇತಿ ನೀಡಲಾಗ್ತಿದೆಯಂತೆ


ಮೊದಲ ಹಂತ, 126 ಅಭ್ಯರ್ಥಿಗಳಿಗೆ ತರಬೇತಿ


ಈ ಬಾರಿ ಕ್ಷೇತ್ರ ಉಳಿಸಿಕೊಳ್ಳುವ ಜೊತೆ ಬೇರೆ ಬೇರೆ ವಿಧಾನಸಭೆ ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆಯಲು ಜೆಡಿಎಸ್ ನಾನಾ ಪ್ಲಾನ್ ಮಾಡುತ್ತಿದೆ. ಮೊದಲ ಹಂತದಲ್ಲಿ 126ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.
ನಿನ್ನೆಯಿಂದ ಶುರುವಾದ ತರಬೇತಿಯಲ್ಲಿ ಅಭ್ಯರ್ಥಿಗಳ ಜತೆ ಒನ್ ಟು ಒನ್ ಚರ್ಚೆ ಕೂಡ ಮಾಡಲಾಗಿದೆ.


ಇದನ್ನೂ ಓದಿ: Chandrashekar Death: ಆಶ್ರಮಕ್ಕೆ ಬಂದ ಚಂದ್ರಶೇಖರ್​ಗೆ ವಿನಯ್​ ಗುರೂಜಿ ಹೇಳಿದ್ದೇನು? ಸಾವಿನ ಬಗ್ಗೆ ಸುಳಿವು ಕೊಟ್ಟಿದ್ರಾ ಅವಧೂತರು?


ತರಬೇತಿ ನೀಡಲು ಬಂತು ವಿಶೇಚ ತಂಡ


ಜೆಡಿಎಸ್​ ಅಭ್ಯರ್ಥಿಗಳಿಗೆ ತರಬೇತಿ ನೀಡಲು ನವದೆಹಲಿಯ ವಿಶೇಷ ಪರಿಣಿತರ ತಂಡ ಕೂಡ ಆಗಮಿಸಿದೆ. ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ವ್ಯೂಹ ರಚನೆ, ಗೆಲುವಿನ ಸೂತ್ರಗಳ ಬಗ್ಗೆ ಕ್ಲಾಸ್ ತೆಗೆದುಕೊಳ್ಳಲಾಗ್ತಿದೆ.


ವಿವಿಧ ಕಾರ್ಯಗಳಿಗೆ ವಿಶೇಷ ತಂಡ


ಪಂಚರತ್ನ ರಥಯಾತ್ರೆ  1 ವಾರ ಮುಂದಕ್ಕೆ ಹೋದ ಹಿನ್ನೆಲೆಯಲ್ಲಿ ತರಬೇತಿ ನೀಡುವ ಕೆಲಸ ಮಾಡಲಾಗುತ್ತಿದೆ. ಪಂಚರತ್ನ ಯಾತ್ರೆ ಪುನಾರಂಭಕ್ಕೆ ಮುನ್ನವೇ ತರಬೇತಿ ಪೂರ್ಣಗೊಳಿಸಲು ಎಚ್​.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ವಿವಿಧ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಿದ ಮಾಜಿ ಸಿಎಂ, ನಾಯಕರಿಗೆ ಬೇರೆ ಬೇರೆ ಜವಾಬ್ದಾರಿ ವಹಿಸಿದ್ದಾರೆ.


ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ


ಕರ್ನಾಟಕ ರಾಜ್ಯೋತ್ಸವ ದಿನದಂದಲೇ ಜೆಡಿಎಸ್‌ ಪಂಚರತ್ನ ರಥಯಾತ್ರೆ ಚಾಲನೆ ನೀಡಲು ನಡೆಸಿದ್ದ ಸಿದ್ಧತೆಗೆ ಮತ್ತೆ ಮಳೆಯಿಂದ ಅಡ್ಡಿ ಮಾಡಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ  ಆರಂಭವಾಗಬೇಕಿದ್ದ ಯಾತ್ರೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ.


ಪಂಚರತ್ನ ರಥಯಾತ್ರೆ ವೇಳೆಯೇ ಅಭ್ಯರ್ಥಿಗಳ ಘೋಷಣೆ ಹಿನ್ನೆಲೆ ಗೊಂದಲವಿರುವ ಕ್ಷೇತ್ರಗಳ ಮುಖಂಡರ ಸಭೆ ಕರೆದು ಹೆಚ್.ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಜೆಪಿ ಭವನದಲ್ಲಿ ಸರಣಿ ಸಭೆಗಳು ನಡೆಸಿದ್ರು. ಮೊದಲ ಹಂತದಲ್ಲಿ 120 ಕ್ಷೇತ್ರಗಳ‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ: Potholes in Bengaluru: ಅಪಘಾತ ತಪ್ಪಿಸಲು ಅಖಾಡಕ್ಕಿಳಿದ ಖಾಕಿ! ಟ್ರಾಫಿಕ್ ಪೊಲೀಸರಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ


ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ 


ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣ ರಣಕಣವಾಗಿ ಬದಲಾಗಿದೆ. ಕುಮಾರಸ್ವಾಮಿ ಹಾಗೂ ಯೋಗೇಶ್ವರ್ ನಡುವೆ ಭಾರೀ ಫೈಟ್​ ನಡೆಯೋ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳೀತಾರಾ ಅನ್ನೋ ಪ್ರಶ್ನೆ ಮೂಡಿತ್ತು. ಇದೀಗ ಕುಮಾರಸ್ವಾಮಿ ಅವರೇ ತಮ್ಮ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲೇ ಮಾತಾಡಿದ ಅವರು, ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರ ನನ್ನ ಎರಡೂ ಕಣ್ಣುಗಳಿದ್ದ ಹಾಗೇ, ಕಳೆದ ಬಾರಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಆದರೆ ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೀನಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Published by:ಪಾವನ ಎಚ್ ಎಸ್
First published: