• Home
 • »
 • News
 • »
 • state
 • »
 • HD Kumaraswamy| '2023 ಚುನಾವಣೆಯಲ್ಲಿ ಜೆಡಿಎಸ್​ನಿಂದ 30-35 ಮಹಿಳೆಯರಿಗೆ ಟಿಕೆಟ್': ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

HD Kumaraswamy| '2023 ಚುನಾವಣೆಯಲ್ಲಿ ಜೆಡಿಎಸ್​ನಿಂದ 30-35 ಮಹಿಳೆಯರಿಗೆ ಟಿಕೆಟ್': ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಜೆಡಿಎಸ್ ಜನತಾ ಪರ್ವ.

ಜೆಡಿಎಸ್ ಜನತಾ ಪರ್ವ.

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ‌ ಮಾಡುವ ಕೆಲಸ ಮಾಡಲಾಗುವುದು. ಮುಂದಿನ ಚುನಾವಣೆಯಲ್ಲಿ 35ಕ್ಕೂ ಹೆಚ್ಚು ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 • Share this:

  ಬೆಂಗಳೂರು (ಸೆಪ್ಟೆಂಬರ್ 29): 2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಜೆಡಿಎಸ್ ಪಕ್ಷದ (JDS Party) ವರಿಷ್ಠ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು  ಘೋಷಣೆ ಮಾಡಿದ್ದಾರೆ. ಜನತಾ ಪರ್ವ 1.O (Janata Parva 1.0) ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ (Bidadi) ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರ ಆರಂಭವಾಗುವುದಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ, "ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು  ಮಹಿಳೆಯರಿಗೆ ಕೊಡಲಾಗುವುದು" ಎಂದು ಅವರು ತಿಳಿಸಿದರು.


  "ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ‌ ಮಾಡುವ ಕೆಲಸ ಮಾಡಲಾಗುವುದು ಎಂದ ಅವರು, ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.


  ಮಹಿಳೆಯರಿಗೂ ಟಾಸ್ಕ್:


  ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಟಾಸ್ಕ್ ಕೊಡಲಾಗುವುದು. 3ನೇ ದಿನ‌ದ ಇಂದಿನ  ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನಿಗದಿ ಮಾಡಲಾಗುವುದು.30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.


  ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ, ಎಲ್ಲ ಮಹಿಳಾ ನಾಯಕಿಯರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತದೆ.


  ಮಹಿಳೆಯರಿಗೆ ಶೇ.33 ಮೀಸಲು ವಿಧೇಯಕ:


  ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು  ಮಹಿಳೆಯರಿಗೆ ಚುನಾವಣೆಯಲ್ಲಿ  ಶೇ.33 ರಷ್ಟು ಮೀಸಲಾತಿ ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ. ಕರ್ನಾಟಕದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾದುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಶೇ.33 ರಷ್ಟು ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.


  ಮಹಿಳಾ ಕಾರ್ಯಾಗಾರಕ್ಕೆ ಚಾಲನೆ:


  ಇದೇ ವೇಳೆ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್ ರಾಜ್ಯಾಧ್ಯಕ್ಷೆಯಾದ ಲೀಲಾದೇವಿ ಆರ್ ಪ್ರಸಾದ್ ಅವರು ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಕ್ಷಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸಾಕ್ಷಿಯಾದರು.


  ಇದನ್ನೂ ಓದಿ: ಸಿದ್ದರಾಮಯ್ಯರನ್ನು ಕುರುಬರ ಸಮಾವೇಶಗಳಿಂದ ದೂರ ಇಟ್ಟಿಲ್ಲ, ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು; ಎಚ್. ವಿಶ್ವನಾಥ್


  ಪ್ರಾಸ್ತಾವಿಕವಾಗಿ ಲೀಲಾದೇವಿ ಆರ್ ಪ್ರಸಾದ್ ಅವರು ಮಾತನಾಡಿದರು. ದೇವದುರ್ಗದ ಮುಂದಿನ ಅಭ್ಯರ್ಥಿ ಕರಿಯಮ್ಮ, ಮಹಿಳಾ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷೆ ರುತ್ ಮನೋರಮಾ ವೇದಿಕೆಯ ಮೇಲಿದ್ದರು. ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರಂತೆ ಮಹಿಳಾ ಪ್ರತಿನಿಧಿಗಳು ಕಾರ್ಯಗಾರದಲ್ಲಿ ಭಾಗಿಯಾಗಿದ್ದರು.

  Published by:MAshok Kumar
  First published: