‘ಅಭಿವೃದ್ಧಿ ದೃಷ್ಟಿಯಿಂದ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಬಾರದಿತ್ತು’ - ಬಿಜೆಪಿ ಪರ ಜಿಟಿಡಿ ಮತ್ತೆ ಮೃದು ಧೋರಣೆ

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಟಿ. ದೇವೇಗೌಡ, ತಮ್ಮ ಪಕ್ಷದ ಧೋರಣೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

news18
Updated:December 14, 2019, 5:09 PM IST
‘ಅಭಿವೃದ್ಧಿ ದೃಷ್ಟಿಯಿಂದ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಬಾರದಿತ್ತು’ - ಬಿಜೆಪಿ ಪರ ಜಿಟಿಡಿ ಮತ್ತೆ ಮೃದು ಧೋರಣೆ
ಜಿ.ಟಿ.ದೇವೇಗೌಡ
  • News18
  • Last Updated: December 14, 2019, 5:09 PM IST
  • Share this:
ಬೆಂಗಳೂರು(ಡಿ. 14): ಕಳೆದ ಬಾರಿಯ ಲೋಕಸಭೆ ಚುನಾವಣೆಯ ಸಮಯದಿಂದಲೂ ಬಿಜೆಪಿ ಪರ ಹೊಂದಿರುವ ಮೃದು ಧೋರಣೆಯನ್ನು ಜೆಡಿಎಸ್ ನಾಯಕ ಜಿ.ಟಿ. ದೇವೇಗೌಡ ಈಗಲೂ ಮುಂದುವರಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಬೇಕಿತ್ತು ಎಂದು ಜಿಟಿಡಿ ಅಭಿಪ್ರಾಯಪಟ್ಟು ಅಚ್ಚರಿ ಹುಟ್ಟಿಸಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್​ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸಬೇಕಿತ್ತು ಎಂದವರು ಹೇಳಿದ್ಧಾರೆ.

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಟಿ. ದೇವೇಗೌಡ, ತಮ್ಮ  ಪಕ್ಷದ ಧೋರಣೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೇವರು, ದೆವ್ವ ಎಂದು ಮಕ್ಕಳನ್ನು ಪೀಡಿಸುವ ವಿಚಿತ್ರ ಮೇಷ್ಟ್ರು; ಶಿಕ್ಷಣ ಅಧಿಕಾರಿಗಳಿಗೇ ಜಗ್ಗದ ಶಿಕ್ಷಕ

ಹುಣಸೂರಿನ ಉಪಚುನಾವಣೆಯಲ್ಲಿ ಜಿಟಿಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಒಳಗೊಳಗೆ ಬೆಂಬಲ ನೀಡಿದ್ದರು. ಇಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್. ವಿಶ್ವನಾಥ್ ಸೋಲಿಗೆ ಇದೇ ಕಾರಣವಾಯಿತು ಎಂಬ ಸುದ್ದಿ ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಈ ಹೇಳಿಕೆ ನೀಡಿರುವುದು ಅಚ್ಚರಿ ತಂದಿದೆ. ಹುಣಸೂರು ಉಪಚುನಾವಣೆಗೆ ಮುನ್ನವೇ ಜಿಟಿಡಿ ಅವರು ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆಯನ್ನು ಅಂದಾಜು ಮಾಡಿದ್ದರು. ತಾನು ಯಾವ ಪಕ್ಷಕ್ಕೂ ಬೆಂಬಲ ನೀಡಿಲ್ಲ. ಆದರೆ, ಸಿ.ಪಿ. ಯೋಗೇಶ್ವರ್ ಅವರು ಒಕ್ಕಲಿಗ ಮುಖಂಡರಾದ ತಮ್ಮನ್ನು, ದೇವೇಗೌಡರನ್ನು ಮತ್ತು ಕುಮಾರಸ್ವಾಮಿ ಅವರನ್ನು ಟೀಕಿಸಿದ್ದು ಒಕ್ಕಲಿಗರು ಕಾಂಗ್ರೆಸ್​ಗೆ ಮತ ಚಲಾಯಿಸಲು ಕಾರಣವಾಯಿತು ಎಂಬುದು ಜಿಟಿ ದೇವೇಗೌಡ ಅವರ ಅಭಿಪ್ರಾಯ.

ಡಿ. 5ರಂದು ನಡೆದ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್ ಅವರು ಜಯಭೇರಿ ಭಾರಿಸಿದರು. ಜೆಡಿಎಸ್​ನಿಂದ ಬಿಜೆಪಿಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದ ಹೆಚ್. ವಿಶ್ವನಾಥ್ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಜೆಡಿಎಸ್ ಇಲ್ಲಿ ಮೂರನೇ ಸ್ಥಾನಕ್ಕೆ ಕುಸಿದು ಆಘಾತ ಅನುಭವಿಸಿತು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published:December 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ