JDS Supports BJP: ರಾಷ್ಟ್ರಪತಿ ಚುನಾವಣೆಯಲ್ಲಿ BJP ಅಭ್ಯರ್ಥಿಗೆ JDS ಬೆಂಬಲ!

ಮಹತ್ವದ ನಿರ್ಧಾರ ಕೈಗೊಳ್ಳುವ ಮೊದಲು ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಹೇಳಿದರು. 

ದ್ರೌಪದಿ ಮುರ್ಮುಗೆ ಜೆಡಿಎಸ್​ ಬೆಂಬಲ

ದ್ರೌಪದಿ ಮುರ್ಮುಗೆ ಜೆಡಿಎಸ್​ ಬೆಂಬಲ

  • Share this:
ಬೆಂಗಳೂರು, ಜು. 15: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (NDA Candidate Draupadi Murmu)  ಅವರನ್ನು ಬೆಂಬಲಿಸಲು ಜೆಡಿಎಸ್ (JDS)  ತೀರ್ಮಾನಿಸಿದೆ. ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿರುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ (Bandeppa Kashempur) ತಿಳಿಸಿದರು

ಈ ಮಹತ್ವದ ನಿರ್ಧಾರ ಕೈಗೊಳ್ಳುವ ಮೊದಲು ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.

‘ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು’ಎಂದು ಕಾಶೆಂಪೂರಿ ಮಾಹಿತಿ ನೀಡಿದರು.

ಇದನ್ನೂ ಓದಿ: PSI Recruitment Scam: ಎಡಿಜಿಪಿ ಅಮೃತ್ ಪೌಲ್​ಗೆ ನ್ಯಾಯಾಂಗ ಬಂಧನ

ಆದಿವಾಸಿ ಮಹಿಳೆ ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆ

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಅವರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಐತಿಹಾಸಿಕ ಒತ್ತು ನೀಡಿದ್ದರು. ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ದ್ರೌಪದಿ ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ಕಾಶೆಂಪೂರ್ ತಿಳಿಸಿದ್ದಾರೆ.

ಬೆಂಬಲ ಕೇಳಿದ್ದರಿಂದ ಕೊಟ್ಚದ್ದೇವೆ..!

ಎನ್’ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ನಮ್ಮ ಪಕ್ಷದ ವರಿಷ್ಠ ನಾಯಕರಾದ ಹೆಚ್.ಡಿ. ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ಬೆಂಗಳೂರಿಗೆ ಬಂದಾಗಲೂ ದೇವೇಗೌಡರು ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುರ್ಮು ಭೇಟಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ ಎಂದು ಬಂಡೆಪ್ಪ ಕಾಶೆಂಪೂರ್ ವಿವರಿಸಿದರು.

ಫೋಟೋ ವಿಡಿಯೋ ಬಗ್ಗೆ ಹೆದರಿಕೆ ಯಾಕೆ?

ಸರಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ನಿಷೇಧ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್‌ ಅವರು, ನಾವು ಸರಿಯಾಗಿದ್ದರೆ ಫೋಟೊ ವಿಡಿಯೋಗೆ ಯಾಕೆ ಹೆದರಬೇಕು? ಹೀಗೆ ನಿಷೇಧ ಮಾಡಿದ್ರೆ 40% ಆರೋಪ ನಿಜ ಆಗುತ್ತದೆ. ಸರಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ? ಆ ಆದೇಶವನ್ನು  ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಜನತಾಮಿತ್ರ ಸಮಾವೇಶ ಮುಂದಕ್ಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇದೇ ತಿಂಗಳು ೧೭ರಂದರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಅವರು ಬಂಡೆಪ್ಪ ಅವರು ತಿಳಿಸಿದರು.

ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾಶೆಂಪೂರ್ ಅವರು, ನಾವು ಜನರ ಉತ್ಸವ ಮಾಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಆದರೆ ಇವತ್ತು ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು  ಹೇಳಿ ಜನರ ಮುಂದೆ ಹೋಗುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: Justice UU Lalit: ಮಕ್ಕಳೇ ಬೆಳಗ್ಗೆ 7ಕ್ಕೆ ಶಾಲೆಗೆ ಹೋಗ್ತಾರೆ, 9 ಗಂಟೆಗೂ ಕೋರ್ಟ್ ತೆರೆಯಲ್ಲ ಏಕೆ?

ಬಿಜೆಪಿಯವರಿಗೆ ಗಾಬರಿ ಯಾಕೆ?

ಇದೇ ಡಿಸೆಂಬರ್’ನಲ್ಲಿ ಎಲೆಕ್ಷನ್ ಆಗಬಹುದು ಎಂದು ಹೇಳುತ್ತಿದ್ದಾರೆ‌. ನಾವು ಚುನಾವಣಾ ತಯಾರಿಯಲ್ಲಿ  ತೊಡಗಿದ್ದೇವೆ.  ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಗಾಬರಿ ಇಲ್ಲ, ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್ ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ನಾವು ಸಿದ್ದರಿದ್ದೇವೆ ಎಂದು ಕಾಶೆಂಪೂರ್ ಹೇಳಿದರು.
Published by:Pavana HS
First published: