ಎರಡು ಬೃಹತ್​ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ ಬೆಂಗಳೂರು; ತಂಡೋಪ ತಂಡವಾಗಿ ಬರುತ್ತಿದ್ದಾರೆ ರೈತರು

ಎರಡು ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

Rajesh Duggumane | news18-kannada
Updated:October 10, 2019, 8:56 AM IST
ಎರಡು ಬೃಹತ್​ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ ಬೆಂಗಳೂರು; ತಂಡೋಪ ತಂಡವಾಗಿ ಬರುತ್ತಿದ್ದಾರೆ ರೈತರು
ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ರೈತರು
  • Share this:
ಬೆಂಗಳೂರು(ಅ.10): ಇಂದು ಬೆಂಗಳೂರು ಎರಡು ಬೃಹತ್​ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ. ರೈತರ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಜೆಡಿಎಸ್ ಮತ್ತು ರೈತ ಸಂಘ ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿವೆ. ಒಂದೇ ಮಾರ್ಗದಲ್ಲಿ ಎರಡು ಬೃಹತ್​ ಪ್ರತಿಭಟನಾ ಮೆರವಣಿಗೆಗಳು ನಡೆಯುವುದರಿಂದ ಸಾಕಷ್ಟು ಜನರು ಸೇರುವ ಸಾಧ್ಯತೆ ಇದೆ.

ಹೆಚ್.ಡಿ. ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಆನಂದ್ ರಾವ್ ಸರ್ಕಲ್ ಬಳಿಯ ಮೌರ್ಯ ಪ್ರತಿಮೆಯಿಂದ ಫ್ರೀಡಂ ಪಾರ್ಕ್​ವರೆಗೂ ಮೆರವಣಿಗೆ ನಡೆಯಲಿದೆ. ಈ ರ್ಯಾಲಿ ಮೌರ್ಯ ಸರ್ಕಲ್​ನಿಂದ ಶೇಷಾದ್ರಿ ರಸ್ತೆ, ಕಾಳಿದಾಸ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಆವರಣ ಪ್ರವೇಶಿಸಲಿದೆ.

ರೈತ ಸಂಘ ಆಯೋಜಿಸಿರುವ ಮೆರವಣಿಗೆಯಲ್ಲಿ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ ಆನಂದರಾವ್ ಮೇಲ್ಸೇತುವೆ, ಶೇಷಾದ್ರಿ ರಸ್ತೆ, ಕಾಳಿದಾಸ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಪ್ರವೇಶಿಸುವ ಯೋಜನೆ ಇದೆ.

ಈಗಾಗಲೇ ರಾಜ್ಯದ ನಾನಾ ಕಡೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮಂಡ್ಯ, ಮದ್ದೂರು, ಮೈಸೂರು, ತುಮಕೂರು ಸೇರಿ ನಾನಾ ಭಾಗಗಳಿಂದ ರೈತರು ರೈಲನ್ನೇರಿ ಬರುತ್ತಿದ್ದಾರೆ. ಎರಡು ಪ್ರತಿಭಟನೆ ಸೇರಿ 10 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ಎರಡು ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಇಂದು 2 ಬೃಹತ್ ಪ್ರತಿಭಟನಾ ಮೆರವಣಿಗೆ; ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಭೀತಿ

ಪ್ರತಿಭಟನೆ ಏಕೆ?:ಆಗಸ್ಟ್​ ತಿಂಗಳಿನಲ್ಲಿ ರಾಜ್ಯಾದ್ಯಂತ ಭಾರೀ ಪ್ರವಾಹ ಉಂಟಾಗಿತ್ತು. ಆದರೆ, ಕೇಂದ್ರ ಸರ್ಕಾರ ಮಾತ್ರ ಯಾವುದೇ  ಪರಿಹಾರ ಬಿಡುಗಡೆ ಮಾಡಿರಲಿಲ್ಲ. ರಾಜ್ಯ ಸರ್ಕಾರದ ಬಳಿ ನೆರೆ ಪರಿಹಾರ ನೀಡುವಂತೆ ಕೇಳಿದರೆ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು ಮಾಡಿದ್ದರು. ವಿಚಿತ್ರ ಎಂದರೆ ಕೇಂದ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಈ ಮಧ್ಯೆ ಬಿಹಾರದಲ್ಲಿ ಪ್ರವಾಹ ಉಂಟಾಗಿತ್ತು. ತಕ್ಷಣಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಪರಿಹಾರವನ್ನೂ ಘೋಷಣೆ ಮಾಡಿತ್ತು. ಇದು, ರಾಜ್ಯದ ಜನರನ್ನು ಕೆರಳಿಸಿತ್ತು. ಈ ಬಗ್ಗೆ ಆಕ್ರೋಶ ಹೊರ ಹಾಕಿದ ನಂತರ ಕೇಂದ್ರ ಮಧ್ಯಂತರ ಪರಿಹಾರ ಎಂದು 1,200 ಕೋಟಿ ರೂ. ನೀಡಿತ್ತು. ಈಗ ಇದು ವಿಪಕ್ಷ ಹಾಗೂ ರೈತರನ್ನು ಕೆರಳಿಸಿದೆ.

ಕಬ್ಬು ಬಾಕಿ, ಮಹದಾಯಿ ನದಿ ವಿವಾದ ಬಗೆಹರಿಸಬೇಕು ಎನ್ನುವ ವಿಚಾರ ಸೇರಿ ಹಲವು ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ. ಈ ಎಲ್ಲ ವಿಚಾರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ನಿರ್ಲ್ಯಕ್ಷ ಮಾಡುತ್ತಿದೆ ಎಂದು ಆರೋಪಿಸಿದೆ.

First published: October 10, 2019, 8:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading